ಡೀಸಿಗಳ ಜತೆ ಸಿದ್ದರಾಮಯ್ಯ ಆನ್ಲೈನ್‌ ಸಭೆ!

Published : May 20, 2021, 08:29 AM ISTUpdated : May 20, 2021, 08:41 AM IST
ಡೀಸಿಗಳ ಜತೆ ಸಿದ್ದರಾಮಯ್ಯ ಆನ್ಲೈನ್‌ ಸಭೆ!

ಸಾರಾಂಶ

* ನಾಳೆಯಿಂದ ಡೀಸಿಗಳ ಜತೆ ಸಿದ್ದು ಆನ್ಲೈನ್‌ ಸಭೆ * ಕೊರೋನಾ ನಿಗ್ರಹ, ಚಿಕಿತ್ಸೆ ಬಗ್ಗೆ ಮಾಹಿತಿ ಸಂಗ್ರಹ * ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಿದ್ದರಾಮಯ್ಯ ಸಿದ್ಧತೆ

ಬೆಂಗಳೂರು(ಮೇ.20): ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಲು ಮುಂದಾಗಿದ್ದಾರೆ.

ಈ ಬಗ್ಗೆ ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲಾಕ್ಡೌನ್‌ ಬೆನ್ನಲ್ಲೇ ಹಳ್ಳಿಗಳಿಗೆ ಸೋಂಕು ತೀವ್ರ ಪ್ರಮಾಣದಲ್ಲಿ ಹರಡಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡಲು ಮಾಡಿಕೊಂಡಿರುವ ವ್ಯವಸ್ಥೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಸಿದ್ದರಾಮಯ್ಯ ಮಾಹಿತಿ ಪಡೆಯಲಿದ್ದಾರೆ.

ಶುಕ್ರವಾರದಿಂದ ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿ ಜತೆಗೆ ತಲಾ 1 ಗಂಟೆ ಸಮಾಲೋಚನೆ ನಡೆಸಲಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊರೋನಾ ನಿಯಂತ್ರಣದಲ್ಲಿ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ವಿಪಕ್ಷ ನಾಯಕರು ಮಾಹಿತಿ ಪಡೆಯಬಹುದು:

ಇನ್ನು ವಿರೋಧಪಕ್ಷದ ನಾಯಕರು ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿರುವುದು ಚರ್ಚೆಗೆ ಕಾರಣವಾಗಿದ್ದು, ಸಿದ್ದರಾಮಯ್ಯ ಅವರು ಅಧಿಕೃತವಾಗಿ ಜಿಲ್ಲಾಧಿಕಾರಿಗಳ ಸಭೆ ಕರೆಯಲು ಅವಕಾಶವಿಲ್ಲ.

ಆದರೆ ‘ಶ್ಯಾಡೋ ಸಿಎಂ’ ಆಗಿ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆಯಬಹುದು. ಆದರೆ ಈ ವೇಳೆ ಯಾವುದೇ ಕ್ರಮಗಳಿಗೆ ಜಿಲ್ಲಾಧಿಕಾರಿಗಳಿಗೆ ಆದೇಶ, ನಿರ್ದೇಶನ ನೀಡುವಂತಿಲ್ಲ. ಬದಲಿಗೆ ಮಾಹಿತಿ ಆಧರಿಸಿ ಸರ್ಕಾರ ಅಥವಾ ಸಚಿವರಿಗೆ ಕ್ರಮಕ್ಕೆ ಒತ್ತಾಯಿಸಬಹುದು ಎಂದು ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Karnataka News Live: ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್