
ಬೆಳಗಾವಿ(ಡಿ.22): ಮೇಕೆದಾಟು ಯೋಜನೆ(Mekedatu Project) ಜಾರಿಗೆ ಒತ್ತಾಯಿಸಿ ಜನವರಿ 9ರಿಂದ ಜ.19ರವರೆಗೆ ಹತ್ತು ದಿನಗಳ ಕಾಲ ಬರೋಬ್ಬರಿ 169 ಕಿ.ಮೀ. ಉದ್ದದ ಬೃಹತ್ ಪಾದಯಾತ್ರೆ(Padayatra) ನಡೆಸಲು ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್‌ನ(Congress) ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧರಿಸಲಾಗಿದೆ. ‘ನಮ್ಮ ನೀರು- ನಮ್ಮ ಹಕ್ಕು’ ಘೋಷ ವಾಕ್ಯದಡಿ ಬೆಂಗಳೂರಿಗೆ(Bengaluru) ಕುಡಿಯುವ ನೀರು(Drinking Water) ಪೂರೈಸುವ ಯೋಜನೆ ಜಾರಿಗೆ ಒತ್ತಾಯಿಸಿ ಜ.9ರಂದು ಬೆಳಗ್ಗೆ 9.30 ಗಂಟೆಗೆ ಮೇಕೆದಾಟು ಬಳಿಯಿಂದ ಬೆಂಗಳೂರುವರೆಗಿನ ಪಾದಯಾತ್ರೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ನೇತೃತ್ವದಲ್ಲಿ ಚಾಲನೆ ದೊರೆಯಲಿದೆ.
ಮೇಕೆದಾಟುವಿನಿಂದ ಕನಕಪುರ, ರಾಮನಗರ, ಬಿಡದಿ ಮೂಲಕ 75 ಕಿ.ಮೀ. ದೂರದಲ್ಲಿರುವ ಕೆಂಗೇರಿಗೆ ಪಾದಯಾತ್ರೆ ಆಗಮಿಸಲಿದೆ. ಬಳಿಕ ನಾಯಂಡಹಳ್ಳಿ ಜಂಕ್ಷನ್ ಮೂಲಕ ಬೆಂಗಳೂರು ನಗರದ ವಿವಿಧ ಕ್ಷೇತ್ರಗಳಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಮೇಕೆದಾಟುವಿನಿಂದ ಬೆಂಗಳೂರಿಗೆ 5 ದಿನ ಹಾಗೂ ಬೆಂಗಳೂರು ನಗರದಲ್ಲಿ 5 ದಿನ ಪಾದಯಾತ್ರೆ ನಡೆಯಲಿದ್ದು, ಒಟ್ಟು ಹದಿನೈದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 169 ಕಿ.ಮೀ. ಉದ್ದದ ಪಾದಯಾತ್ರೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ: ಚರ್ಚೆಯಾಗಲಿಲ್ಲ ಮೇಕೆದಾಟು ಯೋಜನೆ
ಅಂತಿಮವಾಗಿ ಜ.19ರಂದು ಬಸವನಗುಡಿ ಅಥವಾ ಸ್ವಾತಂತ್ರ್ಯ ಉದ್ಯಾನದಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ನಡೆಸಿ ಕೂಡಲೇ ಯೋಜನೆ ಜಾರಿ ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ(Government of Karnataka) ಒತ್ತಾಯ ಮಾಡಲಿದ್ದಾರೆ.
ವಿನಾಕಾರಣ ವಿಳಂಬ- ಸಿದ್ದರಾಮಯ್ಯ:
ಸಭೆ ಬಳಿಕ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಬೆಂಗಳೂರು ನಗರಕ್ಕೆ 60 ಟಿಎಂಸಿ ಕುಡಿಯುವ ನೀರು ಹಾಗೂ 400 ಮೆ.ವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು. 1968ರಿಂದಲೂ ಕಾಂಗ್ರೆಸ್ ಈ ಯೋಜನೆ ಜಾರಿಗೆ ಉದ್ದೇಶಿಸಿತ್ತು. ಆದರೆ, ಕಾವೇರಿ ನೀರು(Kaveri Water) ಹಂಚಿಕೆ ವಿವಾದ ಬಗೆಹರಿಯದ ಹಿನ್ನೆಲೆಯಲ್ಲಿ ನೆನೆಗುದಿಗೆ ಬಿದ್ದಿತ್ತು. ಇದೀಗ ವಿವಾದ ಬಗೆಹರಿದಿರುವುದರಿಂದ 2013ರಲ್ಲಿ ನಮ್ಮ ಸರ್ಕಾರ ಡಿಪಿಆರ್(DPR) ಸಿದ್ಧಪಡಿಸಿತ್ತು. 2018ರಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಅವರು 9,600 ಕೋಟಿ ರು. ವೆಚ್ಚದಲ್ಲಿ ವಿವರವಾದ ಡಿಪಿಆರ್ ಸಿದ್ಧಪಡಿಸಿದ್ದಾರೆ ಎಂದರು.
ಈ ಯೋಜನೆ ಕುಡಿಯುವ ನೀರಿಗೆ ಸಂಬಂಧಿಸಿದ್ದರಿಂದ ಪರಿಸರ ಇಲಾಖೆ(Department of the Environment) ಅನುಮತಿ ಹೊರತುಪಡಿಸಿ ಬೇರೆ ಯಾವುದೇ ಅನುಮತಿ ಬೇಕಾಗಿಲ್ಲ. ಹೀಗಾಗಿ ಕೂಡಲೇ ಕಾಮಗಾರಿ ಪ್ರಾರಂಭಿಸಬೇಕು. ಟೆಂಡರ್ ಮಾಡಿ ಕಾಮಗಾರಿ ಆರಂಭಿಸಿದರೆ ಪಾದಯಾತ್ರೆ ವಾಪಸು ಪಡೆಯಲು ಸಹ ನಿರ್ಧರಿಸಲಾಗುವುದು ಎಂದು ಹೇಳಿದರು.
ಈ ಸರ್ಕಾರದಲ್ಲಿ ಎತ್ತಿನಹೊಳೆ, ಭದ್ರಾ ಮೆಲ್ದಂಡೆ, ಮಹದಾಯಿ(Mahadayi) ಎಲ್ಲವೂ ನಿಂತು ಹೋಗಿದೆ. ಎಲ್ಲದಕ್ಕೂ ಕೊರೋನಾ ನೆಪ ಹೇಳುವ ಸರ್ಕಾರವು ಕೊರೋನಾಗೆ ಖರ್ಚು ಮಾಡಿರುವುದು 5 ಸಾವಿರ ಕೋಟಿ ರು. ಮಾತ್ರ. ಅದರಲ್ಲೂ ಪರ್ಸೆಂಟೇಜ್ ಪಡೆದಿದ್ದಾರೆ. ಪರ್ಸೆಂಟೇಜ್ ಆಸೆ ಬಿಟ್ಟು ಜನಪರ ಯೋಜನೆ ಮಾಡಲಿ ಎಂದು ಒತ್ತಾಯಿಸಿದರು.
ಮೇಕೆದಾಟು ಯೋಜನೆಗೆ ಮತ್ತೊಂದು ವಿಘ್ನ
ಎಲ್ಲರೂ ಭಾಗವಹಿಸಬಹುದು:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಸುಪ್ರೀಂ ಕೋರ್ಟ್ ರಾಜ್ಯದ ಪರ ತೀರ್ಪು ನೀಡಿದೆ. ಕಾವೇರಿಯಿಂದ ತಮಿಳುನಾಡಿಗೆ ಪ್ರತಿ ವರ್ಷ 172 ಟಿಎಂಸಿ ನೀರು ಮಾತ್ರ ಬಿಡುಗಡೆ ಮಾಡಬೇಕು. ಉಳಿದ ನೀರಿನ ಲೆಕ್ಕ ಕೇಳುವ ಅಧಿಕಾರ ತಮಿಳುನಾಡಿಗೆ ಇಲ್ಲ. ಹೀಗಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರದ ಮೇಲೆ ಒತ್ತಡ ಹೇರಲು ಪಾದಯಾತ್ರೆ ನಡೆಸುತ್ತಿದ್ದೇವೆ. ಪಾದಯಾತ್ರೆಯಲ್ಲಿ ಕೇವಲ ಕಾಂಗ್ರೆಸ್‌ನವರು ಮಾತ್ರವಲ್ಲ. ಪಕ್ಷಾತೀತವಾಗಿ ಎಲ್ಲಾ ರೈತರು, ಕಾರ್ಮಿಕರು, ಅಪಾರ್ಟ್‌ಮೆಂಟ್ ನಿವಾಸಿಗಳು, ಕಾರ್ಖಾನೆಗಳ ಸಿಬ್ಬಂದಿ, ಮಾಲೀಕರು, ಸಮಾಜ ಸೇವಕರು, ಸಾಹಿತಿಗಳು ಎಲ್ಲರೂ ಭಾಗವಹಿಸಬಹುದು. ಬೆಂಗಳೂರಿನ ಕುಡಿಯುವ ನೀರಿನ ಕೊರತೆ ಹಾಗೂ ಟ್ಯಾಂಕರ್ ನೀರಿನ ಹಾವಳಿ ತಪ್ಪಿಸಲು ಕೈ ಜೋಡಿಸಬೇಕು ಎಂದು ಕರೆ ನೀಡಿದರು.
ಹಿಂದೇಟು ಹಾಕಲ್ಲ
ಮೇಕೆದಾಟು ಯೋಜನೆ ಜಾರಿ ವಿಚಾರದಲ್ಲಿ ಸರ್ಕಾರ ಹಿಂದೇಟು ಹಾಕುವುದಿಲ್ಲ. ಸುಪ್ರೀಂಕೋರ್ಟ್‌ನಲ್ಲಿ(Supreme Court) ಈ ಕುರಿತ ಪ್ರಕರಣ ವಿಚಾರಣೆ ಹಂತದಲ್ಲಿದೆ. ಕೇಂದ್ರ ಜಲ ಆಯೋಗ, ಪರಿಸರ, ಅರಣ್ಯ ಸಚಿವಾಲಯದಿಂದ ಅನುಮೋದನೆ ಸಿಕ್ಕ ಬಳಿಕ ಮುಂದಿನ ಕೆಲಸಗಳನ್ನು ಹಂತಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ