ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಕೇಳಿಬಂದ ಬೆನ್ನಲ್ಲೇ ಸಿದ್ದರಾಮಯ್ಯರ ಪರ ಲಕ್ಷ್ಮಣ್ ಸವದಿ ಫುಲ್ ಬ್ಯಾಟಿಂಗ್!

By Ravi Janekal  |  First Published Oct 7, 2024, 6:54 PM IST

ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ. ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಕೆಲವರು ಸಿಎಂ ಬದಲಾವಣೆ ಎಂಬ ಹಗಲು ಕನಸು ಕಾಣುತ್ತಿದ್ದಾರೆ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ?


ಚಿಕ್ಕೋಡಿ (ಅ.7): ರಾಜ್ಯದಲ್ಲಿ ಮುಡಾ ಹಗರಣ ಮುನ್ನೆಲೆಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಗೆ ಸಂಚಕಾರ ಬರಬಹುದು ಎಂಬ ವಿಶ್ಲೇಷಣೆಗಳು ಆರಂಭವಾದೊಡನೆ ಇತ್ತ ಬೆಳಗಾವಿಯಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಪ್ರಭಾವಿ ಮುಖಂಡ ಸತೀಶ ಜಾರಕಿಹೊಳಿ ಹೆಸರು ಸಿಎಂ ಹುದ್ದೆಗೆ ಕೇಳಿಬಂದಿದ. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ವತಃ  ಜಾರಕಿಹೊಳಿ ಹೇಳಿದ್ದರೂ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ.

ಈ ನಡುವೆ ಸಿಎಂ ಹುದ್ದೆಗೆ ಸತೀಶ್ ಜಾರಕಿಹೊಳಿ ಹೆಸರು ಮುನ್ನಲೆಗೆ ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಪರವಾಗಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಫುಲ್ ಬ್ಯಾಟಿಂಗ್ ಮಾಡಿದ್ದಾರೆ.

Tap to resize

Latest Videos

undefined

ವಿಜಯೇಂದ್ರ ಇನ್ನೂ ಎಳಸು ಅವರಿಂದ ಕಲಿಯಬೇಕಾದ್ದು ಏನೂ ಇಲ್ಲ: ಈಶ್ವರಪ್ಪ ವಾಗ್ದಾಳಿ

ಸಿಎಂ ಬದಲಾವಣೆ ಕೂಗು ವಿಚಾರವಾಗಿ ಇಂದು ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ. ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಕೆಲವರು ಸಿಎಂ ಬದಲಾವಣೆ ಎಂಬ ಹಗಲು ಕನಸು ಕಾಣುತ್ತಿದ್ದಾರೆ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿ ವಿರುದ್ಧ ಹರಿಹಾಯ್ದಿದ್ದಾರೆ.

ಸಿಎಂ ಬದಲಾವಣೆ ಎಂಬುದು ಕೇವಲ ಮಾಧ್ಯಮದಲ್ಲಿ ಕೇಳಿಬರುತ್ತಿರುವ ಊಹಾಪೋಹಗಳು ಅಷ್ಟೆ. ವಿರೋಧ ಪಕ್ಷಗಳಿಗೆ ಕೆಲಸವಿಲ್ಲ ಅದಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ. ಒಳ್ಳೆಯ ಸಿಎಂಗೆ ಕಪ್ಪು ಚುಕ್ಕೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಎಷ್ಟೇ ಅಪಪ್ರಚಾರ ಮಾಡಿದರೂ ಸಿಎಂ ಬದಲಾವಣೆ ಮಾಡುವ ಸಂಚು ಅವರಿಗೆ ಸಾಧ್ಯವಾಗಲ್ಲ ಎಂದರು.

click me!