ರಾಜ್ಯದಲ್ಲಿ ಮತ್ತಷ್ಟು ಲಾಕ್‌ಡೌನ್‌ ಸಡಿಲಿಕೆ, ಬಸ್ ಓಡಾಡುತ್ತವೆ, ಕಂಡೀಷನ್ಸ್ ಅಪ್ಲೈ

By Suvarna News  |  First Published Jun 19, 2021, 7:23 PM IST

* ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದ ಸಭೆ ಅಂತ್ಯ
*  ರಾಜ್ಯದಲ್ಲಿ ಮತ್ತಷ್ಟು ಲಾಕ್‌ಡೌನ್‌ ಸಡಿಲಿಕೆ
* ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ

 


ಬೆಂಗಳೂರು, (ಜೂನ್.19): ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು (ಜೂನ್.19) ನಡೆದ ಸಭೆ ಅಂತ್ಯವಾಗಿದ್ದು, 16 ಜಿಲ್ಲೆಗಳಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆಗೆ ತೀರ್ಮಾನಿಸಲಾಗಿದೆ. ಕೊರೋನಾ ಪಾಸಿಟಿವಿಟಿ ಆಧಾರದ ಮೇಲೆ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ.

ಉತ್ತರ ಕನ್ನಡ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ರಾಮನಗರ, ಹಾವೇರಿ, ರಾಯಚೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ಈ ಜಿಲ್ಲೆಗಳಲ್ಲಿ ಎಲ್ಲಾ ಅಂಗಡಿಗಳನ್ನು ತೆರೆಯಲು ಬೆಳಗ್ಗೆ 5ರಿಂದ ಸಂಜೆ 6 ಗಂಟೆ ವರೆಗೆ ಅವಕಾಶ ನೀಡಲಾಗಿದೆ. 

Tap to resize

Latest Videos

ನೌಕರರ ಹಾಜರಾತಿ ಬಗ್ಗೆ ಮಹತ್ವದ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಇನ್ನು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವ್ ದರ ಇದೆ. 13 ಜಿಲ್ಲೆಗಳಲ್ಲಿ 5-10 ಇದೆ. ಮೈಸೂರು ಜಿಲ್ಲೆಯಲ್ಲಿ 10ಕ್ಕಿಂತ ಹೆಚ್ಚು ಇದೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆ ಮಾಡಲಾಗುತ್ತಿದೆ. ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.  ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗೆ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು.

ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ ಎಂದು ವಿವರಿಸಿದರು. ಸಿಎಂ ಸುದ್ದಿಗೋಷ್ಠಿಯ ಮುಖ್ಯಾಂಶಗಳು ಈ ಕೆಳಗಿನಂತಿವೆ.

3 ನೇ ಅಲೆ ತಡೆಗೆ 3 T + ವ್ಯಾಕ್ಸಿನ್ ಸೂತ್ರ ರಚಿಸಿದ ಕೇಂದ್ರ 

ಸುದ್ದಿಗೋ‍ಷ್ಠಿಯ ಮುಖ್ಯಾಂಶಗಳು
• ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ. 

• ಶೇ 5 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.  

• ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ  ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ. 

• ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
• ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ  ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.  
• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.  
• ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ. 
• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.  
• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.  
• ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.  
• ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.  
• ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.  

ರಾಜ್ಯವ್ಯಾಪಿ ಅನ್ವಯವಾಗುವಂತೆ:
• ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.  
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.  
• ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

ಅನ್‌ಲಾಕ್‌ ಜಿಲ್ಲೆಗಳು
ರಾಯಚೂರು, ಕೊಪ್ಪಳ, ಕಲಬುರಗಿ, ರಾಮನಗರ, ಉತ್ತರ ಕನ್ನಡ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ರಾಮನಗರ, ಹಾವೇರಿ,ಬೀದರ್, ಬೆಳಗಾವಿ, ಕೋಲಾರ, ಯಾದಗಿರಿ ಹಾಗೂ ಬಾಗಲಕೋಟೆ.

click me!