ಮನೆಯಿಂದಲೇ ಮತದಾನ: ಮೊದಲ ಸಲ ಅವಕಾಶ - 80 ವರ್ಷ ಆದವರು, ಅಂಗವಿಕಲರಿಗೆ ವ್ಯವಸ್ಥೆ

Published : Mar 12, 2023, 05:44 AM IST
ಮನೆಯಿಂದಲೇ ಮತದಾನ: ಮೊದಲ ಸಲ ಅವಕಾಶ - 80 ವರ್ಷ ಆದವರು, ಅಂಗವಿಕಲರಿಗೆ ವ್ಯವಸ್ಥೆ

ಸಾರಾಂಶ

ಇದೇ ಮೊದಲ ಬಾರಿಗೆ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲು ಚುನಾವಣಾ ಆಯೋಗ ನಿರ್ಧರಿಸಿದೆ. 

ಬೆಂಗಳೂರು (ಮಾ.12): ಇದೇ ಮೊದಲ ಬಾರಿಗೆ 80 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು, ಅಂಗವಿಕಲರು ಹಾಗೂ ಹಾಸಿಗೆ ಬಿಟ್ಟು ಏಳಲಾಗದ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡುವ ಅವಕಾಶ ನೀಡಲು ಚುನಾವಣಾ ಆಯೋಗ ನಿರ್ಧರಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಇದು ಜಾರಿಗೆ ಬರಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಶನಿವಾರ ಈ ಘೋಷಣೆ ಮಾಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಮಾಹಿತಿಯ ಪಡೆಯಲು ರಾಜ್ಯ ಪ್ರವಾಸ ಕೈಗೊಂಡಿದ್ದ ಆಯೋಗ ಕೈಗೊಂಡಿದ್ದ ಹಲವು ಕಾರ್ಯಕ್ರಮಗಳ ಮತ್ತು ಸಭೆಗಳ ಕುರಿತು ವಿಕಾಸಸೌಧದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು.

ಗುಜರಾತ್‌ ಇವಿಎಂ ರಾಜ್ಯಕ್ಕೆ ಬೇಡ: ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ನಿಂದ ಮನವಿ

‘ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ. ರಾಜ್ಯದಲ್ಲಿ 12.15 ಲಕ್ಷಕ್ಕೂ ಹೆಚ್ಚು ಮಂದಿ 80 ವರ್ಷಕ್ಕಿಂತ ಮೇಲ್ಪಟ್ಟವರಿದ್ದಾರೆ’ ಎಂದರು.

‘ಮನೆಯಿಂದಲೇ ಮತದಾನ ಮಾಡಲು ಇಚ್ಛಿಸುವವರ ಬಗ್ಗೆ ಮೊದಲೇ ರಾಜಕೀಯ ಪಕ್ಷಗಳಿಗೆ ಮಾಹಿತಿ ಒದಗಿಸಲಾಗುತ್ತದೆ. ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಿ ಪಾರದರ್ಶಕ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ಹೇಳಿದರು.

‘ಅಂಗವಿಕಲರಿಗೆ ಮತ್ತು ಹಿರಿಯರಿಗೆ ಮನೆಯಿಂದ ಮತಗಟ್ಟೆಗೆ ಬರಲು ಮತ್ತು ವಾಪಸ್‌ ಕಳುಹಿಸಲು ವಾಹನ ವ್ಯವಸ್ಥೆ ಮಾಡಲಾಗುವುದು. ‘ಸಕ್ಷಮ್‌ ಆ್ಯಪ್‌’ ಮೂಲಕ ತಮಗೆ ಬೇಕಾದ ಸೌಲಭ್ಯಗಳ ಬಗ್ಗೆ ಮೊದಲೇ ನೋಂದಾಯಿಸಿಕೊಳ್ಳಬೇಕು. ಆಗ ಆದ್ಯತೆಯ ಮೇರೆಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ದೃಷ್ಟಿದೋಷದ ಮತದಾರರಿಗೆ ಬ್ರೈಲ್‌ ಬ್ಯಾಲಟ್‌ ಪೇಪರ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆ’ ಎಂದು ವಿವರಿಸಿದರು.

ಮತದಾರರನ್ನು ಆಕರ್ಷಿಸಲು ಕಣ್ಮನ ಸೆಳೆಯುವಂತೆ ಸಿಂಗಾರಗೊಳ್ಳುತ್ತಿವೆ ಮತಗಟ್ಟೆಗಳು!

ಮನೆಯಿಂದ ಹೇಗೆ?
- ಚು.ಆಯೋಗದ ವೆಪ್‌ಸೈಟ್‌, ವೋಟರ್‌ ಹೆಲ್ಪ್‌ಲೈನ್‌ ಅಥವಾ ಸಕ್ಷಮ್‌ ಆ್ಯಪ್‌ನಲ್ಲಿ ನೋಂದಣಿ ಕಡ್ಡಾಯ
- ಸ್ಥಳೀಯ ಬೂತ್‌ ಮಟ್ಟದ ಚುನಾವಣಾಧಿಕಾರಿಗಳ ಕಚೇರಿಗಳಲ್ಲೂ ನೋಂದಣಿ ಮಾಡಿಸಲು ಅವಕಾಶ
- ನೋಂದಣಿ ಮಾಡಿಸಿಕೊಂಡ ಮತದಾರರ ಮನೆಗೆ ಪೊಲೀಸ್‌ ಭದ್ರತೆಯಲ್ಲಿ ಅಂಚೆ ಮತಚೀಟಿ ರವಾನೆ
- ಮನೆಯಲ್ಲೇ ಗೌಪ್ಯ ಮತದಾನಕ್ಕೆ ಅವಕಾಶ. ಇಡೀ ಮತದಾನ ಪ್ರಕ್ರಿಯೆ ಬಗ್ಗೆ ವಿಡಿಯೋ ಚಿತ್ರೀಕರಣ
- ಈ ರೀತಿ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ರಾಜಕೀಯ ಪಕ್ಷಗಳಿಗೆ ಮುಂಚಿತವಾಗಿ ಮಾಹಿತಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ