
ಬೆಂಗಳೂರು(ಆ.03) ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪಗೆ ಕೊರೋನಾ ಸೋಂಕು ಇರುವುದು ದೇಢವಾದ ಬೆನ್ನಲ್ಲೇ ಅವರನ್ನು ಭೇಟಿಯಾಗಿದ್ದವರೆಲ್ಲರಿಗೂ ಕೊರೋನಾ ಟೆಸ್ಟ್ ಮಾಡಲಾಗತ್ತಿದೆ. ಅಲ್ಲದೇ ಅವರನ್ನು ಕೆಲ ದಿನಗಳಿಂದ ಸಂಪರ್ಕಿಸಿದವರನ್ನು ಕ್ವಾರಂಟೈನ್ ಕೂಡಾ ಮಾಡಲಾಗಿದೆ. ಸದ್ಯ ಟೆಸ್ಟ್ ವರದಿ ಬಂದಿದ್ದು, ಬಿಎಸ್‌ವೈ ಪುತ್ರನಿಗೆ ಕೊರೋನಾ ನೆಗೆಟಿವ್ ಬಂದರೆ, ಮಗಳಿಗೆ ಪಾಸಿಟಿವ್ ಬಂದಿದೆ.
"
ಭಾನುವಾರ ಟ್ವೀಟ್ ಒಂದನ್ನು ಮಾಡಿದ್ದ ಸಿಎಂ ಯಡಿಯೂರಪ್ಪ ತಮಗೆ ಕೊರೋನಾ ಸೋಂಕು ತಗುಲಿರುವುದನ್ನು ದೃಢಪಡಿಸಿದ್ದರು. ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೀಗ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದವರ ಕೊರೋನಾ ವರದಿ ಬಂದಿದ್ದು, ಮಗಳು ಪದ್ಮಾವತಿಗೂ ಕೊರೋನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಅವರೂ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇನ್ನು, ಸಿಎಂ ಮಗ ವಿಜಯೇಂದ್ರ ಮತ್ತು ಅವರ ಪಿಎಗೆ ನೆಗೆಟಿವ್ ಬಂದಿದೆ. ಸಿಎಂ ಒಎಸ್ಡಿ ವಿಜಯ ಮಹಂತೇಶ್ ಅವರಿಗೂ ನೆಗೆಟಿವ್ ಬಂದಿದೆ. ಇನ್ನೂ ಕೆಲವರ ರಿಪೋರ್ಟ್ ಇವತ್ತು ಬರಬೇಕಿದೆ. ಸದ್ಯ, ವಿಜಯೇಂದ್ರ ಅವರು ಒಂದು ವಾರ ಸೆಲ್ಫ್ ಕ್ವಾರಂಟೈನ್ನಲ್ಲಿ ಇರಲಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ