ಕೊರೋನಾ ಭೀತಿ: ರಾಜ್ಯದಲ್ಲಿ ನೈಟ್ ಕರ್ಫ್ಯೂ, ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್‌ಡೌನ್

By Suvarna NewsFirst Published Aug 6, 2021, 3:41 PM IST
Highlights

* ಕರ್ನಾಟಕದಲ್ಲಿ ಕೊರೋನಾ ಮೂರನೇ ಅಲೆ ಆತಂಕ
* ರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಳ
* ಕರ್ನಾಟಕದಲ್ಲಿ ಹೈ ಅಲರ್ಟ್

ಬೆಂಗಳೂರು, (ಆ.06): ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಭೀತಿ ಶುರುವಾಗಿದೆ. ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರ ಸೋಂಕು ಕರ್ನಾಟಕದಲ್ಲಿ ಆತಂಕ ಉಂಟುಮಾಡಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಆ.06) ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು  ಸಭೆ ನಡೆಸಿದರು.

Latest Videos

ದೀರ್ಘಾವಧಿ ಕೋವಿಡ್‌ ಬಗ್ಗೆ ಡಬ್ಲ್ಯುಎಚ್‌ಒ ಕಳವಳ

ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ.

1. ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನ. (ಕಲಬುರಗಿ, ಮೈಸೂರು, ಚಾಮರಾಜನಗರ, ವಿಜಯಪುರ, ಬೆಳಗಾವಿ, ಬೀದರ್, ದಕ್ಷಿಣ ಕನ್ನಡ ಹಾಗೂ ಕೊಡಗು)

2. ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲು ತೀರ್ಮಾನ.

3. ಶಾಲೆಗಳನ್ನು ಎರಡು ಹಂತದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಮೊದಲನೇ ಹಂತದಲ್ಲಿ ನಿಬಂಧನೆಗಳಿಗೊಳಪಟ್ಟಂತೆ, ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ತೀರ್ಮಾನ; ಮಾರ್ಗಸೂಚಿಗಳ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು. 

4. ಕೋವಿಡ್ ತೀವ್ರತೆ ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿ ಶಾಲೆ ಆರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು

5. ರಾಜ್ಯದಲ್ಲಿ ರಾತ್ರಿ ಕರ್ಫ್ಯೂ (ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ) ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಸೂಚಿಸಲಾಯಿತು. 

"

"

click me!