ಮನೆ ಯಜಮಾನಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಕಂಡಿಷನ್‌ ಹಾಕಿದ ಕಾಂಗ್ರೆಸ್

By Sathish Kumar KH  |  First Published Jun 6, 2023, 11:00 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ನೀಡಲಾಗುತ್ತಿರುವ ತಲಾ 2 ಸಾವಿರ ರೂ. ಹಣ ಪಡೆಯಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. 


ಬೆಂಗಳೂರು (ಜೂ.06): ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಪ್ರತಿ ಮನೆ ಯಜಮಾನಿಗೆ ತಲಾ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ, ಇದಕ್ಕೆ ಆರು ಷರತ್ತುಗಳನ್ನು ಒಡ್ಡಿದೆ. ಯಾವುದೇ ಪಡಿತರ ಚೀಟಿ ಇದ್ದರೂ ಯೋಜನೆಯ ಲಾಭ ಪಡೆಯಬಹುದು. ಆದರೆ, ಗಂಡ ಆದಾಯ ತೆರಿಗೆ ಪಾವತಿ ಮಾಡುವವರಾಗಿದ್ದರೆ ಅಂತಹವರ ಹೆಂಡತಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುವುದಿಲ್ಲ. 

ರಾಜ್ಯದ ಪ್ರತಿ ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪುತಿ ತಿಂಗಳು ರೂ. 2000/-ಗಳನ್ನು ನೀಡುವ "ಗೃಹಲಕ್ಷ್ಮಿ ಯೋಜನೆ"ಯನ್ನು ಜಾರಿಗೆ ತರಲಾಗುತ್ತಿದೆ. ಆದರೆ, ಇದರ ಲಾಭ ಪಡೆಯುವ ಮನೆ ಯಜಮಾನಿಯರಿಗೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಅವುಗಳನ್ನು ಪೂರೈಸಿದವರಿಗೆ ಯೋಜನೆಯ ಲಾಭ ಸಿಗಲಿದೆ. 

Tap to resize

Latest Videos

Gruha Jyothi- ಕಾಂಗ್ರೆಸ್‌ನ ಉಚಿತ ವಿದ್ಯುತ್‌ ಜುಲೈನಿಂದ ಜಾರಿ: ಗೃಹಜ್ಯೋತಿಗೆ 10 ಷರತ್ತುಗಳು ಅನ್ವಯ

ಗೃಹಲಕ್ಷ್ಮೀ ಯೋಜನೆಯ ಮಾರ್ಗಸೂಚಿಗಳು: 
1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿ ಆಗಿರಬೇಕು. 
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ, ಒಂದು ಮಹಿಳೆಗೆ ಮಾತ್ರ ಯೋಜನ ಅನ್ವಯಿಸುತ್ತದೆ. 
3. ಈ ಯೋಜನೆಯ ಫಲಾನುಭವಿಗಳು 2023ರ ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸುವುದು. ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣವನ್ನು ವರ್ಗಾವಣೆ ಮಾಡುವುದು.
4. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕವಾಗಲೀ ಅಥವಾ ಭೌತಿಕವಾಗಿಯಾಗಲೀ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
5. ಅರ್ಜಿದಾರರು ಸಲ್ಲಿಸುವ ಪೂರ್ಣ ಪ್ರಮಾಣದ ಅರ್ಜಿಯಲ್ಲಿನ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ, ತದನಂತರ ಪರಿಶೀಲನ ಮಾಡುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುತ್ತದೆ. 
6. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡುವುದು.

ಸರ್ಕಾರಿ ವಕೀಲರ ನೇಮಕಾತಿ ಅಕ್ರಮವನ್ನು ಇಲಾಖಾ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ

ಯಾರಿಗೆ ಗೃಹಲಕ್ಷ್ಮೀ ಯೋಜನೆ ಅರ್ಹತೆಯಿಲ್ಲ: ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಅಥವಾ ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಅಂತಹ ಮನೆಯೊಡತಿ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂ. ಹಣ ಪಡೆಯಲು ಅರ್ಹರಾಗಿರುವುದಿಲ್ಲ. ಇನ್ನು ಸುಳ್ಳು ಮಾಹಿತಿಯನ್ನು ನೀಡಿ ಸರ್ಕಾರದಿಂದ ಹಣ ಪಡೆದಿರುವುದು ತಿಳಿದುಬಂದಲ್ಲಿ ಅಂತಹ ಫಲಾನುಭವಿಗಳಿಂದ ಮುಲಾಜಿಲ್ಲದೇ ಹಣವನ್ನು ವಾಪಸು ಪಡೆಯಲಾಗುವುದು. ಜೊತೆಗೆ ಕಾನೂನು ರೀತ್ಯಾ ಕ್ರಮವನ್ನೂ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

click me!