
ಚಿಕ್ಕಮಗಳೂರು (ಜ.31): ವಿಧಾನಸಭೆ ಹಾಗೂ ವಿಧಾನ ಪರಿಷತ್ತು ಸಭಾಧ್ಯಕ್ಷರ ಜತೆ ಚರ್ಚಿಸಿ ಸದನಗಳಲ್ಲಿ ಮೊಬೈಲ್ ಬಳಕೆ ನಿರ್ಬಂಧಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ನೂತನ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.
ಇಲ್ಲಿ ಮಾತನಾಡಿದ ಅವರು, ಪ್ರಕಾಶ್ ಕೆ.ರಾಠೋಡ್ ಪರಿಷತ್‌ನಲ್ಲಿ ಮೊಬೈಲ್‌ನಲ್ಲಿ ಅಶ್ಲೀಲ ದೃಶ್ಯಗಳನ್ನು ವೀಕ್ಷಿಸುತ್ತಿರುವುದು ಮಾಧ್ಯಮಗಳಲ್ಲಿ ಗಮನಿಸಿದ್ದೇವೆ. ಈ ಬಗ್ಗೆ ಎರಡೂ ಸದನದ ಸಭಾಪತಿಗಳ ಜೊತೆ ಚರ್ಚಿಸುತ್ತೇವೆ.
ಕೋವಿಡ್ ವರ್ಚುವಲ್ ಮೀಟಿಂಗ್‌ನಲ್ಲಿ ಕ್ಯಾಂಡಿ ಕ್ರಶ್ ಆಡಿದ ಜನಪ್ರತಿನಿಧಿ! ..
ಸದನ ನಡೆಯುವಾಗ ಮೊಬೈಲ್ ಬಳಸುವ ಅವಶ್ಯಕತೆ ಇರುವುದಿಲ್ಲ. ಅಷ್ಟಕ್ಕೂ ಸದನದೊಳಗೆ ಮೊಬೈಲ್ ಜಾಮರ್ ಅಳವಡಿಸಲಾಗಿರುತ್ತದೆ ಎಂದರು. ಸದನಕ್ಕೆ ಮೊಬೈಲ್ ಕೊಂಡೊಯ್ಯುವುದನ್ನು ನಿರ್ಬಂಧಿಸಲು ಅಡೆತಡೆ ಇಲ್ಲ. ಈ ಬಗ್ಗೆ ಸಭಾಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನಿಸುವ ಪ್ರಯತ್ನ ಮಾಡುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ