Karnataka election 2023: ಬಿಜೆಪಿ ಪರ ಪ್ರಚಾರಕ್ಕೆ ಕೇಂದ್ರ ಸಚಿವರ ದಂಡೇ ಆಗಮನ!

Published : Apr 26, 2023, 03:02 AM ISTUpdated : Apr 26, 2023, 03:04 AM IST
Karnataka election 2023: ಬಿಜೆಪಿ ಪರ ಪ್ರಚಾರಕ್ಕೆ ಕೇಂದ್ರ ಸಚಿವರ ದಂಡೇ ಆಗಮನ!

ಸಾರಾಂಶ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರಕ್ಕೆ ಮುಂದಾಗಿರುವ ಬಿಜೆಪಿ, ಪಕ್ಷದ ಘಟಾನುಘಟಿ ನಾಯಕರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಅಮಿತ್‌ ಶಾ, ಸ್ಮೃತಿ ಇರಾನಿ ಘಟಾನುಘಟಿಗಳೇ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದಾರೆ.

ಬೆಂಗಳೂರು (ಏ.26) ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಪ್ರಚಾರಕ್ಕೆ ಮುಂದಾಗಿರುವ ಬಿಜೆಪಿ, ಪಕ್ಷದ ಘಟಾನುಘಟಿ ನಾಯಕರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಅಮಿತ್‌ ಶಾ, ಸ್ಮೃತಿ ಇರಾನಿ, ಅರ್ಜುನ ಮುಂಡಾ ಸೇರಿದಂತೆ ಕೇಂದ್ರ ಸಂಪುಟದ ಸಚಿವರು, ಉತ್ತರ ಪ್ರದೇಶ ಡಿಸಿಎಂ ಬ್ರಜೇಶ್‌ ಪಾಠಕ್‌, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಸಚಿವರುಗಳು ಮಂಗಳವಾರ ರಾಜ್ಯದ ವಿವಿಧೆಡೆ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ(Amit shah) ಅವರು, ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ, ಯಾದಗಿರಿ, ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಗಳಲ್ಲಿ ಭರ್ಜರಿ ರೋಡ್‌ ಶೋ ನಡೆಸಿ, ಬಿಜೆಪಿ ಅಭ್ಯರ್ಥಿಗಳ(BJP Candidates) ಪರ ಪ್ರಚಾರ ನಡೆಸಿದರು. ಬೀದರ್‌ನ ಕಮಲನಗರದಲ್ಲಿ ಸಚಿವ ಪ್ರಭು ಚವ್ಹಾಣ(Prabhu chauhan) ಪರವಾಗಿ ಮಹಾರಾಷ್ಟ್ರ ಸಚಿವ ನಾರಾಯಣ ರಾಣೆ(Narayana rane), ನಿಪ್ಪಾಣಿಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಪರ ಕೇಂದ್ರ ಸಚಿವೆ ಅನ್ನಪೂರ್ಣ ದೇವಿಯವರು ಮತಯಾಚನೆ ಮಾಡಿದರು. ಕೇಂದ್ರ ಸಚಿವೆ ಸ್ಮೃತಿ(Smriti irani) ಇರಾನಿಯವರು ಧಾರವಾಡದ ಜೆಎಸ್‌ಎಸ್‌ ಆವರಣದಲ್ಲಿನ ಸನ್ನಿಧಿ ಸಭಾಭವನದಲ್ಲಿ ನಡೆದ ಹು-ಧಾ ಪಶ್ಚಿಮ ಕ್ಷೇತ್ರದ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು, ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು. ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌, ಸಿದ್ದರಾಮಯ್ಯನವರ ‘ಲಿಂಗಾಯತ ಭ್ರಷ್ಟಸಿಎಂ’ ಹೇಳಿಕೆಯನ್ನು ಕಟುವಾಗಿ ಟೀಕಿಸಿದರು.

ಸಿ.ಟಿ.ರವಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಲಿ: ಈಶ್ವರಪ್ಪ

ಇದೇ ವೇಳೆ, ಮೈಸೂರಿನಲ್ಲಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಬ್ರಜೇಶ್‌ ಪಾಠಕ್‌, ಬಳ್ಳಾರಿಯಲ್ಲಿ ಕೇಂದ್ರ ಸಚಿವ ಕೃಷ್ಣನ್‌ ಪಾಲ… ಗುರ್ಜರ್‌, ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ದಾವಣಗೆರೆಯಲ್ಲಿ ಕೇಂದ್ರ ಸಚಿವ ಸೋನಾವಾಲಾ, ಶಿವಮೊಗ್ಗದಲ್ಲಿ ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಮಹೇಂದ್ರನಾಥ ಪಾಂಡೆ ಹಾಗೂ ಉತ್ತರಾಖಂಡ ರಾಜ್ಯದ ಬಿಜೆಪಿ ಉಪಾಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಚುನಾವಣಾ ಉಸ್ತುವಾರಿ ಕುಲದೀಪ್‌ ಸಿಂಗ್‌, ರಾಯ​ಚೂರಿನಲ್ಲಿ ಕೇಂದ್ರ ಬುಡ​ಕಟ್ಟು ಸಚಿವ ಅರ್ಜುನ ಮುಂಡಾ, ಚಾಮರಾಜನಗರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಲಾಲ್‌ ಸಿಂಗ್‌ ಆರ್ಯ— ಅವರು ಪ್ರಚಾರ ನಡೆಸಿ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು.

Viral video: ಪತ್ರಕರ್ತರಿಗೆ ಡಿಕೆ ಶಿವಕುಮಾರ ಬೆದರಿಕೆ, ಮಾಳವೀಯ ಆರೋಪ

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: Bengaluru - ಬೆಂಗಳೂರಿನಲ್ಲಿ 7ನೇ ಕ್ಲಾಸ್ ವಿದ್ಯಾರ್ಥಿ ಕಪಾಳಕ್ಕೆ ಹೊಡೆದ ಶಿಕ್ಷಕನ ಬಂಧನ