ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕಟೀಲ್‌ ಬದಲಾವಣೆ: ಸಚಿವ ಜೋಶಿ ಸುಳಿವು

Published : May 17, 2023, 01:21 AM IST
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕಟೀಲ್‌ ಬದಲಾವಣೆ: ಸಚಿವ ಜೋಶಿ ಸುಳಿವು

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರ ಬದಲಾವಣೆ ಸಾಧ್ಯತೆ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಅವರು ಸುಳಿವು ನೀಡಿದ್ದಾರೆ.

ಬೆಂಗಳೂರು (ಮೇ.17) : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರ ಬದಲಾವಣೆ ಸಾಧ್ಯತೆ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ(Union minister Pralhad joshi) ಅವರು ಸುಳಿವು ನೀಡಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಟೀಲ್‌(Nalin kumar kateel) ಅವರು ರಾಜ್ಯಾಧ್ಯಕ್ಷ ಹುದ್ದೆಯ ಅವಧಿ ಪೂರೈಸಿದ್ದರೂ ವಿಧಾನಸಭಾ ಚುನಾವಣೆ (Karnataka assembly election) ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕರು ಮತ್ತೆ ಅವರಿಗೆ ಜವಾಬ್ದಾರಿ ನೀಡಿದ್ದರು. ಈಗ ಚುನಾವಣೆ ಮುಗಿದಿದೆ. ಮುಂದಿನ ತೀರ್ಮಾನವನ್ನು ರಾಷ್ಟ್ರೀಯ ನಾಯಕರು ಮಾಡುತ್ತಾರೆ ಎಂದು ಹೇಳಿದರು.

Karnataka election results 2023: ಕೇಂದ್ರದ ಸಹಕಾರಕ್ಕೆ ಫಲಿತಾಂಶ ಅಡ್ಡಿ ಆಗದು: ಜೋಶಿ

ಸವಾಲಾಗಿ ಸ್ವೀಕಾರ:

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ನಿರಾಶಾದಾಯಕವಾಗಿದೆ. ಈ ಸೋಲನ್ನು ಪಕ್ಷ ಹಾಗೂ ನಾನು ಸಹಜವಾಗಿ ಸ್ವೀಕರಿಸದೆ ಸವಾಲಾಗಿ ಸ್ವೀಕರಿಸಿದ್ದೇವೆ. ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಶುರು ಮಾಡುತ್ತೇವೆ ಎಂದು ತಿಳಿಸಿದರು.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಜೋಶಿ, ‘ಶೀಘ್ರದಲ್ಲೇ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ರಾಷ್ಟ್ರೀಯ ನಾಯಕರೊಬ್ಬರು ಬರಲಿದ್ದು, ಚರ್ಚಿಸಿ ವಿರೋಧ ಪಕ್ಷದ ನಾಯಕ ಯಾರಾಗಬೇಕು ಎಂಬುದನ್ನು ತೀರ್ಮಾನಿಸಲಿದ್ದಾರೆ’ ಎಂದರು.

ಲೋಕಸಭಾ ಚುನಾವಣಾ ವಿಚಾರ ಬೇರೆ:

‘ಇಡೀ ದೇಶವೇ ಪ್ರಧಾನಿ ಮೋದಿ(PM Narendra Modi) ಅವರ ನೇತೃತ್ವ ಒಪ್ಪಿದೆ. ಲೋಕಸಭಾ ಚುನಾವಣೆ ಬೇರೆ ವಿಚಾರಗಳ ಮೇಲೆ ನಡೆಯುತ್ತದೆ. ರಾಜ್ಯ ಚುನಾವಣೆ ವಿಚಾರ ಬೇರೆಯೇ ಇತ್ತು. ದೇಶದ ಹಲವು ಸರ್ವೆಗಳಲ್ಲಿ ಈಗ ಚುನಾವಣೆ ನಡೆದರೂ ಬಿಜೆಪಿ 300-330 ಸ್ಥಾನ ಗೆಲ್ಲಲಿದೆ ಎಂಬ ನಿರೀಕ್ಷೆಯಿದೆ. ಹೀಗಾಗಿ ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ಸಂಬಂಧವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಮಧ್ಯಪ್ರದೇಶದಲ್ಲಿ 2018ರ ವಿಧಾನಸಭಾ ಚುನಾವಣೆ ಸೋತೆವು. ರಾಜಸ್ಥಾನ, ಛತ್ತೀಸ್‌ಗಢ ಚುನಾವಣೆ ಸೋತೆವು. ಇದಾದ ಆರು ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಈ ಮೂರೂ ರಾಜ್ಯಗಳಲ್ಲಿ ಅತಿಹೆಚ್ಚು ಸ್ಥಾನ ಗೆದ್ದೆವು. ಜನ ಜಾಣರಿದ್ದಾರೆ. ಯಾವಾಗ ಯಾರಿಗೆ ಮತ ನೀಡಬೇಕು ಎಂಬುದು ಗೊತ್ತಿದೆ’ ಎಂದು ಮಾರ್ಮಿಕವಾಗಿ ಹೇಳಿದರು.

ಹೀನಾಯ ಸೋಲು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್‌ ಶೀಘ್ರ ರಾಜೀನಾಮೆ? 

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ನಿರಾಶಾದಾಯಕವಾಗಿದೆ. ಈ ಸೋಲನ್ನು ಪಕ್ಷ ಹಾಗೂ ನಾನು ಸಹಜವಾಗಿ ಸ್ವೀಕರಿಸದೆ ಸವಾಲಾಗಿ ಸ್ವೀಕರಿಸಿದ್ದೇವೆ. ಮುಂಬರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಶುರು ಮಾಡುತ್ತೇವೆ.

- ಪ್ರಹ್ಲಾದ ಜೋಶಿ, ಕೇಂದ್ರ ಸಚಿವ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!
ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?