ಇಂದು ಬಿಹಾರಕ್ಕೆ ಸಿಎಂ ಸಿದ್ದರಾಮಯ್ಯ, 'ಮತದಾರರ ಹಕ್ಕು' ರ್‍ಯಾಲಿಯಲ್ಲಿ ರಾಹುಲ್ ಗಾಂಧಿಗೆ ಸಾಥ್!

Kannadaprabha News, Ravi Janekal |   | Kannada Prabha
Published : Aug 29, 2025, 01:11 PM IST
CM siddaramaia

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆಯುವ ವೋಟರ್ ಅಧಿಕಾರ್ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರೊಂದಿಗೆ ಭಾಗವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ರ್‍ಯಾಲಿಯಲ್ಲಿ ಭಾಗವಹಿಸಿದ್ದಾರೆ. 

ಬೆಂಗಳೂರು (ಆ.29): ಬಿಹಾರ ಚುನಾವಣಾ ಪ್ರಚಾರ ಅಖಾಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಇಳಿಯುತ್ತಿದ್ದು, ಬಿಹಾರದ ಸಿವಾನ್‌ ಜಿಲ್ಲೆಯಲ್ಲಿ ನಡೆಯುತ್ತಿರುವ ವೋಟರ್‌ ಅಧಿಕಾರ್‌ ಯಾತ್ರೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ಗಾಂಧಿ ಅವರೊಂದಿಗೆ ಶುಕ್ರವಾರ ಭಾಗವಹಿಸಲಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಈಗಾಗಲೇ ರ್‍ಯಾಲಿಯಲ್ಲಿ ಭಾಗವಹಿಸಿದ್ದು, ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಬಿಹಾರ ರ್ಯಾಲಿ ವೇಳೆ ಪ್ರಧಾನಿ ಮೋದಿ, ದಿವಂಗತ ತಾಯಿಗೆ ಅವಾಚ್ಯವಾಗಿ ನಿಂದಿಸಿದ್ದ ಆರೋಪಿ ರಿಜ್ವಿ ಬಂಧನ

ಶುಕ್ರವಾರ ಬೆಂಗಳೂರಿನಿಂದ ಉತ್ತರಪ್ರದೇಶದ ಗೋರಖ್‌ಪುರಕ್ಕೆ ವಿಶೇಷ ವಿಮಾನದಲ್ಲಿ ತೆರಳಲಿರುವ ಅವರು ಅಲ್ಲಿಂದ ಸಿವಾನ್‌ ಜಿಲ್ಲೆಗೆ ತೆರಳಿ ಮತಗಳ್ಳತನ ವಿರುದ್ಧ ಹಮ್ಮಿಕೊಂಡಿರುವ ರ್‍ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆದಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ರಾಹುಲ್‌ಗಾಂಧಿ ರ್‍ಯಾಲಿ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಬಲ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಹಾರ ಚುನಾವಣಾ ಪ್ರಚಾರ ಅಖಾಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಇಳಿಯುತ್ತಿದ್ದು, ಬಿಹಾರದ ಸಿವಾನ್‌ ಜಿಲ್ಲೆಯಲ್ಲಿ ನಡೆಯುತ್ತಿರುವ ವೋಟರ್‌ ಅಧಿಕಾರ್‌ ಯಾತ್ರೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ಗಾಂಧಿ ಅವರೊಂದಿಗೆ ಶುಕ್ರವಾರ ಭಾಗವಹಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!