ಬೆಳಗಾವಿ ಅಧಿವೇಶನ: ಮಂತ್ರಿಗಳ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಪ್ರತ್ಯೇಕ ಮಾತುಕತೆ ಕುತೂಹಲ!

Kannadaprabha News, Ravi Janekal |   | Kannada Prabha
Published : Dec 04, 2025, 05:04 AM IST
karnataka CM Siddaramaiah separate talks with ministers today

ಸಾರಾಂಶ

Belagavi assembly session: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಈ ಹಿನ್ನೆಲೆ, ಅವಿಶ್ವಾಸ ಮಂಡನೆ ಸೇರಿದಂತೆ ವಿಪಕ್ಷಗಳ ದಾಳಿಯನ್ನು ಎದುರಿಸುವ ಬಗ್ಗೆ ಚರ್ಚಿಸಲು ಸಚಿವರ ಸಭೆ ಕರೆದಿದ್ದಾರೆ.

 ಬೆಂಗಳೂರು (ಡಿ.4): ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಕಾರ್ಯತಂತ್ರ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಜೆ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ.

ಗುರುವಾರ ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಮುಗಿದ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.

ಸಭೆಯಲ್ಲೇನು ಚರ್ಚೆ?

ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರ ಹಂಚಿಕೆ ಕಿತ್ತಾಟ ಮತ್ತಿತರ ವಿಷಯ ಪ್ರಸ್ತಾಪಿಸಿ ಪ್ರತಿಪಕ್ಷಗಳು ಅವಿಶ್ವಾಸ ಮಂಡನೆಗೆ ಸಿದ್ಧತೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಅಧಿವೇಶನದಲ್ಲಿ ಎತ್ತಬಹುದಾದ ವಿಚಾರಗಳಿಗೆ ಸರ್ಕಾರದಿಂದ ಯಾವ ರೀತಿ ತಿರುಗೇಟು ನೀಡಬೇಕು ಎಂಬ ಬಗ್ಗೆ ಸಚಿವರ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ವಿವಿಧ ಇಲಾಖೆಗಳಿಂದ ಮಂಡನೆಯಾಗಲಿರುವ ವಿಧೇಯಕಗಳ ಬಗ್ಗೆ, ಪ್ರತಿಪಕ್ಷಗಳು ಇಲಾಖಾವಾರು ಕೇಳುವ ಪ್ರಶ್ನೆಗಳಿಗೆ ಹೇಗೆ ಸಿದ್ಧತೆ ನಡೆಸಬೇಕು ಎಂಬ ಚರ್ಚೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಡಿ.8 ರಿಂದ ಅಧಿವೇಶನ ಶುರು:

ಡಿ.8 ರಿಂದ ಅಧಿವೇಶನ ಶುರುವಾಗಲಿದ್ದು, ಅಧಿವೇಶನ ಶುರುವಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ವೇಳೆ ಶಾಸಕರು, ಪರಿಷತ್‌ ಸದಸ್ಯರು ಎಲ್ಲರೂ ಹೇಗೆ ಸರ್ಕಾರವನ್ನು ಸಮರ್ಥಿಸಿಕೊಳ್ಳಬೇಕು ಎಂದು ಚರ್ಚಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮುಡಾ ಕೇಸ್‌ನಲ್ಲಿ ಸಿಎಂ ವಿರುದ್ಧದ ತನಿಖೆಗೆ ವಿಳಂಬ ಲೋಕಾಯುಕ್ತ ಪೊಲೀಸರ ವಿರುದ್ಧ ಕೋರ್ಟ್‌ ಗರಂ
ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್‌ ವಿವಾದ