
ಬೆಂಗಳೂರು (ಆ.02): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆನ ಬಂದ ನಂತರ ಕಳೆದ ತಿಂಗಳು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3,27,747 ಕೋಟಿ ರೂ. ಬಜೆಟ್ ಮಂಡಿಸಿದ್ದರು. ಈ ಬಜೆಟ್ ಆಗಸ್ಟ್ 1 ರಿಂದ ಅನ್ವಯವಾಗಿದ್ದು, ಅನುದಾನದ ಬಳಕೆ ಇಂದಿನಿಂದ ಆರಂಭವಾಗಿದೆ. ಶೀಘ್ರವಾಗಿ ಎಂಟು ಯೋಜನೆಗಳ ಜಾರಿಗೆ ಆದೇಶ ಹೊರಬೀಳಲಿದೆ.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಏಪ್ರಿಲ್‌ನಲ್ಲಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಕೇವಲ ಜುಲೈ 31ರವರೆಗೆ ಮಾತ್ರ ಸೀಮಿತವಾಗಿತ್ತು. ಇನ್ನು ಚುನಾವಣೆಯ ನಂತರ ಬಹುಮತ ಪಡೆದು ಅಧಿಕಾತಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ್ದಾರೆ. ಆದ್ದರಿಂದ ಕಾಂಗರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಹೊಸದಾಗಿ ಬಜೆಟ್ ಮಂಡನೆ ಮಾಡಿದರೂ ಯಾವುದೇ ಹೊಸ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ ಯೋಜನೆಗಳಿಗೆ ಅನುದಾನ ಬಳಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಆಗಸ್ಟ್ 1ರಿಂದ ಕಾಂಗ್ರೆಸ್ ಸರ್ಕಾರ ಮಂಡಿಸಿದ ಬಜೆಟ್ ಅನ್ವಯವಾಗಲಿದ್ದು, ಇಂದಿನಿಂದ ಅನುದಾನ ಬಳಕೆ ಆರಂಭವಾಗಿದೆ.
ಮುಸ್ಲಿಂ ದರ್ಗಾದಲ್ಲಿ ಕೇಸರಿ ವಸ್ತ್ರವೇ ಗೆಲ್ಲುವುದಾಗಿ ಭವಿಷ್ಯ ನುಡಿದ ಲಾಲಸಾಬ್ ಅಜ್ಜ
ಬಜೆಟ್‌ನಲ್ಲಿ ಘೋಷಣೆಯಾದ ಯೋಜನೆಗಳಿಗೆ ನೀಲನಕ್ಷೆ ತಯಾರಿಕೆ ಆರಂಭ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಹೊಸ ಬಜೆಟ್ ಇಂದಿನಿಂದ ಜಾರಿಯಾಗಲಿದ್ದು, ಅಗಸ್ಟ್ 1 ರಿಂದ ಅನ್ವಯವಾಗುವಂತೆ ಹೊಸ ಬಜೆಟ್ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಬರೋಬ್ಬರಿ 3,27,747 ಕೋಟಿ ರೂ ಬಜೆಟ್ ಅನುದಾನದ ಬಳಕೆ ಅನ್ವಯವಾಗಲಿದೆ. ಬಜೆಟ್ ನಲ್ಲಿ ಘೋಷಣೆಯಾಗಿರುವ ಕಾರ್ಯಕ್ರಮಗಳ ನೀಲನಕ್ಷೆಗೆ ಸೂಚನೆ ನೀಡಿದ್ದಾರೆ. ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವ ಸಿಎಂ ಸಿದ್ಧರಾಮಯ್ಯ ಅವರು, ಹಂತ ಹಂತವಾಗಿ ಬಜೆಟ್ ಘೋಷಣೆಗಳ ಸರ್ಕಾರಿ ಆದೇಶಕ್ಕೆ ಸೂಚನೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ದೃಷ್ಟಿಕೋನದಿಂದ ಕೆಲ ಯೋಜನೆ ಶೀಘ್ರ ಜಾರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಜೆಟ್ ಘೋಷಣೆಗಳ ಜಾರಿಗೆ ಆದ್ಯತೆ ನೀಡಲಾಗಿದೆ. ಮತಬೇಟೆಯ ಲೆಕ್ಕಾಚಾರದಲ್ಲಿ ಬಜೆಟ್ ಘೋಷಣೆಗಳ ಶೀಘ್ರ ಸರ್ಕಾರಿ ಆದೇಶಕ್ಕೆ ಪ್ಲಾನ್ ಮಾಡಲಾಗುತ್ತಿದೆ. ಜನರಿಗೆ ತಕ್ಷಣ ತಲುಪುವ ಯೋಜನೆಗಳ ಕುರಿತು ಸರ್ಕಾರಿ ಆದೇಶಕ್ಕೆ ನಿರ್ದೇಶನ ನೀಡಲಾಗಿದೆ. ಅದರಲ್ಲಿ ಕೆಲವು ಯೋಜನೆಗಳನ್ನು ಈಗ ಜಾರಿಗೆ ಮಾಡುವುದಕ್ಕೆ ಮುಂದಾಗಿದೆ.
ಕಾಂಗ್ರೆಸ್‌ನಲ್ಲಿ ಮತ್ತೆ ಶಾಸಕರ ಕೆಂಗಣ್ಣಿಗೆ ಗುರಿಯಾದ ಗೃಹ ಸಚಿವ ಪರಮೇಶ್ವರ್: ರಾಯರೆಡ್ಡಿ ಆಕ್ರೋಶ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ