ನೀತಿ ಆಯೋಗದ ಸಭೆಯಲ್ಲಿ ಮೋದಿ ಮುಂದೆ ಕೆಲ ಮಹತ್ವದ ಬೇಡಿಕೆ ಇಟ್ಟ ಸಿಎಂ

By Suvarna NewsFirst Published Feb 20, 2021, 6:12 PM IST
Highlights

ನೀತಿ ಆಯೋಗದ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯಕ್ಕೆ ಸಂಬಂಧಿಸಿದಂತೆ ಕೆಲ ಬೇಡಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿಟ್ಟಿದ್ದಾರೆ. ಅವು ಇಂತಿವೆ.

ಬೆಂಗಳೂರು, (ಫೆ.20): ಪ್ರಧಾನಮಂತ್ರಿ ನೇತೃತ್ವದಲ್ಲಿ ಇಂದು (ಶನಿವಾರ) ನೀತಿ ಆಯೋಗದ ಆಡಳಿತ ಮಂಡಳಿಯ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪಾಲ್ಗೊಂಡಿದ್ದರು.

ಮೋದಿ ಜತೆಗಿನ ನೀತಿ ಆಯೋಗದ ಸಭೆಯಲ್ಲಿ ಬಿಎಸ್ ವೈ ಭಾಷಣದ ಮುಖ್ಯಾಂಶಗಳು

ಇನ್ನು ಈ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯಕ್ಕೆ ಸಂಬಂಧಿಸಿದಂತೆ ಕೆಲ ಬೇಡಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿಟ್ಟಿದ್ದಾರೆ. ಹಾಗಾದ್ರೆ, ಸಿಎಂ ಇಟ್ಟ ಬೇಡಿಕೆಗಳಾವುವು ಎನ್ನುವ ಮಾಹಿತಿ ಈ ಕೆಳಗಿನಂತಿದೆ.

 ಕೆಲ ಬೇಡಿಕೆಗಳನ್ನ ಪಿಎಂ ಎದರು ಇಟ್ಟ ಸಿಎಂ
* ಭದ್ರಾ ಮೇಲ್ದಂಡೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಮನವಿ ಮಾಡಲಾಗಿದೆ....

* ಜೊತೆಗೆ ನದೀ ತಿರುವು ಯೋಜನೆಗಳಿಗೆ ಅನುದಾನ ಒದಗಿಸುವಂತೆ ಹಾಗೂ ಕಾಲುವೆಗಳ ಆಧುನೀಕರಣ ಯೋಜನೆಯಡಿ ರಾಜ್ಯದಿಂದ 6673 ಕೋಟಿ ರೂ. ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅವುಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಲಾಗಿದೆ...

* ಖಾಸಗಿ ಸಹಭಾಗಿತ್ವದಲ್ಲಿ 3 ಬಂದರುಗಳ ಅಭಿವೃದ್ಧಿ, ರೈಲ್ವೆಯೊಂದಿಗೆ ಜಂಟಿ ಪಾಲುದಾರಿಕೆಯಲ್ಲಿ ಬೆಂಗಳೂರು ಉಪ ನಗರ ರೈಲು ಅಭಿವೃದ್ಧಿ ಯೋಜನೆ ಜಾರಿಗೊಳಿಸಲಾಗುತ್ತಿದೆ.

* ಕಾನೂನು ತೊಡಕುಗಳು ಮತ್ತು ಪರಿಸರ ಹೋರಾಟಗಳ ಹಿನ್ನೆಲೆಯಲ್ಲಿ ಮೂಲಸೌಕರ್ಯ ಯೋಜನೆಗಳು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯಗಳಲ್ಲಿ ಇಂತಹ ವ್ಯಾಜ್ಯಗಳ ತ್ವರಿತ ವಿಲೇವಾರಿಗೆ ವ್ಯವಸ್ಥೆ ರೂಪಿಸುವಂತೆ ಮನವಿ ಮಾಡಲಾಗಿದೆ...

* ನೂತನ ಶಿಕ್ಷಣ ನೀತಿಯ ಅನುಷ್ಠಾನಕ್ಕಾಗಿ ಕೈಗೊಳ್ಳಬೇಕಾಗಿರುವ ಹಲವು ಉಪಕ್ರಮಗಳಿಗೆ ಕೇಂದ್ರ ಸರ್ಕಾರದ ಆರ್ಥಿಕ ನೆರವು ಒದಗಿಸುವಂತೆ ಪ್ರಧಾನ ಮಂತ್ರಿಯವರಿಗೆ ಮನವಿ ಮಾಡಲಾಯಿತು.

 * ಎಲ್ಲ ಸರ್ಕಾರಿ ಕಚೇರಿಗಳಿಗೆ ಇಂಟರ್ನೆಟ್ ಸೌಲಭ್ಯ ಒದಗಿಸಲು ಒಪ್ಟಿಕಲ್ ಫೈಬರ್ ನೆಟ್ ವರ್ಕ್ ರೂಪಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರದಿಂದ 4300 ಕೋಟಿ ರೂ. ನೆರವು ಒದಗಿಸುವಂತೆ ಕೋರಲಾಯಿತು...

click me!