ಮನ್‌ ಕೀ ಬಾತ್; ದೇಶಕ್ಕೆ ಪ್ರೇರಣೆ ನೀಡಿದ ಕಾರ್ಯಕ್ರಮ: ಸಿಎಂ

Published : Apr 30, 2023, 02:16 PM IST
ಮನ್‌ ಕೀ ಬಾತ್; ದೇಶಕ್ಕೆ ಪ್ರೇರಣೆ ನೀಡಿದ ಕಾರ್ಯಕ್ರಮ: ಸಿಎಂ

ಸಾರಾಂಶ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನನ್ನ ಮೇಲೆ ಬಹಳಷ್ಟು ನಿರೀಕ್ಷೆಯಿಟ್ಟು ಒಳ್ಳೆಯ ಮಾತುಗಳನ್ನು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿ (ಏ.30) : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನನ್ನ ಮೇಲೆ ಬಹಳಷ್ಟು ನಿರೀಕ್ಷೆಯಿಟ್ಟು ಒಳ್ಳೆಯ ಮಾತುಗಳನ್ನು ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಾನುವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಮಿತ್ ಶಾ(Amit shah) ಅವರು ಬಂದಾಗ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು‌ ಹೋಗುವುದಾಗಿ ಹೇಳಿದ್ದೆ. ನಮ್ಮ ಪಕ್ಷದಲ್ಲಿ ಸ್ಪಷ್ಟ ನಿಲುವಿದೆ  ಕೇಂದ್ರ ಸಂಸದೀಯ ಮಂಡಳಿ ಮತ್ತು ಶಾಸಕರು ಸಿಎಂ ಆಯ್ಕೆ ಮಾಡುತ್ತಾರೆ. ನಡ್ಡಾ ಅವರು ಹೇಳಿದ ಮಾತಿಗೆ ನಾನು ಚಿರ ಋಣಿಯಾಗಿರುತ್ತೇನೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುತ್ತೇನೆ ಎಂದರು.

ಹುಮನಾಬಾದ್‌: ಮೋದಿ ಕಾರ್ಯಕ್ರಮಕ್ಕೆ ಭೂಮಿ ನೀಡಿದ ವ್ಯಕ್ತಿಗೆ ಕಾಂಗ್ರೆಸ್‌ ಧಮ್ಕಿ

ಪ್ರಿಯಾಂಕ ಗಾಂಧಿಗೆ ತಿರುಗೇಟು:

'ಪ್ರವಾಹದ ಸಂದರ್ಭದಲ್ಲಿ ಮೋದಿ ರಾಜ್ಯಕ್ಕೆ ಬಂದಿಲ್ಲ'  ಎಂಬ ಪ್ರಿಯಾಂಕ ಗಾಂಧಿ ಹೇಳಿಕೆ ಪ್ರಸ್ತಾಪಿಸಿದ ಮುಖ್ಯಮಂತ್ರಿ, ಪ್ರವಾಹ ಬಂದಾಗ ಹೆಚ್ಚಿನ ಅನುದಾನ ಕೊಟ್ಟಿದ್ದು ಮೋದಿ ಸರ್ಕಾರ. ಪ್ರಿಯಾಂಕ ಗಾಂಧಿಯವರ ಸರ್ಕಾರ ಅಧಿಕಾರದಲ್ಲಿ  ಇದ್ದಾಗ ಮನೆ ಬಿದ್ದರೆ 2 ಸಾವಿರ ಕೊಡುತ್ತಿದ್ದರು. ಅತಿವೃಷ್ಟಿ ಪರಿಹಾರ ಮೋದಿ ಕಾಲದಲ್ಲಿ ಹೆಚ್ಚಿಸಲಾಗಿದೆ‌. ಅತಿಹೆಚ್ಚು ರೈತರ ಆತ್ಮಹತ್ಯೆ ಆಗಿದ್ದು ಸಿದ್ರಾಮಣ್ಣನ ಕಾಲದಲ್ಲಿ. ರೈತರು ಆತ್ಮಹತ್ಯೆ ಮಾಡಿಕೊಂಡಾಗ ಪ್ರಿಯಾಂಕ, ರಾಹುಲ್ ಬಂದಿದ್ದರಾ? ಎಂದು ಪ್ರಶ್ನಿಸಿದರು. ಮುಂದುವರಿದು, ಯಾವುದು ಸೂಕ್ತವಲ್ಲವೋ ಅದನ್ನು ಮಾತನಾಡಿ ಜನರನ್ನು ಮರಳು ಮಾಡಲು ಸಾಧ್ಯವಿಲ್ಲ. ಜನತೆಗೆ ಗೊತ್ತಿರುವ ಮಾಹಿತಿ. ಪ್ರಿಯಾಂಕ ಗಾಂಧಿಗೆ ಕಾಂಗ್ರೆಸ್ ಸರಿಯಾದ ಮಾಹಿತಿ ನೀಡಿಲ್ಲ ಎಂದು ಟಾಂಗ್ ಕೊಟ್ಟರು. ಇದೇ ವೇಳೆ ಐಟಿ ರೇಡ್ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂಬ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ವಿಚಾರಕ್ಕೆ ಸಂಬಂಧ ಮಾತನಾಡಿದ ಬೊಮ್ಮಾಯಿ, ಕಳ್ಳನ ಜೀವ ಹುಳ್ಳುಳ್ಳಗೆ ಎಂದು ವ್ಯಂಗ್ಯವಾಡಿದರು.

ಬಿಜೆಪಿಗೆ 40 ಸೀಟು ಎನ್ನುವ ರಾಹುಲ್‌ ವೈದ್ಯ ಪರೀಕ್ಷೆಗೆ ಒಳಗಾಗಲಿ: ಯಡಿಯೂರಪ್ಪ

ಜಗದೀಶ್ ಶೆಟ್ಟರ್(Jagadish shettar) ಎಲ್ಲ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ. ಮೋದಿಯವರಿಗೆ ದಿನಕ್ಕೆ ಐದು ಕಡೆ ಪ್ರಚಾರ ಮಾಡುವ ಶಕ್ತಿ ಇದೆ ಮಾಡ್ತಾರೆ ಎಂದರು. ಖರ್ಗೆಯವರು ಸೀನಿಯರ್ ಲೀಡರ್ ಅಂಥವರ ಬಾಯಿಂದ ನಿಂದನೆಗಳು ಬಂದಿದೆ ಅಂದಾಗ, ಉಳಿದವರಿಂದ ಪ್ರತಿಕ್ರಿಯೆ ಬರೋದು ಸಹಜ ಎಂದರು.
 
ರಾಷ್ಟ್ರೀಯ ಪಕ್ಷದವರು ಮೈತ್ರಿಗೆ ಮುಂದಾಗಿದ್ದಾರೆ ಎಂಬ ಎಚ್‌ಡಿಡಿ ಹೇಳಿಕೆ ಪ್ರಸ್ತಾಪಿಸಿ, ಯಾವ ರಾಷ್ಟ್ರೀಯ ಪಕ್ಷ ಮೈತ್ರಿಗೆ ಮುಂದಾಗಿದ್ದಾರೆಂಬುದು ಅವರೇ ಬಹಿರಂಗವಾಗಿ ಹೇಳಲಿ ಎಂದು ಸವಾಲು ಹಾಕಿದರು.

ಮನ್‌ ಕೀ ಬಾತ್; ದೇಶಕ್ಕೆ ಪ್ರೇರಣೆ ನೀಡಿದ ಕಾರ್ಯಕ್ರಮ: ಸಿಎಂ

ಪ್ರಧಾನಿ ನರೇಂದ್ರ ಮೋದಿಯವರ ಮನ್‌ ಕಿ ಬಾತ್ (Mann ki baat) ಕಾರ್ಯಕ್ರಮ ಇಡೀ ದೇಶದ ಜನತೆಗೆ ಪ್ರೇರಣೆ ನೀಡಿದ ಕಾರ್ಯಕ್ರಮ ಎಂದರು. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಎಂ ಎಂ ತಡಸ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

 ಜನರ ಸಮಸ್ಯೆಗಳನ್ನ ತಿಳಿದುಕೊಂಡು ಪರಿಹಾರ ತಿಳಿಸುವ ಕಾರ್ಯಕ್ರಮವಾಗಿದ್ದು, ಮಕ್ಕಳ ಚರ್ಚೆ.‌ಪ್ರಾಣಿಗಳ ಚರ್ಚೆ. ಇದು ಮನಸ್ಸಿನ ‌ಮಾತುಗಳನ್ನ ತಿಳಿಸಿಸರ್ವರಿಗೂ ಮನಸ್ಸು ಪ್ರೇರಿಸುವ ಕಾರ್ಯಕ್ರಮ. ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಬಿಜೆಪಿಗೆ 40 ಸೀಟು ಎನ್ನುವ ರಾಹುಲ್‌ ವೈದ್ಯ ಪರೀಕ್ಷೆಗೆ ಒಳಗಾಗಲಿ: ಯಡಿಯೂರಪ್ಪ

ಮೇ 7 ರಂದು ಪ್ರಧಾನಿ ನರೇಂದ್ರ ಮೋದಿ(Narendra Modi)ಹಾವೇರಿಗೆ ಆಗಮಿಸುತ್ತಾರೆ. ನಮ್ಮ ಹಾವೇರಿಗೆ ಪ್ರಧಾನಿ ಮೋದಿ ಬಂದರೆ ಬಿಜಿಪಿಗೆ ಒಂದು ಶಕ್ತಿ ಬರುತ್ತೆದೆ. ಹಾವೇರಿ ಜಿಲ್ಲೆಯ ಸುತ್ತಮುತ್ತಲಿನ ತಾಲೂಕಿನ ವಿಧಾನಸಭಾ ಕ್ಷೇತ್ರ(Haveri assembly constituency)ದ ಜನರು ಆಗಮಿಸುತ್ತಾರೆ ಎಂದರು.

ಸುದೀಪ್ ಅವರು ವೈಯುಕ್ತಿಕ ಕಾರಣಗಳಿಂದ ಎರಡು ದಿನ ರಜೆಯಲ್ಲಿದ್ದರು. ಹೀಗಾಗಿ ಚುನಾವಣಾ ಪ್ರಚಾರಕ್ಕೆ ಬಂದಿಲ್ಲ. ನಾಳೆಯಿಂದ ನಮ್ಮ‌ ಅಭ್ಯರ್ಥಿ ಪರ ಸುದೀಪ್ ಪ್ರಚಾರ ಮಾಡುತ್ತಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಅಧಿವೇಶನಕ್ಕೂ ಮೊದಲೇ ಬ್ರದರ್ಸ್ ಒಗ್ಗಟ್ಟು: ಬಿಜೆಪಿ ಮೇಲೆ ಸವಾರಿ ಮಾಡಲು ಕಾಂಗ್ರೆಸ್ ಸಜ್ಜು
ಉಡುಪಿ: ಧರ್ಮ-ಸಂವಿಧಾನ ಬೇರೆಯಲ್ಲ:-ಪವನ್ ಕಲ್ಯಾಣ ಬಣ್ಣನೆ