
ಬೆಂಗಳೂರು(ಸೆ.30): ಬಾಬ್ರಿ ಮಸೀದಿ ಧ್ವಂಸ ಪ್ರಕರ ಸಂಬಂಧ ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಬಿಜೆಪಿ ಹಿರಿಯ ನಾಯಕರಾದ ಅಡ್ವಾಣಿ, ಜೋಷಿ ಸೇರಿ ಎಲ್ಲಾ 32 ಆರೋಪಿಗಳನ್ನು ದೋಷ ಮುಕ್ತಗೊಳಿಸಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಸತ್ಯಕ್ಕೆ ಜಯ ಆಗಿದೆ. ಅಡ್ವಾಣಿಯಂತಹ ಮಹಾನ್ ವ್ಯಕ್ತಿಗೆ ಇಂದು ನ್ಯಾಯ ಸಿಕ್ಕಿದೆ ಎಂದಿದ್ದಾರೆ.
"
ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಜೋಶಿ ಸೇರಿ ಎಲ್ಲಾ ಆರೋಪಿಗಳು ಖುಲಾಸೆ!
ಈ ಐತಿಹಾಸಿಕ ತೀರ್ಪಿನ ಬೆನ್ನಲ್ಲೇ ಸಂತಸ ವ್ಯಕ್ತಪಡಿಸಿರುವ ಬಿ. ಎಸ್, ಯಡಿಯೂರಪ್ಪ 'ಕೋರ್ಟ್ ಇದೊಂದು ಪೂರ್ವ ನಿಯೋಜಿತ ಕೃತ್ಯ ಅಲ್ಲ ಎಂದಿದೆ. ಸತ್ಯಕ್ಕೆ ಜಯ ಆಗಿದೆ. . ಈ ಹೋರಾಟದಲ್ಲಿ ನಾನು ಪ್ರತ್ಯಕ್ಷ ಸಾಕ್ಷಿ ಇದ್ದೆ. ಈ ತೀರ್ಪು ನನಗೆ ಸಂತಸ ತಂದಿದೆ, ಹೋರಾಟಗಾರರಿಗೆ ಯಾವತ್ತು ಅನ್ಯಾಯ ಆಗಲ್ಲ ಎಂದು ಸಾಬೀತಾಗಿದೆ ಎಂದಿದ್ದಾರೆ.
ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪು , ಕಾಂಗ್ರೆಸ್ ಕ್ಷಮೆ ಕೇಳಲಿ : ಸಿ.ಟಿ ರವಿ
ಇನ್ನು ಅಡ್ವಾಣಿ ಬಗ್ಗೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ಅಡ್ವಾಣಿ ಅವರ ಅಂದಿನ ಐತಿಹಾಸಿಕ ಭಾಷಣ ನಮಗೆಲ್ಲಾ ಪ್ರೇರಣೆ ಆಗಿತ್ತು. ಅಂತಹ ಮಹಾನ್ ವ್ಯಕ್ತಿಗೆ ಇಂದು ನ್ಯಾಯ ಸಿಕ್ಕಿದೆ. ಹೋರಾಟಗಾರರಿಗೆ ನ್ಯಾಯ ಶತಸಿದ್ಧ ಎನ್ನೋದು ಸಾಬೀತಾಗಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ