ಪುತ್ರನಿಗೆ ಟಿಕೆಟ್ ಸಿಗದ್ದಕ್ಕೆ ಈಶ್ವರಪ್ಪ ಬಂಡಾಯ! ಬಸವರಾಜ ಬೊಮ್ಮಾಯಿ ಹೇಳಿದ್ದೇನು?

By Ravi Janekal  |  First Published Mar 15, 2024, 8:39 PM IST

ಪುತ್ರನಿಗೆ ಟಿಕೆಟ್ ಸಿಗದಿದ್ದಕ್ಕೆ ಈಶ್ವರಪ್ಪ ಅಸಮಾಧಾನಗೊಂಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಪಾರ್ಲಿಮೆಂಟರಿ ಬೋರ್ಡ್‌ನಲ್ಲಿ ನಾನು ಹೇಳಿದ್ದೆ? ಎಲ್ಲ ಅವರಿಗೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಬಸವರಾಜ ಬೊಮ್ಮಾಯಿ ಹೇಳಿದರು.


ಹಾವೇರಿ (ಮಾ.15): ಪುತ್ರನಿಗೆ ಟಿಕೆಟ್ ಸಿಗದಿದ್ದಕ್ಕೆ ಈಶ್ವರಪ್ಪ ಅಸಮಾಧಾನಗೊಂಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಪಾರ್ಲಿಮೆಂಟರಿ ಬೋರ್ಡ್‌ನಲ್ಲಿ ನಾನು ಹೇಳಿದ್ದೆ? ಎಲ್ಲ ಅವರಿಗೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ  ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಹಾವೇರಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಶ್ವರಪ್ಪರ ಬಂಡಾಯದ ಬಗ್ಗೆ ನಾನು ಈಗ ಏನು ಹೇಳಲು ಆಗೊಲ್ಲ. ಮಾಜಿ ಶಾಸಕ ಓಲೇಕಾರ್ ನಿಲುವು ಗೊತ್ತಿಲ್ಲ. ಸ್ಥಳೀಯ ನಾಯಕರ ಜೊತೆ ಚರ್ಚೆ ಮಾಡುವೆ ಎಂದರು.

Tap to resize

Latest Videos

undefined

ಶಿವಮೊಗ್ಗದಲ್ಲಿ ಬಂಡಾಯ ಬಾವುಟ ಹಾರಿಸಿದ ಈಶ್ವರಪ್ಪ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ!

ನನಗೆ ಶಿಗ್ಗಾವಿ ಜೊತೆ ಭಾವನಾತ್ಮಕ ಸಂಬಂಧ ಇದೆ. ಎಲ್ಲಾ ತಾಲೂಕುಗಳ ಅಭಿವೃದ್ಧಿ ಜೊತೆ ಶಿಗ್ಗಾವಿ ಅಭಿವೃದ್ಧಿ ಮಾಡಲಾಗುತ್ತೆ. ನನ್ನ ಹೆಸರು ಪಾರ್ಲಿಮೆಂಟರಿ ಬೋರ್ಡ್‌ನಲ್ಲಿ ಕೂಡಾ ಫೈನಲ್ ಆಗಿರಲಿಲ್ಲ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದೆ. ಪ್ರಧಾನಿ, ನಡ್ಡಾ ಗೃಹ ಸಚಿವರು ತಿಳಿಸಿದ ಬಳಿಕ ನಿರ್ಧಾರ ಮಾಡಬೇಕಾಯಿತು. ಅನಿವಾರ್ಯ ಇದೆ ನೀನು ಸ್ಪರ್ಧಿಸು ಎಂದು ಪ್ರಧಾನಮಂತ್ರಿಗಳು, ವರಿಷ್ಠರು ಹೇಳಿದರು. ಹೀಗಾಗಿ ನಾನು ಸ್ಪರ್ಧೆ ಮಾಡ್ತಿದ್ದೇನೆ ಎಂದರು.

ಯಡಿಯೂರಪ್ಪ ಯಾರಿಗೂ ದ್ರೋಹ ಮಾಡಿಲ್ಲ: ಬಿ.ವೈ.ರಾಘವೇಂದ್ರ

ಶಿಗ್ಗಾವಿ ಬೈ ಎಲೆಕ್ಷನ್ ನಡೆದರೆ ಪುತ್ರ ಭರತ್ ಬೊಮ್ಮಾಯಿಗೆ ಟಿಕೇಟ್ ವಿಚಾರ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಈಗ ನಾನಿನ್ನೂ ಸ್ಪರ್ಧೆ ಮಾಡಿ ಲೋಕಸಭಾ ಚುನಾವಣೆ ಗೆಲ್ಲಬೇಕು. ಬಳಿಕ ಶಿಗ್ಗಾವಿಗೆ ಉಪಚುನಾವಣೆ ನಡೆಯಲಿದೆ. ಊಹೆ ಮಾಡಿ ನಾನು ಹೇಳಲು ಆಗೊಲ್ಲ. ಆ ಸಂದರ್ಭದಲ್ಲಿ  ಜನರ ಅಭಿಪ್ರಾಯ, ಪಕ್ಷದ ಅಭಿಪ್ರಾಯ ಕೇಳಬೇಕು ಎಂದರು. ಇದೇ ವೇಳೆ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಸ್ಪರ್ದೆ ನೆಡಸಿದ ವಿಚಾರಕ್ಕೆ ಅವರ ಬಳಿ ನಾನು ಮಾತನಾಡುವೆ ಎಂದರು.

click me!