ಕೆಂಪು ಈರುಳ್ಳಿ ರಫ್ತು ನಿಷೇಧ ತೆರವು: ಕೇಂದ್ರಕ್ಕೆ ಥ್ಯಾಂಕ್ಸ್ ಎಂದ್ರು ಡಿಸಿಎಂ

Published : Oct 30, 2019, 08:27 AM IST
ಕೆಂಪು ಈರುಳ್ಳಿ ರಫ್ತು ನಿಷೇಧ ತೆರವು: ಕೇಂದ್ರಕ್ಕೆ ಥ್ಯಾಂಕ್ಸ್ ಎಂದ್ರು ಡಿಸಿಎಂ

ಸಾರಾಂಶ

ಕೆಂಪು ಈರುಳ್ಳಿ ರಫ್ತು ಸಂಪೂರ್ಣ ನಿಷೇಧವನ್ನು ಸಡಿಲಗೊಳಿಸುವ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ್ ನಾರಾಯಣ ಧನ್ಯವಾದ ಅರ್ಪಿಸಿದ್ದಾರೆ. ಈರುಳ್ಳಿ ಬೆಲೆ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಸಂಪೂರ್ಣ ನಿಷೇಧಿಸಿದ್ದರಿಂದ ರಾಜ್ಯದ ಕೆಂಪು ಗುಲಾಬಿ ಈರುಳ್ಳಿ ಬೆಳೆಗಾರರು ದರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದರು.

ಬೆಂಗಳೂರು(ಅ.30): ಕೆಂಪು ಈರುಳ್ಳಿ ರಫ್ತು ಸಂಪೂರ್ಣ ನಿಷೇಧವನ್ನು ಸಡಿಲಗೊಳಿಸುವ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ್ ನಾರಾಯಣ ಧನ್ಯವಾದ ಅರ್ಪಿಸಿದ್ದಾರೆ.

ಈರುಳ್ಳಿ ಬೆಲೆ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಸಂಪೂರ್ಣ ನಿಷೇಧಿಸಿದ್ದರಿಂದ ರಾಜ್ಯದ ಕೆಂಪು ಗುಲಾಬಿ ಈರುಳ್ಳಿ ಬೆಳೆಗಾರರು ದರ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ಕೆಂಪು ಈರುಳ್ಳಿ ನಿಷೇಧ ತೆರವುಗೊಳಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈ ಮನವಿಗೆ ಕೇಂದ್ರ ಸ್ಪಂದಿಸಿ ನ.30ರ ವರೆಗೆ 9 ಸಾವಿರ ಟನ್‌ವರೆಗೆ ರಫ್ತಿಗೆ ಅವಕಾಶ ನೀಡಿದೆ. ಇದರಿಂದ ರಾಜ್ಯದ ಈರುಳ್ಳಿ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಷ್ಠೆಯಾದ ಮೆಡಿಕಲ್ ಕಾಲೇಜ್: ಡಿಕೆಶಿಗೆ ಡಿಚ್ಚಿ ಕೊಡಲು ಸುಧಾಕರ್ ಮೈಲೇಜ್

ಕೆಂಪು ಗುಲಾಬಿ ಈರುಳ್ಳಿಗೆ ವಿದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇದ್ದು, ರಫ್ತು ನಂಬಿಯೇ ರಾಜ್ಯದ ರೈತರು ಈ ಬೆಳೆ ಬೆಳೆಯುತ್ತಿದ್ದಾರೆ. ಆದ್ದರಿಂದ ರಫ್ತಿಗೆ ಯಾವುದೇ ನಿರ್ಬಂಧ ವಿಧಿಸದೆ ರೈತರ ನೆರವಿಗೆ ಧಾವಿಸಬೇಕು. ಅಲ್ಲದೆ, ಈರುಳ್ಳಿ ರಫ್ತಿಗೆ ವಿನಾಯಿತಿ ಪಡೆಯಲು ಕೇಂದ್ರ ವಾಣಿಜ್ಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಶೀಘ್ರ ಸಮಸ್ಯೆ ಬಗೆಹರಿಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ.

ಕೊಳೆತ ತರಕಾರಿ: ತಾಜ್‌ ವೆಸ್ಟ್‌ಎಂಡ್‌ಗೆ ದಂಡ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕದಲ್ಲೂ ಸಾಮ್ರಾಜ್ಯ ವಿಸ್ತರಣೆಗೆ ದಳಪತಿ ಸ್ಕೆಚ್.. ಯಾರ ಸಪೋರ್ಟ್, ಏನಾಗ್ತಿದೆ ಇಲ್ಲಿ? ಸೀಕ್ರೆಟ್..
ಸರ್ಕಾರಿ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮತಿ; ಆಯ್ಕೆ ಪ್ರಕ್ರಿಯೆ ವಿವರ ಇಲ್ಲಿದೆ!