
ಬೆಂಗಳೂರು (ಜೂ. 08): ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ಮತ್ತು ರೋಗಿಗಳ ಚಿಕಿತ್ಸೆಯ ವೆಚ್ಚ ಭರಿಸಲು ‘ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿ’ ಖಾತೆಗೆ ಮಾರ್ಚ್ 25 ರಿಂದ ಮೇ 19 ರವರೆಗೆ ಸಾರ್ವಜನಿಕರಿಂದ ಬರೋಬ್ಬರಿ 267 ಕೋಟಿ ರು. ಹರಿದುಬಂದಿದೆ. ಕೊರೋನಾ ರೋಗ ನಿಯಂತ್ರಿಸಲು ಅವಶ್ಯ ತುರ್ತು ಸೇವೆಗಳಿಗೆ ಉಪಯೋಗಿಸುವ ಸಲುವಾಗಿ ಆಪತ್ ನಿಧಿಯಾಗಿ ಈ ಮೊತ್ತವನ್ನು ಸರ್ಕಾರ ಕಾಯ್ದಿರಿಸಿದೆ. ಈ ಕುರಿತು ಮಾಹಿತಿಯನ್ನು ಮಾಹಿತಿ ಹಕ್ಕು ಕಾರ್ಯಕರ್ತ ಟಿ.ನರಸಿಂಹ ಮೂರ್ತಿ ಸರ್ಕಾರದಿಂದ ಪಡೆದುಕೊಂಡಿದ್ದಾರೆ.
ಸರ್ಕಾರ ಕೊಟ್ಟ ಮಾಹಿತಿ ಏನು: ಮುಖ್ಯಮಂತ್ರಿ ಕೋವಿಡ್-19 ಪರಿಹಾರ ನಿಧಿ ಖಾತೆಗೆ ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳು ಮತ್ತು ನಿಗಮ ಮಂಡಗಳಿಂದ ಒಟ್ಟು 267,72,37,574 ರು. ಸಂಗ್ರಹವಾಗಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಅನುದಾನದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಚಿಕಿತ್ಸೆಗೆ ಮತ್ತು ರೋಗ ಹರಡುವುದನ್ನು ತಪ್ಪಿಸಲು ವೆಚ್ಚ ಭರಿಸುತ್ತಿದೆ.
ಕೋವಿಡ್ ಪರಿಹಾರ ನಿಧಿಗೆ ವೇತನ ನೀಡಿ ಮಾದರಿಯಾದ ಬಸ್ ಕಂಡಕ್ಟರ್..!
‘ಮುಖ್ಯಮಂತ್ರಿ ಕೋವಿಡ್-19 ಪರಿಹಾರ ನಿಧಿ ಖಾತೆಯಲ್ಲಿ ಸಂಗ್ರಹವಾಗಿರುವ ಮೊತ್ತವನ್ನು ರೋಗ ನಿಯಂತ್ರಿಸಲು ಅವಶ್ಯ ತುರ್ತು ಸೇವೆಗಳಿಗೆ ಉಪಯೋಗಿಸುವ ಸಲುವಾಗಿ ‘ಆಪತ್ ನಿಧಿ’ಯಾಗಿ ಕಾಯ್ದಿರಿಸಲಾಗಿದೆ. ಅದರಂತೆ ಮೇ 19ರವರೆಗೂ ಮುಖ್ಯಮಂತ್ರಿ ಪರಿಹಾರ ನಿಧಿ ಕೋವಿಡ್-19 ನಿಧಿ ಖಾತೆ ಸಂಖ್ಯೆ 39234923151ನಲ್ಲಿ ಒಟ್ಟು 267,72,37,574 ರು. ಲಭ್ಯವಿದೆ’ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಸರ್ಕಾರದ ಆಡಳಿತ ಹಾಗೂ ಸರ್ವಜನಿಕ ಮಾಹಿತಿ ಇಲಾಖೆ ಅಧೀನ ಕಾರ್ಯದರ್ಶಿ ಜಿ.ಎಲ್.ಗಣೇಶ ಕುಮಾರ್ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ