Kempegowda Stadium: ಕೆಂಪೇಗೌಡರ ಹೆಸರಲ್ಲಿ ಬೃಹತ್ ಕ್ರೀಡಾಂಗಣ; ಡಿಸಿಎಂ ಘೋಷಣೆ, ಸ್ಟೇಡಿಯಂ ಹೇಗಿರಲಿದೆ ಗೊತ್ತಾ?

Kannadaprabha News, Ravi Janekal |   | Kannada Prabha
Published : Jun 28, 2025, 08:10 AM IST
Kempegowda stadium bengaluru

ಸಾರಾಂಶ

ಬೆಂಗಳೂರಿನಲ್ಲಿ ಕೆಂಪೇಗೌಡರ ಹೆಸರಿನಲ್ಲಿ 60,000 ಪ್ರೇಕ್ಷಕರ ಸಾಮರ್ಥ್ಯದ ಬೃಹತ್ ಕ್ರೀಡಾಂಗಣ ನಿರ್ಮಾಣವಾಗಲಿದೆ. 50 ಎಕರೆ ಜಾಗ ಗುರುತಿಸಲಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಯೋಜನೆಯನ್ನು ಘೋಷಿಸಿದ್ದಾರೆ. 

ಬೆಂಗಳೂರು(ಜೂ.28) ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ 50 ಎಕರೆ ಜಾಗ ಗುರುತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಬಾಬು ಜಗಜೀವನ್ ರಾಮ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನೂತನ ‘ಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹುಟ್ಟಿದಾಗ ಭೂಮಿ ಮೇಲಿರುತ್ತೇವೆ. ಸತ್ತಾಗ ಭೂಮಿ ಕೆಳಗಿರುತ್ತೇವೆ. ಆದರೆ ನಮ್ಮ ಸಾಧನೆಗಳು ಮೇಲಿರುತ್ತವೆ. ಹೀಗಾಗಿ ನಗರಕ್ಕೆ ಅಗತ್ಯವಾಗಿ ಬೇಕಿರುವ ಸ್ಟೇಡಿಯಂ ನಿರ್ಮಾಣಕ್ಕೆ ನಿರ್ಧರಿಸಿದ್ದೇವೆ. ಈಗಾಗಲೇ 50 ಎಕರೆ ಜಾಗ ಗುರುತಿಸಿದ್ದು, 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳಬಹುದಾದ ವಿಶಾಲವಾದ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು ಎಂದು ಮಾಹಿತಿ ನೀಡಿದರು.ಅಲ್ಲದೆ, ನಗರದಲ್ಲಿ ಏನೂ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.

ಕಸ ವಿಲೇವಾರಿ ಸಮಸ್ಯೆಯಾಗದಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ವಿವಿ ವ್ಯಾಪ್ತಿಯಲ್ಲಿ 100 ಕೋಟಿ ರು. ವೆಚ್ಚದಲ್ಲಿ ಸಂಶೋಧನಾ ಕೇಂದ್ರ ಕೂಡ ನಿರ್ಮಾಣ ಮಾಡಲಾಗುತ್ತಿದೆ. ಕೆಂಪೇಗೌಡರ ಹೆಸರಿನಲ್ಲಿ ಭವ್ಯ ಕಟ್ಟಡ ನಿರ್ಮಾಣಕ್ಕೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಿಂದ 100 ಕೋಟಿ ಮೀಸಲಿಟ್ಟಿದ್ದೇವೆ. ಮೂರ್ನಾಲ್ಕು ಜನ ಕಟ್ಟಡ ವಾಸ್ತುಶಿಲ್ಪಿಗಳು ವಿನ್ಯಾಸ ನೀಡಿದ್ದಾರೆ. ಇದರ ಬಗ್ಗೆ ನಿರ್ಮಲಾನಂದನಾಥ ಶ್ರೀಗಳ ಗಮನಕ್ಕೂ ತರಲಾಗುವುದು ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಕಾವೇರಿ 5ನೇ ಹಂತದ ಯೋಜನೆ ಪೂರ್ಣಗೊಳಿಸಿ 110 ಹಳ್ಳಿಗಳಿಗೆ ನೀರು ನೀಡುತ್ತಿದ್ದೇವೆ. 6ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಬೆಂಗಳೂರಿನ ಅಭಿವೃದ್ಧಿಗೆ ಬೇಕಾದಷ್ಟು ಶ್ರಮ ಪಡುತ್ತಿದ್ದೇವೆ. ಸಿಕ್ಕಿರುವ ಅವಕಾಶದಲ್ಲಿ ಸಾಕ್ಷಿಗುಡ್ಡೆ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

  • ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ
  • ಈಗಾಗಲೇ 50 ಎಕರೆ ಜಾಗ ಗುರುತಿಸಲಾಗಿದೆ ಎಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
  • ನೂತನ ‘ಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿತರಣೆ ಕಾರ್ಯಕ್ರಮ
  • ಹುಟ್ಟಿದಾಗ ಭೂಮಿ ಮೇಲಿರುತ್ತೇವೆ. ಸತ್ತಾಗ ಭೂಮಿ ಕೆಳಗಿರುತ್ತೇವೆ. ಆದರೆ ನಮ್ಮ ಸಾಧನೆಗಳು ಮೇಲಿರುತ್ತವೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!
ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!