
ಬೆಂಗಳೂರು (ಮಾ.6) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಸಿದ್ಧತೆಯನ್ನು ಪರಿಶೀಲಿಸಲು ಕೇಂದ್ರ ಚುನಾವಣಾ ಆಯೋಗ(Central Election Commission)ವು ಮಾಚ್‌ರ್ 9ರ ಗುರುವಾರ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಅಂದು ಮಾನ್ಯತೆ ಪಡೆದ ಎಲ್ಲಾ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳೊಂದಿಗೂ ಸಭೆ ನಡೆಸಲಿದೆ.
ಮಧ್ಯಾಹ್ನ 2.30ರಿಂದ ಸಂಜೆ 4 ಗಂಟೆವರೆಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಯಲಿದ್ದು, ಪ್ರತಿಯೊಂದು ಪಕ್ಷಕ್ಕೂ 10 ನಿಮಿಷಗಳ ಪ್ರತ್ಯೇಕ ಸಮಯ ನಿಗದಿಪಡಿಸಲಾಗಿದೆ. ಪ್ರಮುಖವಾಗಿ ಆಡಳಿತ ಪಕ್ಷ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಜತೆಗೆ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್, ಬಹುಜನ ಸಮಾಜ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ), ಸಿಪಿಐ (ಮಾರ್ಕ್ಸ್ವಾದ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ), ನ್ಯಾಷನಲ್ ಪೀಪಲ್ಸ್ ಪಾರ್ಟಿಗಳ ಮುಖಂಡರು ಸಭೆಗೆ ಹಾಜರಾಗುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆ) ಜಂಟಿ ಮುಖ್ಯ ಚುನಾವಣಾಧಿಕಾರಿ ಟಿ.ಯೋಗೇಶ್ ಸೂಚಿಸಿದ್ದಾರೆ.
ಚುನಾವಣಾ ಆಯೋಗದ ಅಧಿಕಾರಿ ನೇಮಕ ಸಮಿತಿಯಲ್ಲಿ ಇನ್ನು ಸಿಜೆಐಗೂ ಸ್ಥಾನ!
ಮೋದಿ ಭೇಟಿ; ಅಮಿತ್ ಶಾ ಕಾರ್ಯಕ್ರಮ ಮುಂದಕ್ಕೆ:
ದಾವಣಗೆರೆ: ಹೊನ್ನಾಳಿ ತಾಲೂಕಿನ ಅರಬಘಟ್ಟಗ್ರಾಮದಲ್ಲಿ ಮಾ.12ರಂದು 53 ಸಾವಿರ ಫಲಾನುಭವಿಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಅವರು ಹಕ್ಕುಪತ್ರ ವಿತರಿಸಬೇಕಿದ್ದ ಸಮಾರಂಭವನ್ನು ಮುಂದೂಡಲಾಗಿದೆ. ಮಾ.12ರಂದು ಅರಬಘಟ್ಟದಲ್ಲಿ ದಾವಣಗೆರೆ ಜಿಲ್ಲೆಯ 53 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹ ರಾಜ್ಯ ಪ್ರವಾಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಕಾರ್ಯಕ್ರಮವನ್ನು ಮಾ.18 ಅಥವಾ 19ಕ್ಕೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ. ಕಂದಾಯ ಇಲಾಖೆಯಿಂದ ಜನರಿಗೆ ಹಕ್ಕುಪತ್ರ ವಿತರಣೆ ಹಾಗೂ ವಿವಿಧ ಇಲಾಖೆಯಡಿ ಸೌಲಭ್ಯ ಕಲ್ಪಿಸುವ ದೊಡ್ಡ ಕಾರ್ಯಕ್ರಮ ಇದಾಗಿದೆ.
ನಿರ್ದೇಶನದಂತೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ : ಚುನಾವಣಾ ಆಯೋಗ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ