2 ಬಾರಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದು,ಕೇಂದ್ರದ ಆಸೆ ಉಳಿದಿಲ್ಲ: ಸಿಎಂ ಸಿದ್ದರಾಮಯ್ಯ

Kannadaprabha News, Ravi Janekal |   | Kannada Prabha
Published : Aug 14, 2025, 05:26 AM IST
cm siddaramaiah

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನು ಮುಂದೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಿಂದೆ ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ಸಿದ್ದರಾಮಯ್ಯನವರು ರಾಷ್ಟ್ರ ರಾಜಕಾರಣದಿಂದ ದೂರ ಉಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ (ಆ.14): ಈ ಹಿಂದೆ ಎರಡು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದೇನೆ. ಆಗ ನನಗೆ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕು ಎಂಬ ಆಸೆಯಿತ್ತು. ಆದರೆ, ಈಗ ಅಂಥ ಆಸೆ ಇಲ್ಲ. ಇನ್ನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ, ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ರಸಗೊಬ್ಬರ ಕೊರತೆ ಕುರಿತ ಚರ್ಚೆ ವೇಳೆ ನಡೆದ ಗದ್ದಲದ ನಂತರ ಸದನ ಸಮಾವೇಶಗೊಂಡಾಗ, ಕಲಾಪದಲ್ಲಿ ಶಾಸಕರು ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎಂಬ ಬಗ್ಗೆ ಪಾಠ ಮಾಡಿದರು. ಈ ವೇಳೆ ನಾನು 13 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, 9 ಬಾರಿ ಗೆದ್ದಿದ್ದೇನೆ. ನನ್ನ ಸೋಲಿನ ಪಟ್ಟಿಯಲ್ಲಿ 2 ಲೋಕಸಭಾ ಚುನಾವಣೆಯೂ ಇದೆ. ಇನ್ನು ಮುಂದೆ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ ಎಂದರು.

ಆಗ ಮಧ್ಯಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಮತ್ತೊಂದು ಸಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ದೆಹಲಿ ರಾಜಕಾರಣಕ್ಕೆ ಹೋಗುವ ಯೋಚನೆ ಮಾಡಿ. ಈ ಹಿಂದೆ ನೀವು ನನ್ನೊಂದಿಗೆ ಮಾತನಾಡುವಾಗ ಸಂಸತ್‌ಗೆ ಹೋಗಬೇಕು ಎಂಬ ಇಂಗಿತ ವ್ಯಕ್ತಪಡಿಸಿದ್ದೀರಿ ಎಂದು ಸ್ಮರಿಸಿದರು.

ಅದಕ್ಕೆ ಸಿದ್ದರಾಮಯ್ಯ, ನನ್ನನ್ನು ಇಲ್ಲಿಂದ ಕಳಿಸಬೇಕೆಂದಿದ್ದೀಯಾ ನೀನು ಎಂದು ಪ್ರಶ್ನಿಸಿದರು. ಜತೆಗೆ, 1980 ಮತ್ತು 1991ರಲ್ಲಿ ಲೋಕಸಭೆ ಚುನಾವಣೆ ಸ್ಪರ್ಧಿಸಿದ್ದೆ. ಆಗ ಜನ ನನ್ನನ್ನು ತಿರಸ್ಕರಿಸಿದರು. ಹೀಗಾಗಿ ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದು ಸರಿಯಲ್ಲ ಎಂದು ಆಗಲೇ ತೀರ್ಮಾನಿಸಿಬಿಟ್ಟೆ. ರಾಜ್ಯ ರಾಜಕಾರಣದಲ್ಲಿರುವವರಿಗೂ ಲೋಕಸಭೆಗೆ ಹೋಗಿ ಎಂದು ಯಾರಿಗೂ ಸಲಹೆ ನೀಡುವುದೂ ಇಲ್ಲ ಎಂದು ಅವರು ಈ ವೇಳೆ ಸ್ಪಷ್ಟಪಡಿಸಿದರು.

ಆಗ ಬಿಜೆಪಿ ಶಾಸಕ ಸಿ.ಸಿ. ಪಾಟೀಲ್‌, ನೀವು ದೆಹಲಿಗೆ ಹೋಗಿದ್ದರೆ ನಾವು ನೆಮ್ಮದಿಯಾಗಿರುತ್ತಿದ್ದೆವು ಎಂದು ಕಾಲೆಳೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್
ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?