ಕಾಂಗ್ರೆಸ್‌ನಲ್ಲಿ ರಾಜಕೀಯ ಇನ್ನೂ ಬಿರುಸು! ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಎಲ್ಲರೂ ಸ್ವಾಗತಿಸುತ್ತಾರೆಂದ ಡಾ. ಪರಮೇಶ್ವರ್

Kannadaprabha News   | Kannada Prabha
Published : Apr 30, 2026, 09:05 AM IST
dr g parameshwar

ಸಾರಾಂಶ

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವದ ಬದಲಾವಣೆಯ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಮಲ್ಲಿಕಾರ್ಜುನ ಖರ್ಗೆಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಪ್ರಸ್ತಾಪಕ್ಕೆ ಪರಮೇಶ್ವರ್ ಸ್ವಾಗತ ವ್ಯಕ್ತಪಡಿಸಿದ್ದು, ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಸೇರಿದ್ದು ಎಂದು ಎಂ.ಬಿ. ಪಾಟೀಲ್ ಮತ್ತು ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ನಾಯಕತ್ವ ವಿಚಾರದಲ್ಲಿ ಹೈಕಮಾಂಡ್‌ ನಾಯಕರು ಸೂಕ್ತ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ. ಅವರ ತೀರ್ಮಾನಕ್ಕೆ ನಾವು ಬದ್ಧವಾಗಿರುತ್ತೇವೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, ನಾಯಕತ್ವದ ವಿಚಾರ ಪ್ರತಿದಿನ ಚರ್ಚೆಯಾಗುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ನಲ್ಲಿ ಹೈಕಮಾಂಡ್ ಸುಪ್ರೀಂ. ಹೈಕಮಾಂಡ್‌ ನಾಯಕರು ತೀರ್ಮಾನಕ್ಕೆ ನಾವು ತೆಲೆಬಾಗುತ್ತೇವೆ. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದರು.

ಸಚಿವ ಸತೀಶ್‌ ಜಾರಕಿಹೊಳಿ ದೆಹಲಿ ಪ್ರವಾಸ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಕ್ಲೇಮು ಮಾಡುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸತೀಶ್‌ ಜಾರಕಿಹೊಳಿ ಅವರಿಗೆ ಆ ಸಾಮರ್ಥ್ಯ ಇದೆ, ಉತ್ತಮ ಸಂಘಟನೆಗಾರರು. ಹೈಕಮಾಂಡ್ ಎಲ್ಲ ಗಮನಿಸುತ್ತೆ. ನನ್ನ ಆಸಕ್ತಿಗಳ ಬಗ್ಗೆ ಹೈಕಮಾಂಡ್‌ಗೆ ಹೇಳುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಬಂದಾಗ ಭೇಟಿಯಾಗುತ್ತೇನೆ ಎಂದರು.

ಖರ್ಗೆ ಸಿಎಂ ಆದರೆ ಎಲ್ಲರೂ ಸ್ವಾಗತಿಸ್ತಾರೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ನಾವೆಲ್ಲ ಸ್ವಾಗತಿಸುತ್ತೇವೆ. ಅವರು ಹಿರಿಯ ರಾಜಕಾರಣಿ, ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಬಂದರೆ ಬಹಳ ಸಂತೋಷ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ। ಜಿ.ಪರಮೇಶ್ವರ್‌, ಮುಖ್ಯಮಂತ್ರಿ ಸ್ಥಾನದ ಕುರಿತು ನನಗೆ ಅಷ್ಟು ಮಾಹಿತಿಯಿಲ್ಲ. ಏನೇನು ಬೆಳವಣಿಗೆ ಆಗುತ್ತಿದೆಯೋ ಅದರ ಬಗ್ಗೆಯೂ ಗೊತ್ತಿಲ್ಲ. ಆ ಬಗ್ಗೆ ನಾನು ಮಾತನಾಡುವುದು ಸಮಂಜಸವೂ ಅಲ್ಲ. ಎಲ್ಲವನ್ನೂ ಹೈಕಮಾಂಡ್‌ ಗಮನಿಸುತ್ತಿದೆ. ಅವರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಎಐಸಿಸಿ ಅದಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಲ್ಲವೂ ತಿಳಿದಿದ್ದು, ಅವರು ಅನುಭವಿಗಳು. ಇನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಬಂದರೆ ನಮಗೆಲ್ಲ ಸಂತೋಷವಾಗುತ್ತದೆ, ಎಲ್ಲರೂ ಸ್ವಾಗತಿಸುತ್ತಾರೆ. ರಾಜ್ಯದ ಜನರಿಗೆ ನೀಡಿದ ಉತ್ತಮ ಆಡಳಿತದ ಭರವಸೆ ಈಡೇರಿಸುವುದು ಮುಖ್ಯ ಎಂದರು.

ದಲಿತ ಮುಖ್ಯಮಂತ್ರಿ ಕೂಗಿನ ಕುರಿತು ಪ್ರತಿಕ್ರಿಯಿಸಿ, ದಲಿತರು ಸೇರಿ ಬಹುತೇಕ ಬಯಕೆಯಾಗಿದೆ. ಆದರೆ, ಈ ಕುರಿತು ಯಾವುದೇ ಲಾಬಿ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಹೈಕಮಾಂಡ್‌ ನಾಯಕರನ್ನು ಕೇಳಿಲ್ಲ. ಎಲ್ಲದರ ಬಗ್ಗೆಯೂ ಹೈಕಮಾಂಡ್‌ ನಿರ್ಧಾರವೇ ಅಂತಿಮ. ಇನ್ನು, ದಲಿತ ಸಚಿವರು ಭೇಟಿಯಾಗುತ್ತಿದ್ದೇವೆ. ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಭಾಗವಹಿಸಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಹೇಳಿದರು.

ಸದ್ಯಕ್ಕೆ ಖರ್ಗೆ ಸಿಎಂ ಆಗುವ ಪ್ರಶ್ನೆ ಉದ್ಭವಿಸಲ್ಲ

ಸದ್ಯಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸಿಎಂ ಆಗುವ ಪ್ರಶ್ನೆ ಉದ್ಭವಿಸಲ್ಲ. ಆದರೆ, ಹೈಕಮಾಂಡ್‌ ಯಾವ ತೀರ್ಮಾನವನ್ನು ತೆಗೆದುಕೊಂಡರೂ ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾದರೆ ಸ್ವಾಗತ ಎಂಬ ಗೃಹ ಸಚಿವ ಪರಮೇಶ್ವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್‌ ಇಳಿಸಿದರೇ ತಾನೆ ಆ ಪ್ರಶ್ನೆ ಬರುತ್ತದೆ. ಆ ರೀತಿಯಾಗಿ ನಡೆದಾಗ ಮಾತನಾಡುತ್ತೇನೆ ಎಂದರು.

ರಾಜ್ಯ ರಾಜಕಾರಣದಲ್ಲಿ ಮೇ15 ಕ್ರಾಂತಿ ವಿಚಾರವಾಗಿ ಪ್ರಕ್ರಿಯಿಸಿದ ಅವರು, ಕಳೆದ ನವೆಂಬರ್‌ನಿಂದಲೂ ಹೇಳುತ್ತಲೇ ಇದ್ದಾರೆ, ಇದೇ ಪ್ರಶ್ನೆಗಳನ್ನು ಕೇಳುತ್ತಲೇ ಇದ್ದಾರೆ. ನಾನು ಸಹ ಉತ್ತರ ಕೊಡುತ್ತಾ ಬಂದಿದ್ದೀನಿ. ಈಗಾಗಲೇ ಹೇಳೋದನ್ನೆಲ್ಲಾ ಹೇಳಿಯಾಗಿದ್ದು, ಹೆಚ್ಚಾಗಿ ಮಾತನಾಡುವುದಿಲ್ಲ, ಈ ಕುರಿತು ಪಕ್ಷದ ಹೈ ಕಮಾಂಡ್‌ ಇಲ್ಲವೇ ಸಿಎಂ ಅವರನ್ನೇ ಕೇಳಿ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ ಜನ್ಮದಿನಕ್ಕೆ ಹೈಕಮಾಂಡ್‌ ಗುಡ್ ನ್ಯೂಸ್‌ ಕೊಡುತ್ತದೆ ಎನ್ನುವ ವಿಚಾರವಾಗಿ ಮಾತನಾಡಿ, ಸಂತೋಷ, ಹೈಕಮಾಂಡ್‌ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದು ಹೇಳಿದರು.

ದೆಹಲಿಯಲ್ಲಿ ಸಚಿವರು ಹಾಗೂ ಶಾಸಕರ ಡಿನ್ನರ್‌ ಮೀಟಿಂಗ್‌ ಕುರಿತು ಯಾವುದೇ ಮಾಹಿತಿಯಿಲ್ಲ. ಯಾತಕ್ಕಾಗಿ ಮೀಟಿಂಗ್‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಸರ್ಕಾರ ಮೂರು ವರ್ಷ ಮುಗಿಸಿದ್ದು, ಸಚಿವ ಸಂಪುಟ ಪುನರಾಚನೆಯಾದರೆ ಸ್ಥಾನ ದೊರೆಯುತ್ತದೆ ಎಂಬ ನಿರೀಕ್ಷೆಯಲ್ಲಿರುವವರು, ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಗೆ ಸರಣಿ ಭೇಟಿ ನೀಡಿದರೇ ತಪ್ಪೇನಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಟ್ರೋದಲ್ಲಿ ಮಹಿಳೆಯರ ಶರೀರದ ಭಾಗಗಳನ್ನು ಚಿತ್ರೀಕರಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚುತ್ತಿದ್ದ ಕಿಡಿಗೇಡಿ; ಬಿಸಿ ಮುಟ್ಟಿಸಿದ ಕರ್ನಾಟಕ ಹೈಕೋರ್ಟ್
ರಾಜಕೀಯದ ನಡುವೆ ಪೊಲೀಸ್ ಆಪರೇಷನ್; ಮಾವ ಕೆಎನ್ ರಾಜಣ್ಣ ಸಲುವಾಗಿ ಅಳಿಯನಿಗೆ ಉನ್ನತ ಸ್ಥಾನ?