
ಮೈಸೂರು (ಜೂ.16): ಮುಂದಿನ ನವೆಂಬರ್, ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಯುವುದು ನಿಶ್ಚಿತ. ಡಿ.ಕೆ.ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗುವುದು ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಂದು ಪಕ್ಷದಲ್ಲಿ ಐವತ್ತು ವರ್ಷಗಳ ಕಾಲ ಕೆಲಸ ಮಾಡಿರುವ ನನಗೆ ಯಾವುದು ಸತ್ಯ, ಯಾವುದು ಸುಳ್ಳು ಎನ್ನುವುದು ಗೊತ್ತಿದೆ ಎಂದರು.
ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಬದಲಾವಣೆ ಆಗುವುದು ಈಗಾಗಲೇ ನಿರ್ಣಯವಾಗಿದೆ. ಹಾಗಾಗಿಯೇ ಇತ್ತೀಚೆಗೆ ದಿಲ್ಲಿಯಿಂದ ಬರುವಾಗ ಸಿದ್ದರಾಮಯ್ಯ ಮುಖ ಮುಚ್ಚಿಕೊಂಡು ಬಂದರು ಎಂದು ವ್ಯಂಗ್ಯವಾಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂಬ ಆಸೆ ಇತ್ತು. ಆದರೆ, ಆರ್‌ಸಿಬಿ ವಿಜಯೋತ್ಸವದ ವೇಳೆ ಅವರು ಎಲ್ಲಾ ಕುಲಗೆಡಿಸಿ ಬಿಟ್ಟರು. ಸಿಎಂಗೆ ಜವಾಬ್ದಾರಿಯೇ ಇಲ್ಲ. ಚಿನ್ನಸ್ವಾಮಿ ಮೈದಾನದಲ್ಲಿ ಕಾಲ್ತುಳಿತ 3.30ಕ್ಕೆ ನಡೆದರೆ, ನನಗೆ 5.30ಕ್ಕೆ ಗೊತ್ತಾಗುತ್ತದೆ ಎನ್ನುತ್ತಾರೆ ಎಂದು ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ