ಮೋದಿ ಭೇಟಿಯಾದ ಯಡಿಯೂರಪ್ಪ: 10 ನಿಮಿಷ ಚರ್ಚೆ

Published : Jul 16, 2021, 08:03 PM ISTUpdated : Jul 16, 2021, 08:05 PM IST
ಮೋದಿ ಭೇಟಿಯಾದ ಯಡಿಯೂರಪ್ಪ: 10 ನಿಮಿಷ ಚರ್ಚೆ

ಸಾರಾಂಶ

* ಪ್ರಧಾನಿ ನರೇಂದ್ರ ಮೋದಿ-ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ  * ದೆಹಲಿ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಭೇಟಿ * ಮೋದಿ ಜತೆ ಯಡಿಯೂರಪ್ಪ 10 ನಿಮಿಷ ಚರ್ಚೆ

ನವದೆಹಲಿ, (ಜು.16): ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು (ಶುಕ್ರವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದರು.  

ಕರ್ನಾಟಕ ಭವನದಿಂದ ತೆರಳಿದ ಯಡಿಯೂರಪ್ಪ ದೆಹಲಿ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಮೋದಿ ಅವರನ್ನು ಭೇಟಿಯಾದರು. ಈ ವೇಳೆ ಬಿಎಸ್‌ವೈ ಕರ್ನಾಟಕದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೋದಿ ಜತೆ ಚರ್ಚೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ನಡ್ಡಾ ಭೇಟಿ ಮಾಡ್ತೇನೆ ಎಂದ ಸಿಎಂ: ಸಂಚಲನ ಮೂಡಿಸಿದ ಬಿಎಸ್‌ವೈ ನಡೆ

ಮೋದಿ ಜತೆ  10 ನಿಮಿಷ ಚರ್ಚೆ ನಡೆಸಿ ಹೊರಬಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಕರ್ನಾಟಕದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ಮಾಡಿದೆ. ಮೇಕೆದಾಟು ಸೇರಿ ಎಲ್ಲ ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಹೆಚ್ಚಿನ ಅನುದಾನ ಕೇಳಿದ್ದೇನೆ ಎಂದು ಹೇಳಿದರು. 

ಸಕಾರಾತ್ಮಕವಾಗಿ ಸ್ಪಂದಿಸಿ ಎಲ್ಲದಕ್ಕೂ ಒಪ್ಪಿಗೆ ಕೊಟ್ಟಿದ್ದಾರೆ. ಪಿಎಂ ಸಭೆ ಬಗ್ಗೆ ವಿವರವಾಗಿ ನಾಳೆ (ಶನಿವಾರ)‌ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ನಾಯಕತ್ವ ಬದಲಾವಣೆ ಬಗ್ಗೆ ಪ್ರಶ್ನೆಗೆ ನಗುತ್ತಾ ಉತ್ತರಿಸಿದ ಬಿಎಸ್‌ವೈ, ನಾಯಕತ್ವ ಬದಲಾವಣೆ ಬಗ್ಗೆ ನಂಗೆ ಗೊತ್ತಿಲ್ಲ. ರಾತ್ರಿ ರಾಜ್ಯದ ಕೇಂದ್ರ ಮಂತ್ರಿಯಾಗಳನ್ನು ಭೇಟಿ ಮಾಡುತ್ತೇನೆ ಎಂದು ಹೇಳಿ ಕರ್ನಾಟಕ ಭವನಕ್ಕೆ ತೆರಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!