
ಬೆಂಗಳೂರು (ಆ.17): ನಗರತ್‌ಪೇಟೆಯ ಮೂರು ಅಂತಸ್ತಿನ ಕಟ್ಟಡದಲ್ಲಿ ಶನಿವಾರ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ರಾಜಸ್ಥಾನ ಮೂಲದ ಮದನ್ ಎಂಬ ವ್ಯಕ್ತಿ ಸಜೀವ ದಹನಗೊಂಡಿದ್ದಾರೆ. ಈ ದುರಂತದಲ್ಲಿ ಒಟ್ಟು ಐವರು ಸಾವನ್ನಪ್ಪಿದ್ದು, ಎಲ್ಲರೂ ರಾಜಸ್ಥಾನದ ಬಡ ಕಾರ್ಮಿಕರಾಗಿದ್ದಾರೆ.
ಘಟನೆ ಬಗ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಈ ಕಟ್ಟಡವನ್ನು ಅವೈಜ್ಞಾನಿಕವಾಗಿ ಮತ್ತು ಅಕ್ರಮವಾಗಿ ನಿರ್ಮಿಸಲಾಗಿದೆ. ಇಂತಹ ಅನಧಿಕೃತ ಕಟ್ಟಡಗಳಿಗೆ ಸಾರ್ವಜನಿಕರೂ ಜವಾಬ್ದಾರರಾಗುತ್ತಾರೆ. ಬೆಂಕಿ ಸಂಭವಿಸಿದಾಗ ಫೈಯರ್ ಫೋರ್ಸ್‌ಗೆ ಸಕಾಲದಲ್ಲಿ ತಲುಪಲು ಸಾಧ್ಯವಾಗಿಲ್ಲ, ಒಂದೂವರೆ ಕಿಲೋಮೀಟರ್ ದೂರದಿಂದ ನೀರು ತಂದು ಆರಿಸಲಾಗಿದೆ. ಮೊನ್ನೆ ವಿಲ್ಸನ್ ಗಾರ್ಡನ್‌ನಲ್ಲಿ ಸ್ಫೋಟ ಸಂಭವಿಸಿತು, ಈಗ ಈ ದುರಂತ. ಇವೆಲ್ಲ ಬೆಂಗಳೂರಿಗೆ ಶೋಭೆ ತರುವಂತಹದ್ದಲ್ಲ ಎಂದರು.
ಒಂದು ಕಟ್ಟಡ ಕುಸಿದರೆ ಪಕ್ಕದ ಕಟ್ಟಡಗಳೂ ಕುಸಿಯುವ ಸ್ಥಿತಿಯಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಇಂತಹ ಅಕ್ರಮ ಕಟ್ಟಡಗಳಿಗೆ ತಡೆಯಬೇಕು ಎಂದರು.
ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಕಟ್ಟಡದ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿ, ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಎಲ್ಲ ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಾಡಿಗೆ ತೆಗೆದುಕೊಳ್ಳುವವರು ಕೇವಲ ಹಣಕ್ಕಾಗಿ ಕಟ್ಟಡ ನಿರ್ಮಿಸದೇ, ಸುರಕ್ಷತೆಗೆ ಆದ್ಯತೆ ನೀಡಬೇಕು. ಇನ್ನುಮುಂದೆ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಎಚ್ಚರಿಕೆ ನೀಡಿದರು. ಈ ಘಟನೆಯು ಬೆಂಗಳೂರಿನಲ್ಲಿ ಅಕ್ರಮ ಕಟ್ಟಡಗಳ ಸಮಸ್ಯೆಯನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ