ಪಠ್ಯ ಪುಸ್ತಕ ಪರಿಷ್ಕರಣೆ, ವಿವಾದಿತ ಎಪಿಎಂಸಿ ಕಾಯ್ದೆ ರದ್ದುಪಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ!

By Suvarna News  |  First Published Jun 15, 2023, 3:12 PM IST

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಬಿಜೆಪಿ ಅವಧಿಯಲ್ಲಿ ಮಾಡಿರುವ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ಹಿಂತೆಗೆದು ಹೊಸ ಪರಿಷ್ಕರಣೆ ಮಾತುಗಳು ಕೇಳಿಬಂದಿತ್ತು. ಇದೀಗ ಈ ನಿರ್ಧಾರಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇದೀಗ ಶಾಲಾ ಮಕ್ಕಳ ಪಠ್ಯದಲ್ಲಿ ಮತ್ತೆ ಬದಲಾವಣೆಯಾಗಲಿದೆ
 


ಬೆಂಗಳೂರು(ಜೂ. 15): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ಉಚಿತ ಗ್ಯಾರೆಂಟಿ ಭಾರಿ ತಲೆನೋವಾಗಿ ಪರಿಣಮಿಸಿತ್ತು. ಇದೀಗ ತಕ್ಕ ಮಟ್ಟಿಗೆ ಉಚಿತ ಭಾಗ್ಯಗಳನ್ನು ನಿಭಾಯಿಸಿರುವ ಸಿದ್ದರಾಮಯ್ಯ ಸರ್ಕಾರ ಇದೀಗ ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ ವಿವಾದಿತ ಎಪಿಎಂಸಿ ಕಾಯ್ದೆ ರದ್ದು ಪಡಿಸಲು ನಿರ್ಧರಿದೆ. ಈ ಕುರಿತು ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ.ಶಾಲಾ ಪಠ್ಯ ಪುಸ್ತಕರ ಪರಿಷ್ಕರಣೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ. ಇದರ ಜೊತೆಗೆ ಭಾರಿ ವಿವಾದ ಸೃಷ್ಟಿಸಿದ್ದ ಎಂಪಿಎಂಸಿ ಕಾಯ್ದೆ ರದ್ದುಪಡಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.

ಬಿಜೆಪಿ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಕೊಕ್ ನೀಡಲಾಗಿದೆ. ಬಿಜೆಪಿ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಹೆಡಗೆವಾರ್, ಚಕ್ರವರ್ತಿ ಸೂಲೆಬೆಲೆ, ವೀರ್ ಸಾವರ್ಕರ್ ಪಠ್ಯವನ್ನು ತೆಗೆಯಲಾಗಿದೆ. ಇನ್ನು ಜವಾಹರ್ ಲಾಲ್ ನೆಹರೂ, ಡಾ. ಬಿಆರ್ ಅಂಬೇಡ್ಕರ್, ಸಾವಿತ್ರಿ ಭಾಯಿ ಪುಲೆ ಸೇರಿದಂತೆ ಕೆಲ ಪಠ್ಯಗಳನ್ನು ಸೇರ್ಪಡೆಗೆ ಸಂಪುಟ ಅನುಮೋದನೆ ನೀಡಿದೆ. ಬಿಜೆಪಿ ಅವಧಿಯಲ್ಲಿ ಮಾಡಿರುವ ತಪ್ಪುಗಳನ್ನು ಸರಿಪಡಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. 

Tap to resize

Latest Videos

ಸಿದ್ದರಾಮಯ್ಯ 'ಸುಳ್ಳುರಾಮಯ್ಯ' ಅಲ್ಲಾ ಅನ್ನೋದಾದ್ರೆ ಕಮಿಟ್ಮೆಂಟ್ ಲೆಟರ್ ತೋರಿಸಲಿ: ಸಿಟಿ ರವಿ ಸವಾಲು

ಮಕ್ಕಳಿಗೆ ಈಗಾಗಲೇ ಪಠ್ಯ ವಿತರಿಸಲಾಗಿದೆ. ಹೀಗಾಗಿ ಅವುಗನ್ನು ವಾಪಸ್ ಪಡೆದರೆ ಮತ್ತೆ ಕೋಟ್ಯಾಂಟರು ರೂಪಾಯಿ ಹಣ ವ್ಯಯಿಸಬೇಕು. ಹೀಗಾಗಿ ಸಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ. ಶಿಕ್ಷಣ ತಜ್ಞರ ಸಲಹೆ ಪಡೆದು ಸಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ. ಇದರ ಜೊತೆಗೆ ಮಕ್ಕಳಿಗೆ ಯಾವ ಪಾಠ ಮಾಡಬೇಕು ಅನ್ನೋ ಮಾರ್ಗಸೂಚಿಯನ್ನು ಶಿಕ್ಷಕರಿಗೆ ನೀಡಲಾಗುತ್ತದೆ ಎಂದು ಮಧುಬಂಗಾರಪ್ಪ ಹೇಳಿದ್ದಾರೆ. 

6 ರಿಂದ 10 ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಮಾತ್ರ ಬದಲಾವಣೆ ಮಾಡಲಾಗಿದೆ ಎಂದು ಮಧುಬಂಗಾರಪ್ಪ ಹೇಳಿದ್ದಾರೆ. ನಮ್ಮ ಮಕ್ಕಳಿಗೆ ಯಾವ ಪಠ್ಯ ಅಗತ್ಯವಿದೆ ಅನ್ನೋದನ್ನು ಮಾತ್ರ ಇರಿಸಲಾಗಿದೆ. ಅನಗತ್ಯ ಪಠ್ಯಗಳನ್ನು ತೆಗೆಯಲಾಗಿದೆ. ತೆಗೆದ ಪಠ್ಯದ ಜಾಗದಲ್ಲಿ ಅಬೇಂಡ್ಕರ್, ನೆಹರೂ ಪಠ್ಯಗಳನ್ನು ಸೇರಿಸಲಾಗಿದೆ ಎಂದಿದ್ದಾರೆ.

ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದಬೇಕು. ಇದಕ್ಕಾಗಿ ವಿಶೇಷ ಒತ್ತು ನೀಡಲಾಗಿದೆ ಎಂದು ಮಧುಬಂಗಾರಪ್ಪ ಹೇಳಿದ್ದಾರೆ. ಇಂದು ನಡೆದ ಸಂಪುಟ ಸಭೆಯಲ್ಲಿ ಶಾಲೆಯಲ್ಲಿ ಸಂವಿಧಾನ ಪೀಠಿಕೆ ಓದು ಕಡ್ಡಾಯಗೊಳಿಸಲು ತೀರ್ಮಾನಿಸಲಾಗಿದೆ. ರಾಷ್ಟ್ರಗೀತಿ, ನಾಡಗೀತೆ ಜೊತೆಗೆ ಸಂವಿಧಾನ ಪೀಠಿಕೆ ಓದಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಸಿದ್ದರಾಮಯ್ಯ 'ಸುಳ್ಳುರಾಮಯ್ಯ' ಅಲ್ಲಾ ಅನ್ನೋದಾದ್ರೆ ಕಮಿಟ್ಮೆಂಟ್ ಲೆಟರ್ ತೋರಿಸಲಿ: ಸಿಟಿ ರವಿ ಸವಾಲು

ಪಠ್ಯ ಪರಿಷ್ಕರಣೆಗೆ ಬಿಜೆಪಿ ಆಕ್ರೋಶ ಹೊರಹಾಕಿದೆ. ಟಿಪ್ಪು ಪಾಠ ಯಾಕೆ ಬೇಕು, ಕಾಂಗ್ರೆಸ್ ತುಷ್ಠೀಕರಣ ರಾಜಕಾರಣ ಮಾಡುತ್ತಿದೆ. ಮೇಲುಕೋಟೆಯಲ್ಲಿ ಟಿಪ್ಪು ದೌರ್ಜನ್ಯಕ್ಕೆ ದೀಪಾವಳಿ ಮಾಡುತ್ತಿಲ್ಲ. ಆದರೆ ಒಂದು ಸಮುದಾಯ ಒಲೈಕೆಗಾಗಿ ಕಾಂಗ್ರೆಸ್ ಈ ರೀತಿಯ ನಾಟಕ ಆಡುತ್ತಿದೆ. ಇದು ಸಿದ್ದರಾಮಯ್ಯ ಸರ್ಕಾರದ ದ್ರೋಹದ ಕೆಲಸ ಎಂದು ಬಿಜೆಪಿ ನಾಯಕ ರವಿ ಕುಮಾರ್ ಹೇಳಿದ್ದಾರೆ. 

click me!