
ಉಡುಪಿ, (ಆ.13): ಜೀವವನ್ನು ಉಳಿಸಿ, ಹೊಸ ಜೀವನ ಕಟ್ಟಿ ಕೊಡುವ ಅಂಗಾಂಗ ದಾನದ ಮಹತ್ವ ಮತ್ತು ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ಎಲ್ಲರೂ ಪ್ರಯತ್ನಿಸೋಣ. ಈ ವಿಶ್ವ ಅಂಗಾಂಗ ದಾನ ದಿನದಂದು, ಅಂಗಾಂಗ ದಾನದ ಬಗ್ಗೆ ಇರುವ ಸಂಶಯಗಳನ್ನು, ಹಿಂಜರಿಕೆಯನ್ನು ನಿವಾರಿಸುವ ದೃಢ ಸಂಕಲ್ಪ ತಾಳೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದ್ದಾರೆ.
ಉಡುಪಿಯಲ್ಲಿ ಇಂದು (ಆ.13) ವಲ್ಡ್ ಆರ್ಗನ್ ಡೊನೇಶನ್ ಡೇ ಬಗ್ಗೆ ಪ್ರತಿಕ್ರಿಯಿಸಿದ ಅವರು,. ಇತ್ತೀಚೆಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಜೀವ ಉಳಿಸಬಹುದು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ ಎಂದು ಹೇಳಿದರು.
16 ಕೋಟಿ ಮೊತ್ತದ ಚಿಕಿತ್ಸೆ, ಅಸಂಖ್ಯಾತ ಮಂದಿಯ ಪ್ರಾರ್ಥನೆ: ಕರಗಲಿಲ್ಲ ಯಮರಾಯ!
ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು. ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ. ಕಿಡ್ನಿ, ಹಾರ್ಟ್, ಲಿವರ್ ಇನ್ನೊಬ್ಬರ ಉಪಯೋಗಕ್ಕೆ ಬರಲಿ ಎಂದರು.
ಇನ್ನು ವೇಳೆ ಕೊರೋನಾ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವ ಬಗ್ಗೆ ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಬೆಂಗಳೂರಿಗೆ ತೆರಳಿದ ತಕ್ಷಣ ತಜ್ಞರ ಜೊತೆ ಮಾತನಾಡುವೆ. ತಜ್ಞರ ವರದಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ