ಖರ್ಗೆ ಜೊತೆ ಡಿಕೆ ಇಂದು ಭೇಟಿ? ಭಾರಿ ಕುತೂಹಲ, ಇಂದೇ ದೆಹಲಿಗೆ ತೆರಳಲಿರುವ ಎಐಸಿಸಿ ಅಧ್ಯಕ್ಷ

Kannadaprabha News, Ravi Janekal |   | Kannada Prabha
Published : Nov 24, 2025, 06:19 AM IST
DK Shivakumar meet Kharge Today?

ಸಾರಾಂಶ

DK Shivakumar Mallikarjun Kharge meeting :ಅನಾರೋಗ್ಯದ ಕಾರಣದಿಂದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿಲ್ಲ. ಅಧಿಕಾರ ಹಂಚಿಕೆ ಕುರಿತು ಚರ್ಚಿಸಲು, ಖರ್ಗೆಯವರು ದೆಹಲಿಗೆ ತೆರಳುವ ಮುನ್ನ ಸೋಮವಾರ ಈ ಭೇಟಿ ನಡೆಯುವ ಸಾಧ್ಯತೆಯಿದೆ.

ಬೆಂಗಳೂರು (ನ.24): ಅನಾರೋಗ್ಯದ ಕಾರಣದಿಂದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರವೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿಲ್ಲ. ಸೋಮವಾರ ಖರ್ಗೆ ಅವರನ್ನು ಭೇಟಿ ಮಾಡಿ ಅಧಿಕಾರ ಹಂಚಿಕೆ ಕುರಿತು ತಮ್ಮ ನಿಲುವು ತಿಳಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಇಂದು ಡಿಕೆ ಶಿವಕುಮಾರ ಮಲ್ಲಿಕಾರ್ಜುನ ಖರ್ಗೆ ಭೇಟಿ?

ಅದಿಕಾರ ಹಂಚಿಕೆ ತಿಕ್ಕಾಟದ ಬೆನ್ನಲ್ಲೇ ಶುಕ್ರವಾರ ಸಂಜೆ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ವಾಪಸಾಗಿದ್ದರು. ಅಂದೇ ರಾತ್ರಿ ಶಿವಕುಮಾರ್‌ ಅವರು ಖರ್ಗೆ ಅವರನ್ನು ಭೇಟಿ ಮಾಡಲಿದ್ದಾರೆ ಎಂಬ ನಿರೀಕ್ಷೆ ಇತ್ತಾದರೂ ಭೇಟಿಯಾಗಿರಲಿಲ್ಲ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ ಚರ್ಚಿಸಿದ್ದರೂ ಶಿವಕುಮಾರ್‌ ಹೋಗಿರಲಿಲ್ಲ.

ಖರ್ಗೆ ಇಂದೇ ದೆಹಲಿಗೆ?

ಭಾನುವಾರ ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅನಾರೋಗ್ಯದ ಕಾರಣದಿಂದ ಶಿವಕುಮಾರ್‌ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಹೀಗಾಗಿ ಖರ್ಗೆ ಅವರನ್ನು ಭೇಟಿ ಮಾಡಿಲ್ಲ. ಖರ್ಗೆ ಅವರು ಸೋಮವಾರ ದೆಹಲಿಗೆ ತೆರಳಲಿದ್ದು, ಇದಕ್ಕೂ ಮೊದಲು ಶಿವಕುಮಾರ್‌ ಅವರ ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಗಲಕೋಟೆ: ದಾಸೋಹ ಚಕ್ರವರ್ತಿ, ಬಂಡಿಗಣಿ ಮಠದ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ!
ಬಾರ್ ಆಗಿ ಮಾರ್ಪಟ್ಟ KSRTC ಬಸ್: ಪ್ರಯಾಣದ ಮಧ್ಯೆಯೇ ಮದ್ಯ ಸೇವನೆ!