₹4,195 ಕೋಟಿ ಅನುದಾನ ಬಾಕಿ; ಕೇಂದ್ರದ ವಿರುದ್ಧ ಮತ್ತೆ ಸಿಎಂ ಸಿದ್ದರಾಮಯ್ಯ ಕಿಡಿ

Published : May 15, 2025, 07:04 AM IST
₹4,195 ಕೋಟಿ ಅನುದಾನ ಬಾಕಿ; ಕೇಂದ್ರದ ವಿರುದ್ಧ ಮತ್ತೆ ಸಿಎಂ ಸಿದ್ದರಾಮಯ್ಯ ಕಿಡಿ

ಸಾರಾಂಶ

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಹಣ ಬಿಡುಗಡೆಯಾಗುತ್ತಿಲ್ಲ. 2024-25ನೇ ಸಾಲಿನ ಕೇಂದ್ರದ ಪಾಲು ಇನ್ನೂ 4,195 ಕೋಟಿ ರು. ಬಿಡುಗಡೆ ಮಾಡಬೇಕಿದ್ದು, ರಾಜ್ಯದ ಸಂಸದರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನ ತರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ಬೆಂಗಳೂರು (ಮೇ.15): ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಸಮರ್ಪಕವಾಗಿ ಹಣ ಬಿಡುಗಡೆಯಾಗುತ್ತಿಲ್ಲ. 2024-25ನೇ ಸಾಲಿನ ಕೇಂದ್ರದ ಪಾಲು ಇನ್ನೂ 4,195 ಕೋಟಿ ರು. ಬಿಡುಗಡೆ ಮಾಡಬೇಕಿದ್ದು, ರಾಜ್ಯದ ಸಂಸದರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನ ತರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ವಿಧಾನಸೌಧದಲ್ಲಿ ದಿಶಾ ಸಭೆ ನಂತರ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಲು ರಚಿಸಲಾಗಿದ್ದ ದಿಶಾ ಸಮಿತಿ ಸಭೆ ನಡೆಸಲಾಗಿದೆ. 67 ಕೇಂದ್ರ ಪುರಸ್ಕೃತ ಯೋಜನೆಗಳಿದ್ದು, ಅವುಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. 2024-25ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ 46,859 ಕೋಟಿ ರು. ಖರ್ಚು ಮಾಡಲಾಗಿದೆ. ಅದರಲ್ಲಿ 24,960 ಕೋಟಿ ರು. ರಾಜ್ಯದ ಅನುದಾನವಾಗಿದೆ. ಇನ್ನು ಕೇಂದ್ರದ ಪಾಲು 22,758 ಕೋಟಿ ರು.ಗಳಾಗಿದ್ದು, ಅದರಲ್ಲಿ ಕೇಂದ್ರ ಸರ್ಕಾರ 18,561 ಕೋಟಿ ರು. ನೀಡಿದೆ. ಇನ್ನೂ 4,195 ಕೋಟಿ ರು. ಬಿಡುಗಡೆ ಮಾಡಬೇಕಿದೆ. ಆ ಹಣವನ್ನು ತರಲು ರಾಜ್ಯದ ಎಲ್ಲ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದರು.

ಇದನ್ನೂ ಓದಿ: ಮಾಜಿ ಸಿಎಂ ಆರ್.ಗುಂಡೂರಾವ್ ಅವರ ದಕ್ಷ ಆಡಳಿತವನ್ನ ಮರೆಯಲಾಗದು: ಸಿಎಂ ಸಿದ್ದರಾಮಯ್ಯ

ಶೇ.83ರಷ್ಟು ಅನುದಾನ ಖರ್ಚು:
ರಾಜ್ಯದ ಪಾಲು ಹೆಚ್ಚಿರುವ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಶೇ. 83ರಷ್ಟು ಅನುದಾನ ಖರ್ಚಾಗಿದೆ. ಕೇಂದ್ರದಿಂದ ತಡವಾಗಿ ಅನುದಾನ ಬಿಡುಗಡೆ ಸೇರಿ ಇನ್ನಿತರ ಸಮಸ್ಯೆಗಳಿಂದ ಯೋಜನೆ ಅನುಷ್ಠಾನದಲ್ಲಿ ವಿಳಂಬವಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಆದರೂ 2025-26ನೇ ಸಾಲಿನಲ್ಲಿ ಶೇ.100ರಷ್ಟು ಅನುದಾನ ಖರ್ಚು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಅನುದಾನ ಬಿಡುಗಡೆ ಮಾಡಲು ಕೇಂದ್ರವನ್ನು ಕೋರುವಂತೆಯೂ ಸೂಚಿಸಲಾಗಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!