ಮುಖ್ಯಮಂತ್ರಿಗಳು, ನಾನು ಹಾಗೂ ಕೆಲ ಸಚಿವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದೇವೆ. ಮಂಜುನಾಥ, ಅಣ್ಣಪ್ಪನ ದರ್ಶನ ಪಡೆದಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದರು.
ಧರ್ಮಸ್ಥಳ (ಮೇ.25): ಮುಖ್ಯಮಂತ್ರಿಗಳು, ನಾನು ಹಾಗೂ ಕೆಲ ಸಚಿವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದೇವೆ ಪ್ರತಿಸಲ ಧರ್ಮಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆಯುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಮಂಜುನಾಥ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ, ರಾಜ್ಯದಲ್ಲಿ ಮಳೆ ಆರಂಭವಾಗಿದೆ. ಬಹಳ ಸಂತೋಷ ಆಗ್ತಿದೆ. ನಮ್ಮ ಧರ್ಮದ ಸಂಪ್ರದಾಯದಂತೆ ಧರ್ಮಸ್ಥಳಕ್ಕೆ ಬಂದಿದ್ದೇವೆ. ಮಾತು ಬಿಡದ ಮಂಜುನಾಥನಿಗೆ ನಮಸ್ಕಾರ ಹೇಳಲು ಸಿಎಂ ಸಿದ್ದರಾಮಯ್ಯ ಅವರು ಬಂದಿದ್ದಾರೆ. ರಾಜ್ಯದ ಜನರ ಪರವಾಗಿ ಹಾಗೂ ವೈಯಕ್ತಿವಾಗಿ ಪ್ರಾರ್ಥನೆ ಮಾಡಿದ್ದಾರೆ. ರಾಜ್ಯದಲ್ಲಿ ಮಳೆ, ಬೆಳೆ ಚೆನ್ನಾಗಿ ಆಗಿ ಶಾಂತಿ ನೆಲೆಸಲಿ ಅಂತ ಪ್ರಾರ್ಥನೆ ಮಾಡಿದ್ದಾರೆ ಎಂದರು.
ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದ ಸಿಎಂ ಡಿಸಿಎಂ; ಜೈ ಶ್ರೀರಾಮ್ ಘೋಷಣೆ ಕೂಗಿದ ಭಕ್ತರು!
ಶಕ್ತಿ ಯೋಜನೆಯಿಂದ ಸಾವಿರಾರು ಜನರು ದೇವಸ್ಥಾನಕ್ಕೆ ಬರ್ತಿದ್ದಾರೆ ಅಂತಾ ಡಾ ವೀರೇಂದ್ರ ಹೆಗ್ಗಡೆಯವರು ಹೇಳಿದ್ರು. ಜನರು ಧರ್ಮಸ್ಥಳಕ್ಕೆ ಬರ್ತಿರೋದ್ರಿಂದ ಒಳ್ಳೆದಾಗ್ತಿದೆ ಅಂದ್ರು ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ನಮ್ಮ ಬಳಿ ಸಂತೋಷ ವ್ಯಕ್ತಪಡಿಸಿದ್ರು. ದೇವಸ್ಥಾನದ ಒಳಗಡೆ ಹೆಣ್ಮಕ್ಕಳು ಕೂಡ ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ತಿಳಿಸಿದರು. ಅವರೆಲ್ಲರ ಪ್ರಾರ್ಥನೆಯಿಂದ ನಮಗೆ ಇನ್ನಷ್ಟು ಶಕ್ತಿ ಬಂದಿದೆ. ಮಂಜುನಾಥ ನಮಗೆ ಆಶೀರ್ವಾದಿಸಿ ಇನ್ನಷ್ಟು ಶಕ್ತಿ ತುಂಬುತ್ತಾನೆ ಅನ್ನೋ ನಂಬಿಕೆ ಇದೆ ಎಂದರು.