ದೆಹಲಿಗೆ ಕರ್ನಾಟಕ ಕಾಂಗ್ರೆಸ್ ನಾಯಕರ ದಂಡು: ಸಿಡಬ್ಲ್ಯುಸಿ ಸಭೆಗೆ ಸಿಎಂ ಡಿಕೆಶಿ, ಸಿದ್ದರಾಮಯ್ಯ ಪ್ರಯಾಣ

Gowthami K   | Kannada Prabha
Published : Sep 26, 2026, 09:42 AM IST
DK Shivakumar And Siddaramaiah

ಸಾರಾಂಶ

ಸಿಡಬ್ಲ್ಯುಸಿ ಸಭೆಯಲ್ಲಿ ಪಾಲ್ಗೊಳ್ಳಲು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮತ್ತು ಬಿ.ಕೆ.ಹರಿಪ್ರಸಾದ್ ದೆಹಲಿಗೆ ತೆರಳಲಿದ್ದಾರೆ. ಈ ಭೇಟಿಯ ವೇಳೆ ನಿಗಮ-ಮಂಡಳಿಗಳ ನೂತನ ನೇಮಕಾತಿ ಮತ್ತು ಪಕ್ಷ ಸಂಘಟನೆಯ ಕುರಿತು ಹೈಕಮಾಂಡ್ ಜೊತೆ ಮಹತ್ವದ ಚರ್ಚೆ ನಡೆಯಲಿದೆ. ಅಲ್ಲದೆ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಬಗ್ಗೆಯೂ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸೆ.29 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ಸೆ.28 ರಂದು ದೆಹಲಿಗೆ ತೆರಳುತ್ತಿದ್ದು, ಈ ವೇಳೆ ನಿಗಮ-ಮಂಡಳಿ ನೇಮಕ ಕುರಿತು ಮಹತ್ವದ ಚರ್ಚೆಯಾಗುವ ಸಾಧ್ಯತೆಯಿದೆ.

ಎಐಸಿಸಿಯು ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿವಾದ ಮತ್ತು ‘ವೋಟ್ ಚೋರಿ" (ಮತ ಕಳವು) ಕುರಿತು ಚರ್ಚೆ ನಡೆಸಲು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ಕರೆದಿದೆ. ಇದರಲ್ಲಿ ಭಾಗವಹಿಸಲು ಸೆ.28 ರಂದೇ ಮುಖ್ಯಮಂತ್ರಿ ಶಿವಕುಮಾರ್‌, ಸಿಡಬ್ಲ್ಯುಸಿ ಸದಸ್ಯರೂ ಆದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್ ಅವರು ದೆಹಲಿಗೆ ತೆರಳಲಿದ್ದಾರೆ. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಇತ್ತೀಚೆಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಿರುದ್ಧ ಕೇಳಿಬಂದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಅವರ ವಜಾಕ್ಕೆ ಅಗತ್ಯವಾದ ಕಾರ್ಯತಂತ್ರದ ಕುರಿತು ಪ್ರಮುಖವಾಗಿ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ, ಮುಂಬರುವ ಚುನಾವಣೆಗಳ ಸಿದ್ಧತೆ ಜೊತೆಗೆ, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಸರ್ಕಾರದ ಮೇಲೆ ಒತ್ತಡ ಹೇರುವ ಕುರಿತು ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.

ಅಂತಿಮ ಹಂತದ ಮಾತುಕತೆ:

ಗುರುವಾರ ಬೆಂಗಳೂರಿನಲ್ಲೂ ಸುರ್ಜೇವಾಲ ಅವರೊಂದಿಗೆ ದಿನವಿಡೀ ಸುದೀರ್ಘ ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ಚರ್ಚೆಯಾದ ಅಂಶಗಳ ಆಧಾರದ ಮೇಲೆ ವರಿಷ್ಠರೊಂದಿಗೆ ಅಂತಿಮ ಹಂತದ ಮಾತುಕತೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಈ ವೇಳೆ 3-4 ಬಾರಿ ಗೆದ್ದವರು ಸೇರಿ 8-10 ಮಂದಿ ಶಾಸಕರನ್ನು ಬಿಟ್ಟು ಉಳಿದೆಲ್ಲಾ ನಿಗಮ-ಮಂಡಳಿ ಅಧ್ಯಕ್ಷರನ್ನು ಬದಲಿಸಬೇಕು. ಹೊಸಬರಿಗೆ ಅವಕಾಶ ನೀಡಬೇಕು. ಜತೆಗೆ ನಿರ್ದೇಶಕರನ್ನೂ ಬದಲಿಸಿ ಕಾರ್ಯಕರ್ತರಿಗೆ ಹಾಗೂ ಹೊಸ ಮುಖಗಳಿಗೆ ಅವಕಾಶ ನೀಡಿ ಪಕ್ಷ ಸಂಘಟನೆಗೆ ಪ್ರೇರೇಪಿಸಬೇಕು ಎಂಬ ಚರ್ಚೆಯಾಗಲಿದ್ದು, ಅಂತಿಮ ತೀರ್ಮಾನವಾಗುವ ನಿರೀಕ್ಷೆಯಿದೆ.

ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಸೂಚನೆ:

ಇನ್ನು ಎಸ್‌ಐಆರ್‌ ಬಳಿಕ ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಸಾಧ್ಯತೆಯಿದೆ. ಜತೆಗೆ ಸದ್ಯದಲ್ಲೇ ಪಂಚಾಯ್ತಿ ಚುನಾವಣೆ ನಡೆಯಲಿದೆ. ಹೀಗಾಗಿ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು. ಯಾವುದೇ ಕ್ಷಣದಲ್ಲಿ ಚುನಾವಣೆ ಎದುರಾದರೂ ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಬೇಕು ಎಂದು ಸೂಚನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಏನ್ರೀ ಸರ್ಕಾರ ಇದು?.. ದಿಡುಪೆ ಫಾಲ್ಸ್‌ ಬಂದ ಪ್ರವಾಸಿಗರು ಡಿಜಿಟಲ್ ಶುಲ್ಕ ಕೇಳಿದ್ದಕ್ಕೆ ದಂಡ; ಹೈಕೋರ್ಟ್ ಗರಂ
ಕಲಬುರಗಿ ಜಿಐ ತೊಗರಿ ಬೇಳೆ ಮೊದಲ ಬಾರಿ ವಿದೇಶಕ್ಕೆ ರಫ್ತು! ಮಾಲ್ಡೀವ್ಸ್‌ಗೆ 1 ಮೆಟ್ರಿಕ್ ಟನ್