ಲಾಕ್‌ಡೌನ್‌ ವಿಸ್ತರಣೆ ಬೆನ್ನಲ್ಲೇ ಕರ್ನಾಟಕ ಪೊಲೀಸ್ ಇಲಾಖೆಯಿಂದ ಹೊರಬಿತ್ತು ಮಹತ್ವದ ಆದೇಶ

Published : Apr 14, 2020, 04:54 PM IST
ಲಾಕ್‌ಡೌನ್‌ ವಿಸ್ತರಣೆ ಬೆನ್ನಲ್ಲೇ ಕರ್ನಾಟಕ ಪೊಲೀಸ್ ಇಲಾಖೆಯಿಂದ ಹೊರಬಿತ್ತು ಮಹತ್ವದ ಆದೇಶ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್‌ಡೌನ್‌ ಅನ್ನು ಮೇ3ರ ವರಗೆ ವಿಸ್ತರಣೆ ಮಾಡಿದ ಬೆನ್ನಲ್ಲೇ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.

ಬೆಂಗಳೂರು, (ಏ.14): ಕೊರೋನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳ ಪಾಸ್ ಅವಧಿಯನ್ನು ಸಹ ವಿಸ್ತರಿಸಲಾಗಿದೆ.

ಮೊದಲ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಸಾಗಾಟಕ್ಕೆ, ಅಗತ್ಯ ವಸ್ತುಗಳ ಮಾರಾಟಗಾರರಿಗೆ ರಾಜ್ಯ ಪೊಲೀಸ್ ಇಲಾಖೆಯಿಂದ ಕರ್ಪ್ಯೂ ಪಾಸ್ ಅನ್ನು ನೀಡಲಾಗಿತ್ತು.ಇದೀಗ ಅದೇ ಪಾಸ್‌ಗಳು ಏಪ್ರಿಲ್ 20 ರವರೆಗೂ ಮಾನ್ಯ ಮಾಡಿ ಅದೇಶ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಲಾಕ್‌ಡೌನ್‌ ನಡುವೆ ಪಾಸ್‌ಗಾಗಿ 44 ಲಕ್ಷ ಜನ ಅರ್ಜಿ!

ಮೇ.3ರ ವರೆಗೆ ಲಾಕ್ ಡೌನ್ ಅವಧಿಯನ್ನು ವಿಸ್ತರಣೆ ಮಾಡಿರುವ ಹಿನ್ನಲೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್, ಕರ್ಪ್ಯೂ ಪಾಸ್ ಅವಧಿ ಏ.20ರವರೆಗೂ ಪಾಸ್ ಮುಂದವರಿಕೆ ಮಾಡಿ ಆದೇಶಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಕೊರೋನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಇಂದು (ಮಂಗಳವಾರ) ದೇಶವನ್ನುದ್ದೇಶಿಸಿ ಮಾತನಾಡಿದರು. 

ಈ ವೇಳೇ  2ನೇ ಹಂತದ ಲಾಕ್ ಡೌನ್ ಅನ್ನು ಮೇ.3ರ ವರೆಗೆ ವಿಸ್ತರಣೆ ಮಾಡಿದ್ದರು. ಇದರಿಂದ ಏ.14ಕ್ಕೆ ಕೊನೆಗೊಳ್ಳಬೇಕಿದ್ದ ಪಾಸ್‌ಗಳ ಅವಧಿ ಸಹ ವಿಸ್ತರಣೆಯಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ