Latest Videos

ಪೆನ್‌ಡ್ರೈವ್‌ ಪ್ರಕರಣ: 100 ಕೋಟಿ ಆಮಿಷದ ಬಗ್ಗೆ ಬೇಕಿದ್ದರೆ ಲೋಕಾಯುಕ್ತರಿಗೆ ದೂರು ನೀಡಿ, ಡಿ.ಕೆ.ಶಿವಕುಮಾ‌ರ್

By Kannadaprabha NewsFirst Published May 19, 2024, 7:45 AM IST
Highlights

'ದೇವರಾಜೇಗೌಡನ ಬಳಿ ಆರೋಪಗಳ ಬಗ್ಗೆ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಆತ ಮಾನಸಿಕ ಸಮಸ್ಯೆ ಎದುರಿಸುತ್ತಿರಬೇಕು. ಆತ ಏನಾದರೂ ಮಾತನಾಡಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನೀವು ಮಾಧ್ಯಮ ದವರುಯಾರೋ ಏನೋ ಹೇಳುತ್ತಾರೆ ಎಂದು ಇಂತಹ ವಿಚಾರ ಹಾಕಿಕೊಂಡು ಕೂತರೆ ನಿಮ್ಮ ಘನತೆ ಏನಾಗಬೇಕು? ಅವನ ಹೇಳಿಕೆಯಲ್ಲಿ ಸತ್ಯ ಇದೆಯೇ, ಇಲ್ಲವೆ ಎಂದು ಪರಿಶೀಲಿಸಬೇಕಲ್ಲವೇ?' ಎಂದು ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ 

ಬೆಂಗಳೂರು(ಮೇ.19): ಪೆನ್‌ಡ್ರೈವ್‌ ಪ್ರಕರಣದಲ್ಲಿ ನನ್ನ ಮೇಲೆ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಅಷ್ಟೇ ಹೊರತು ಮಾನಸಿಕ ಸಮಸ್ಯೆ ಎದುರಿಸುತ್ತಿರುವ ದೇವರಾಜೇಗೌಡನಂತಹ ಮೆಂಟಲ್ ಗಿರಾಕಿಗಳಿಗೆ ನಾನು ಪ್ರತಿಕ್ರಿಯಿಸಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ. `ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.  ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ 100 ಕೋಟಿ ಆಮಿಷ ಒಡ್ಡಿರುವುದಾಗಿ ಆರೋಪಿಸಿರುವ ದೇವರಾಜೇಗೌಡ ಹೇಳಿಕೆಗೆ ಈ ರೀತಿ ತೀಕ ತೀಕ್ಷ್ಯ ಪ್ರತಿಕ್ರಿಯೆ ನೀಡಿದರು.

'ದೇವರಾಜೇಗೌಡನ ಬಳಿ ಆರೋಪಗಳ ಬಗ್ಗೆ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ. ಆತ ಮಾನಸಿಕ ಸಮಸ್ಯೆ ಎದುರಿಸುತ್ತಿರಬೇಕು. ಆತ ಏನಾದರೂ ಮಾತನಾಡಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನೀವು ಮಾಧ್ಯಮ ದವರುಯಾರೋ ಏನೋ ಹೇಳುತ್ತಾರೆ ಎಂದು ಇಂತಹ ವಿಚಾರ ಹಾಕಿಕೊಂಡು ಕೂತರೆ ನಿಮ್ಮ ಘನತೆ ಏನಾಗಬೇಕು? ಅವನ ಹೇಳಿಕೆಯಲ್ಲಿ ಸತ್ಯ ಇದೆಯೇ, ಇಲ್ಲವೆ ಎಂದು ಪರಿಶೀಲಿಸಬೇಕಲ್ಲವೇ?' ಎಂದು ಅಸಮಾಧಾನ ವ್ಯಕ್ತಪಡಿಸಿದರು. 'ಯಾರಾದರೂ ಆರೋಪ ಮಾಡುವಾಗ ಅದಕ್ಕೆ ಆಧಾರ ಇರಬೇಕಲ್ಲವೇ? ತಲೆಕೆಟ್ಟು, ಆಸ್ಪತ್ರೆ ಸೇರಬೇಕಾದವರ ಮಾತಿಗೆ ಇಷ್ಟು ಪ್ರಾಮುಖ್ಯತೆ ನೀಡುವುದು ಸರಿಯಲ್ಲ. ಆತನೊಬ್ಬ ಮೆಂಟಲ್ ಗಿರಾಕಿ' ಎಂದರು.

ಪೆನ್‌ಡ್ರೈವ್‌ ಕೇಸಿಗೆಂದೇ ಡಿಕೆಶಿಯಿಂದ 4 ಸಚಿವರ ತಂಡ: ದೇವರಾಜೇಗೌಡ

'ಆ ವ್ಯಕ್ತಿ ಜತೆ ನೀವು ಮಾತನಾಡಿರುವುದಕ್ಕೆ ಮಾಧ್ಯಮಗಳು ಗಂಭೀರವಾಗಿ ಪರಿಗಣಿಸಿವೆ. ನಾನು ಆ ವ್ಯಕ್ತಿ ಜತೆ ವಿಶೇಷವಾಗಿ ಮಾತನಾ ಡಿಲ್ಲ. ನಾನು ಡಿಸಿಎಂ. ನೂರಾರು ಜನ ಬಂದು ನಮ್ಮನ್ನು ಸಂಪರ್ಕಿಸುತ್ತಾರೆ. ಒಳ್ಳೆಯವರು, ಕೆಟ್ಟವರು ಎಲ್ಲರೂ ಬರುತ್ತಾರೆ. ನನ್ನ ಬಳಿ ಬರುವವರನ್ನು ಸತ್ಯವಂತರು, ಸುಳ್ಳು ಹೇಳುವವರು ಎಂದು ಪರಿಶೀಲಿಸಿಕೊಂಡು ಕೂರಲು ಸಾಧ್ಯವೇ? ನಾನು ಯಾವುದೇ ತಪ್ಪು ಮಾಡಿಲ್ಲ, ಮಾತನಾಡಿಲ್ಲ ಎಂದರು.

ಆರೋಪಕ್ಕೆ ಏನಾದರೂ ಆಧಾರ ಇರಬೇಕಲ್ಲವೇ?

ಯಾರಾದರೂ ಆರೋಪ ಮಾಡುವಾಗ ಅದಕ್ಕೆ ಆಧಾರ ಇರಬೇಕಲ್ಲವೇ? ತಲೆಕೆಟ್ಟು, ಆಸ್ಪತ್ರೆಗೆ ಸೇರಬೇಕಾದವರ ಮಾತಿಗೆ ಪ್ರಾಮು ಖ್ಯತೆ ನೀಡುವುದು ಸರಿಯಲ್ಲ. ದೇವರಾಜೇಗೌಡ ಮೆಂಟಲ್ ಗಿರಾಕಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

ವಕೀಲ ದೇವರಾಜೇಗೌಡ ಹೇಳಿಕೆಗೆ ಸಚಿವರು ಗರಂ

ಬೆಂಗಳೂರು: ಪೆನ್‌ಡ್ರೈವ್ ಪ್ರಕರಣ ನೋಡಿಕೊಳ್ಳಲು ಡಿ.ಕೆ.ಶಿವಕುಮಾರ್ 4 ಮಂತ್ರಿಗಳ ತಂಡ ರಚಿಸಿದ್ದಾರೆ ಎಂಬ ದೇವರಾಜೇಗೌಡ ಹೇಳಿಕೆಗೆ ಸಚಿವರು ಕಿಡಿಕಾರಿದ್ದಾರೆ. ಇಂತಹ ಆರೋಪ ಮಾಡುವ ದೇವರಾಜೇಗೌಡ ಮೊದಲು ಜೈಲಿನಿಂದ ಆಚೆ ಬರಲಿ ಎಂದು ರಾಮಲಿಂಗಾ ರೆಡ್ಡಿ, ಆತ ಯಾರೆಂದೇ ನನಗೆ ಗೊತ್ತಿಲ್ಲ ಎಂದು ಚಲುವ ರಾಯಸ್ವಾಮಿ, ಅಮಿತ್ ಶಾ ಕೈಲಿ ತನಿಖೆ ಮಾಡಿಸಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 

click me!