ಜಾರಕಿಹೊಳಿ ಹಿಂದೂ ಹೇಳಿಕೆಯನ್ನು ಖಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ

Published : Nov 08, 2022, 05:13 PM IST
ಜಾರಕಿಹೊಳಿ ಹಿಂದೂ ಹೇಳಿಕೆಯನ್ನು ಖಂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಸಾರಾಂಶ

ಶಾಸಕ ಸತೀಶ ಜಾರಕಿಹೊಳಿ ಹಿಂದೂ ಪದದ ಬಗ್ಗೆ ನೀಡಿರುವ ಹೇಳಿಕೆಗೆ  ಸಿ.ಎಂ.ಬಸವರಾಜ ಬೊಮ್ಮಾಯಿ ಅವರು ಕೂಡ ಖಂಡಿಸಿದ್ದಾರೆ. ಸಿದ್ದರಾಮಯ್ಯ, ರಾಹುಲ್ ಈ ವಿಷಯವನ್ನು ಏಕೆ ಖಂಡಿಸಿಲ್ಲ. ಪಕ್ಷದಿಂದ ಹೊರಗೆ ಹಾಕಲು ಆಗಲ್ಲವೇ ಎಂದಿದ್ದಾರೆ.

ವಿಜಯಪುರ (ನ.8): ಶಾಸಕ ಸತೀಶ ಜಾರಕಿಹೊಳಿ ಹಿಂದೂ ಪದದ ಬಗ್ಗೆ ನೀಡಿರುವ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, ಗದಗ ಜಿಲ್ಲೆಯ ಶಿರಹಟ್ಟಿಯ ಜನಸಂಕಲ್ಪ ಯಾತ್ರೆಯಲ್ಲಿ ಸಿ.ಎಂ. ಬಸವರಾಜ ಬೊಮ್ಮಾಯಿ ಅವರು ಕೂಡ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿದ್ದಾರೆ. ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗದವರಿಗೆ ಕಾಂಗ್ರೆಸ್ ಮಾರಕ. ದೇಶದ ಪರಂಪರೆ ಅವಮಾನ ಮಾಡುತ್ತೀರಾ ? ವೋಟಿಗಾಗಿ ಏನ್ ಬೇಕಾದ್ರೂ ಮಾಡ್ತೀರಿ. ಈಗ ಚರ್ಚೆ ಮಾಡಿ ಅಂತೀರಿ. ನಾಚಿಕೆ ಆಗಲ್ಲವೇ ನಿಮಗೆ ? ಸಿದ್ದರಾಮಯ್ಯ, ರಾಹುಲ್ ಈ ವಿಷಯವನ್ನು ಏಕೆ ಖಂಡಿಸಿಲ್ಲ. ಪಕ್ಷದಿಂದ ಹೊರಗೆ ಹಾಕಲು ಆಗಲ್ಲವೇ, ಇದು ರಾಷ್ಟ್ರೀಯ ಪಕ್ಷವೇ. ದೇಶಕ್ಕೆ ಧಕ್ಕೆಯಾದರೆ ಹಿಂದೂಗಳ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ನಾವು ಸುಮ್ಮನಿರಲ್ಲ. ಎಲ್ಲರಿಗಾಗಿ ಅಭಿವೃದ್ಧಿ ಅಂತಾ ಪಿಎಂ ಮೋದಿ ಹೇಳಿದ್ದಾರೆ. ಎಲ್ಲರೂ ನಮ್ಮವರೂ ಅಂತಾ ಬಿಜೆಪಿ ನಡೆದುಕೊಳ್ಳುತ್ತಿದೆ. ಒಡೆದು ಆಳುವ ನೀತಿ ಕಾಂಗ್ರೆಸ್ ಮಾಡುತ್ತಾ ಬಂದಿದೆ. ಸಿದ್ದರಾಮಯ್ಯ ಧರ್ಮವನ್ನು ಒಡೆಯಲು ಹೋಗಿದ್ದರು. ಅಲ್ಪ ಸಂಖ್ಯಾತರಿಗೆ ಏನು ಮಾಡಿದ್ದಾರೆ. ಬಾವಿಯಲ್ಲಿ ಹಾಕಿ. ಕತ್ತಲೆಯಲ್ಲಿ ಇಟ್ಟಿದ್ದಾರೆ 5 ವರ್ಷಕ್ಕೊಮ್ಮೆ ಹಗ್ಗಾ ಹಾಕಿ ಜಗ್ಗಿಕೊಂಡು ಮತ ಪಡೆದು ಮರಳಿ ಬಾವಿಯಲ್ಲಿ ಬಿಡುತ್ತಾರೆ.‌  ವಕ್ಫ್ ಆಸ್ತಿಯನ್ನ ಕಬಳಿಸಿದ್ದು ಯಾರು. ಮುಸಲ್ಮಾನರ ಆಸ್ತಿಯನ್ನ ಕಬಳಿಸಿದವರಿಗೆ ಶೀಘ್ರ ಉಗ್ರ ಕ್ರಮ ಕೈಗೊಳ್ಳಲಾಗುವುದು. ಎಲ್ಲ ಅಲ್ಪಸಂಖ್ಯಾತ ಮಕ್ಕಳಿಗೆ ಭಾಗ್ಯ ಲಕ್ಷ್ಮೀ ಯೋಜನೆ ಜಾರಿ ಯಾಗಿದೆ. 10 ಎಚ್ ಪಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಗಿದೆ‌ ಎಂದರು.

ಇನ್ನು  ಹಾವೇರಿಯ ಮೊಟೆಬೆನ್ನೂರು ಹೆಲಿಪ್ಯಾಡ್ ನಲ್ಲಿ ಇದೇ ವಿಚಾರಚಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ. ಇದು ಕೊಳಕು ಮನಸ್ಸಿನ ಸ್ಥಿತಿ. ಒಂದು ಸಮಗ್ರವಾಗಿ ಇರುವ ಪರಂಪರೆ  ಬಗ್ಗೆ ಪದೇ ಒದೇ ಕೆಣಕುವುದು, ಅವಮಾನ ಅಪಮಾನ ಮಾಡೋದು ಎಷ್ಟು ಸರಿ? ಅಲ್ಲಿ ಅವರ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಮಾಡ್ತಿದ್ದಾರೆ. ಆದರೆ ಇಲ್ಲಿ ಇಂಥ ಹೇಳಿಕೆ ಕೊಟ್ಟು ಇವರು ಭಾರತ್ ತೋಡೊ  ಮಾಡ್ತಿದ್ದಾರೆ. ಇವರ ಹೇಳಿಕೆಯಿಂದ ಎಷ್ಟೊಂದು ಜನಕ್ಕೆ ನೋವಾಗಿದೆ. ಇದು ಭಾರತ ಒಡೆಯುವ ಸಂಚಿನ ಮನಸ್ಥಿತಿ. ಅವರ  ಆಡಳಿತ, ಅವರ ನೀತಿಯಿಂದಲೇ ದೇಶಕ್ಕೆ ಆಂತರಿಕ ದಕ್ಕೆ ಬಂದಿದೆ. ಅರಾಜಕತೆ ಹುಟ್ಟಿಸಿ ಅಧಿಕಾರಕ್ಕೆ ಬರುವ ಮನಸ್ಥಿತಿ ಇವರದ್ದು. ಯಾಕೆ ಸಿದ್ದರಾಮಯ್ಯ ಇನ್ನೂ ಮಾತಾಡಿಲ್ಲ?  ಇದಕ್ಕೆ ರಾಹುಲ್ ಗಾಂಧಿ ಅಭಿಪ್ರಾಯ ಏನು? ಕಾರ್ಯಾದ್ಯಕ್ಷರ ಹೇಳಿಕೆಗೆ ಕ್ರಮ ಜರುಗಿಸುತ್ತಾರಾ?  ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಹಿಂದೂ ಪದದ ಅರ್ಥ ಅಶ್ಲೀಲ ಎಂದ ಜಾರಕಿಹೊಳಿಗೆ, ಮುತಾಲಿಕ್ ಕ್ಲಾಸ್, ಕಾಂಗ್ರೆಸ್ ಖಂಡನೆ

ರಾಜ್ಯಾದ್ಯಂತ ಸಮಾವೇಶ ಮಾಡುತ್ತಿದ್ದೇವೆ. ನಮಗೆ ಜನರಿಂದ ಅಭೂತ ಪೂರ್ವ ಬೆಂಬಲ ಸಿಗುತ್ತಿದೆ. ಜನರ ಉತ್ಸಾಹ ಇಮ್ಮಡಿಯಾಗಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ತರೋ ಸಂಕಲ್ಪ ಜನ ಮಾಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಗೆ ನಮ್ಮ ಸರ್ಕಾರಗಳ ಕಾರ್ಯಕ್ರಮ ಮುಟ್ಟಿಸುತ್ತಿದ್ದೇವೆ ಎಂದಿದ್ದಾರೆ.

SATISH JARKIHOLI: ಜಾರಕಿಹೊಳಿ ಹೇಳಿಕೆ ವಿನಾಶ ಕಾಲೇ ವಿಪರೀತ ಬುದ್ದಿ; ಬಿಜೆಪಿ ಉಸ್ತುವಾರಿ ಅರುಣಸಿಂಗ್ ಖಂಡನೆ

ಬಿಜೆಪಿಯನ್ನು ಮನೆಗೆ ಕಳಿಸುವ ಸಂಕಲ್ಪ ಜನ ಮಾಡಿದ್ದಾರೆ ಎಂಬ ಸಿದ್ದರಾಮಯ್ಯ ಟೀಕೆ ವಿಚಾರಕ್ಕೆ ಸಂಬಂಧಿಸಿ  ಸಿದ್ದರಾಮಯ್ಯ ಹೇಳಿದ್ದು ಯಾವುದಾಗಿದೆ? ಅವರಪ್ಪನಾಣೆ  ಯಡಿಯೂರಪ್ಪ ಸಿಎಂ ಆಗಲ್ಲ ಅಂದಿದ್ರು. ಅವರಪ್ಪನಾಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಅಂದಿದ್ರು. ಯಾವುದಾದರೂ ಆಗಿದೆಯಾ? ಮತ್ತೆ ನಾನೇ ಸಿಎಂ ಅಂದರು ಆದರೆ ಸಿಎಂ ಆದರಾ? ಅವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಲ್ಲ.  ನೀವೂ ತಲೆ ಕೆಡಿಸಿಕೊಳ್ಳಬೇಡಿ. ಸಿದ್ದರಾಮಯ್ಯ ಅವರು ಹಿಂದೆ ಜನಾಶೀರ್ವಾದ ಯಾತ್ರೆ ಮಾಡಿದರು. ಆದರೆ ಜನ ಅವರಿಗೆ ಆಶೀರ್ವಾದ ಮಾಡಲಿಲ್ಲ.  ಅವರ ದುರಾಡಳಿತದಿಂದ ಜನ ಅವರನ್ನು ತಿರಸ್ಕಾರ ಮಾಡಿದರು ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಆಲೂಗಡ್ಡೆಗೆ ಮೊಳಕೆ ಬಂದರೆ ತಿನ್ನಬಹುದಾ? ತಜ್ಞರ ಎಚ್ಚರಿಕೆ ಏನು, ಯಾವುದು- ಯಾರಿಗೆ ಅಪಾಯ?