ನೇರ ನೇಮಕಾತಿ ಅರ್ಜಿ ಶುಲ್ಕ ಇಳಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

By Suvarna NewsFirst Published Jun 28, 2023, 10:43 PM IST
Highlights

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯದ ಕೆಲವು ಸರ್ಕಾರಿ ಸಂಸ್ಥೆಗಳ ಖಾಲಿ ಇರುವ ಹುದ್ದೆಗಳನ್ನು ತುಂಬಲು ನೇರ ನೇಮಕಾತಿಗೆ  ವಿಧಿಸಿದ್ದ ಅರ್ಜಿ ಶುಲ್ಕವನ್ನು ಕಡಿಮೆ ಮಾಡಿದೆ. 

ಬೆಂಗಳೂರು (ಜೂ.28): ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯದ ಕೆಲವು ಸರ್ಕಾರಿ ಸಂಸ್ಥೆಗಳ ಖಾಲಿ ಇರುವ ಹುದ್ದೆಗಳನ್ನು ತುಂಬಲು ನೇರ ನೇಮಕಾತಿಗೆ  ವಿಧಿಸಿದ್ದ ಅರ್ಜಿ ಶುಲ್ಕವನ್ನು ಕಡಿಮೆ ಮಾಡಿದೆ. 

ಕೆಇಎ ವತಿಯಿಂದ ಈ ಮುಂಚೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್‌ ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬಂಧದ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಈ ಪರಿಶ್ಕೃತ ಶುಲ್ಕ ಅನ್ವಯವಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರಕಟಣೆಯಲ್ಲಿ ಬುಧವಾರ ತಿಳಿಸಿದ್ದಾರೆ.

Latest Videos

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ ಜೂನ್ 30ರ ಮಧ್ಯಾಹ್ನ 1.00ರಿಂದ ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಬಹುದು.

ಅಕ್ಕಿ ವಿಚಾರದಲ್ಲಿ ಸಿ.ಟಿ.ರವಿ ಯಾಕೆ ಮೈ ಪರಿಚಿಕೊಳ್ಳುತ್ತಿದ್ದಾರೋ ಗೊತ್ತಿಲ್ಲ: ಸಚಿವ ಎಂ.ಸಿ.ಸುಧಾಕರ್‌

ಪರಿಷ್ಕೃತ ಶುಲ್ಕ:  ಸಾಮಾನ್ಯ ವರ್ಗ (ರೂ 500/-),
ಹಿಂದುಳಿದ ವರ್ಗಗಳು: 2ಎ, 2ಬಿ, 3ಎ, 3ಬಿ (ರೂ 300/-),
ಎಸ್.ಸಿ., ಎಸ್.ಟಿ.. ಪ್ರವರ್ಗ-1 (ರೂ 200/-)
ವಿಕಲಚೇತನರು / ಮಾಜಿ ಸೈನಿಕರು (ರೂ100/-)

click me!