Karnataka Breaking News ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ

Suvarna News   | Asianet News
Published : Jan 10, 2022, 07:53 PM ISTUpdated : Jan 10, 2022, 09:37 PM IST
Karnataka Breaking News  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ

ಸಾರಾಂಶ

* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಕೊರೋನಾ ಪಾಸಿಟಿವ್ * ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ ಬೊಮ್ಮಾಯಿ * ಸಹದ್ಯೋಗಿ ಆರ್ ಅಶೋಕ್ ಅವರಿಗೆ ಕೊರೋನಾ ತಗುಲಿತ್ತು.

ಬೆಂಗಳೂರು, (ಜ.10): ಸಚಿವ ಆಶೋಕ್ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೂ ಕೊರೋನಾ ಪಾಸಿಟಿವ್ (Corona Positive ದೃಢಪಟ್ಟಿದೆ.

Minister R Ashoka Covid positive: ಸಚಿವ ಆರ್ ಅಶೋಕ್ ಗೆ ಕೊರೊನಾ ದೃಢ, ಆಸ್ಪತ್ರೆಗೆ ದಾಖಲು

ಈ ಬಗ್ಗೆ ಸ್ವತಃ ಬಸವರಾಜ ಬೊಮ್ಮಾಯಿ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಖಚಿತಪಡಿಸಿದ್ದು, ಸಂಪರ್ಕಿತರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

ನನ್ನ ಆರೋಗ್ಯ ಚೆನ್ನಾಗಿದೆ, ನಾನು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ ಆಗಿ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.ನನ್ನ ಆರೋಗ್ಯ ಚೆನ್ನಾಗಿದೆ, ನಾನು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ ಆಗಿ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಸೋಮವಾರ ಬೆಳಗ್ಗೆ ಬೊಮ್ಮಾಯಿ ತಮ್ಮ ಆರ್ ಟಿ ನಗರ ನಿವಾಸದಲ್ಲಿ ಕೋವಿಡ್ RTPCR ಟೆಸ್ಟ್  ಮಾಡಿಸಿಕೊಂಡಿದ್ದು, ವರದಿಯಲ್ಲಿ ಪಾಸಿಟಿವ್ ಅಂತ ಬಂದಿದೆ.

ಸಧ್ಯಕ್ಕೆ ಸಿಎಂ ಆರೋಗ್ಯವಾಗಿದ್ದಾರೆ ಯಾವುದೇ ಸಮಸ್ಯೆ ಇಲ್ಲ. ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ನಾಳೆಯ(ಮಂಗಳವಾರ) ಬೆಂಗಳೂರು ಸಿಟಿ ರೌಂಡ್ಸ್ ರದ್ದಾಗಿದೆ. ಇನ್ನೂ ಸಿಎಂ ಜೊತೆ ಇರುವ ಸಿಬ್ಬಂದಿಗಳು ಮತ್ತು ಸಿಎಂ ಭೇಟಿಯಾದ ನಾಯಕರುಗಳಿಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಇಂದು(ಜ.10) ಹಿರಿಯ ಸಾಹಿತಿ ಪ್ರೋ. ಚಂದ್ರಶೇಖರ ಪಾಟೀಲ ಅವರ ಅಂತಿಮ ದರ್ಶನಕ್ಕೆ ಹೋಗಿದ್ದರು. ಅಲ್ಲದೇ ಬೆಂಗಳೂರಿನಲ್ಲಿ ಬೂಸ್ಟರ್ ಡೋಸ್‌ ಲಸಿಕೆಗೆ ಚಾಲನೆ ನೀಡಿದ್ದರು. ಇದರಿಂದ ಬೊಮ್ಮಾಯಿ ಅವರ ಸಂಪರ್ಕಕ್ಕೆ ಬಂದವರಿಗೆ ಆತಂಕ ಮೂಡಿಸಿದೆ.

ದೇಶಾದ್ಯಂತ ಕೊರೊನಾ ವೈರಸ್ ಆರ್ಭಟ ತೀವ್ರಗೊಳ್ಳುತ್ತಿದೆ. ಕೋವಿಡ್ ಪಾಸಿಟಿವಿಟಿ ಪ್ರಮಾಣ ಗಣನೀಯವಾಗಿ ಏರಿಕೆ ಆಗುತ್ತಿದೆ. ಗಣ್ಯಾತಿಗಣ್ಯರಿಗೂ ಕೊರೊನಾ ಸೋಂಕು ತಗುಲುತ್ತಿದೆ.

ಬಿಹಾರ್ ಸಿಎಂ ನಿತೀಶ್ ಕುಮಾರ್ (Nitish Kumar) ಹಾಗೂ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath Singh) ಅವರಿಗೂ ಇಂದು(ಸೋಮವಾರ) ಕೊರೋನಾ ದೃಢಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.

ಈಗಾಗಲೇ ಸಚಿವ ಆರ್ ಅಶೋಕ್(R Ashok)  ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರಿಗೂ ಕೊರೋನಾ ದೃಢಪಟ್ಟಿದೆ. ಅಶೋಕ್, ಜ್ವರ, ಶೀತ ಸುಸ್ತಿನಿಂದ ಬಳಲುತ್ತಿರುವ ಅಶೋಕ್  ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು "ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿದ್ದೇನೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಬರೆದುಕೊಂಡಿದ್ದಾರೆ. ಜನವರಿ 6ರ ಗುರುವಾರ ನಡೆದ  ಸಚಿವ  ಸಂಪುಟ ಸಭೆಗೂ ಅಶೋಕ್ ಗೈರಾಗಿದ್ದರು. ಎರಡು ದಿನದ ಹಿಂದೆ ಅಂದರೆ ಜನವರಿ 5 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರೊಂದಿಗೆ ಕಚೇರಿಯಲ್ಲಿ ಕೊರೋನಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಈಗಾಗಲೇ ಸಚಿವ ಆರ್ ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಕೊರೋನಾ ದೃಢಪಟ್ಟಿದೆ. ಅಶೋಕ್, ಜ್ವರ, ಶೀತ ಸುಸ್ತಿನಿಂದ ಬಳಲುತ್ತಿರುವ ಅಶೋಕ್  ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು "ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿದ್ದೇನೆ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ" ಎಂದು ಬರೆದುಕೊಂಡಿದ್ದಾರೆ. ಜನವರಿ 6ರ ಗುರುವಾರ ನಡೆದ  ಸಚಿವ  ಸಂಪುಟ ಸಭೆಗೂ ಅಶೋಕ್ ಗೈರಾಗಿದ್ದರು. ಎರಡು ದಿನದ ಹಿಂದೆ ಅಂದರೆ ಜನವರಿ 5 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಸಚಿವರೊಂದಿಗೆ ಕಚೇರಿಯಲ್ಲಿ ಕೊರೋನಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ