ಮಾರ್ಚ್ 1ಕ್ಕೆ ಕರ್ನಾಟಕ ಕಾಂಗ್ರೆಸ್ ಶಾಸಕ ಬಿಜೆಪಿ ಸೇರ್ಪಡೆ?

Published : Feb 19, 2019, 10:14 AM IST
ಮಾರ್ಚ್ 1ಕ್ಕೆ ಕರ್ನಾಟಕ ಕಾಂಗ್ರೆಸ್ ಶಾಸಕ ಬಿಜೆಪಿ ಸೇರ್ಪಡೆ?

ಸಾರಾಂಶ

ಕರ್ನಾಟಕ ಕಾಂಗ್ರೆಸ್ ಪಾಳಯದಲ್ಲಿ ಅತೃಪ್ತರೆಂದು ಗುರುತಿಸಿಕೊಂಡಿರುವ ಕಾಂಗ್ರೆಸ್ ಶಾಸಕ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು :  ಬರುವ ಮಾರ್ಚ್ 1ರಂದು ಕಲಬುರ್ಗಿಯಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಾವೇಶದಲ್ಲಿ ಹಾಲಿ ಶಾಸಕ ಡಾ.ಉಮೇಶ್ ಜಾಧವ್ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗುವ ನಿರೀಕ್ಷೆಯಿದೆ.

ಈ ಬಗ್ಗೆ ಇದುವರೆಗೆ ಅಧಿಕೃತ ಮಾಹಿತಿ ಹೊರಬೀಳದಿದ್ದರೂ ಇಂಥದೊಂದು ಸುದ್ದಿ ಬಿಜೆಪಿ ಪಾಳೆಯದಲ್ಲಿ ಸುಳಿದಾಡುತ್ತಿದೆ. ಇದಕ್ಕೆ ಸಂಬಂಧಿ ಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ‘ಈವರೆಗೆ ಯಾರೂ ಸಂಪರ್ಕ ಮಾಡಿಲ್ಲ. ಆ ದಿನದವರೆಗೆ ಕಾದು ನೋಡೋಣ’ ಎಂದು ಮಾರ್ಮಿಕವಾಗಿ ಹೇಳಿರುವುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.

ಚಿಂಚೋಳಿ ಕ್ಷೇತ್ರದ ಹಾಲಿ ಶಾಸಕರಾಗಿರುವ ಜಾಧವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭಾ ಚುನಾವಣೆಯಲ್ಲಿ ಕಲಬುರ್ಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಕಳೆದ ಹಲವು ದಿನಗಳಿಂದ ದಟ್ಟವಾಗಿ ಕೇಳಿಬರುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾದಂತಿದೆ ರಾಜ್ಯದ ಸ್ಥಿತಿ: ಎಂ.ಪಿ.ರೇಣುಕಾಚಾರ್ಯ ಟೀಕೆ
ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!