ಬೆಂಗಳೂರು ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದ್ದು, ಸಚಿವರು ನೀರು ನಿಲ್ಲಿಸುವ ಭರವಸೆ ನೀಡಿದ್ದಾರೆ. ಆದ್ದರಿಂದ ಬೆಂಗಳೂರು ಬಂದ್ ಮುಕ್ತಾಯಗೊಳಿಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಬೆಂಗಳೂರು (ಸೆ.26): ಬೆಂಗಳೂರು ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಸಹಕಾರ ನೀಡಿದ ಎಲ್ಲ ಸಂಘಟನೆಗಳು ಹಾಗೂ ಬೆಂಗಳೂರಿನ ಜನತೆಗೆ ಧನ್ಯವಾದಗಳನ್ನು ಅರ್ಪಸುವ ಮೂಲಕ ಇಂದಿನ ಬಂದ್ ಅನ್ನು ಮುಕ್ತಾಯಗೊಳಿಸುತ್ತೇವೆ. ಜೊತೆಗೆ ಮುಂದಿನ ದಿನಗಳಲ್ಲಿಉಗ್ರವಾದ ಹೋರಾಟವನ್ನು ಮಾಡುವುದಾಗಿ ರೈತಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಬೆಂಗಳೂರು ಬಂದ್‌ನಲ್ಲಿ ಪಾಲ್ಗೊಂಡ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಎಲ್ಲರೂ ಶಾಂತ ರೀತಿಯಿಂದಲೆ ಪ್ರತಿಭಟನೆ ಮಾಡಿ ಬಂದ್‌ಗೆ ಬೆಂಬಲ ನೀಡಿದ್ದಾರೆ. ಬೆಂಗಳೂರು ಬಮದ್ ಸಂಪೂರ್ಣವಾಗಿ ಯಶಸ್ವಿ ಆಗಿದ್ದು, ಇಲ್ಲಿಗೆ ಬಂದ್ ಅನ್ನು ಮುಕ್ತಾಯಗೊಳಿಸಲಾಗುತ್ತದೆ. ಇನ್ನು ಪ್ರತಿಭಟನೆ ವೇಳೆ ಬಂಧಿತರಾದ ಎಲ್ಲ ಹೋರಾಟಗಾರರನ್ನು ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಅವರ ಮೇಲೆ ಹಾಕಿದ ಎಲ್ಲ ಕೇಸ್‌ಗಳನ್ನು ವಾಪಸ್ ಪಡೆಯಲಾಗುತ್ತದೆ. ಜೊತಗೆ, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ಸಚಿವರು ಭರವಸೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬಂದ್ ವಾಪಸ್ ಪಡೆಯಲಾಗುತ್ತಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಮಾಹಿತಿ ನೀಡಿದರು.
ಕಾವೇರಿ ನೀರಿಗಾಗಿ ಕರ್ನಾಟಕಕ್ಕೆ ಪ್ರಾಣಸಂಕಟ, ತಮಿಳುನಾಡಿಗೆ ಚೆಲ್ಲಾಟ: ನಿತ್ಯ 12,500 ನೀರು ಹರಿಸುವಂತೆ ಪಟ್ಟು
ಕಳೆದ ವರ್ಷ 450 ಟಿಎಂಸಿ ನೀರು ಬಿಟ್ಟು ಸಮುದ್ರಕ್ಕೆ ಹರಿದು ಹೋಗಿದೆ. ಮೇಕೆದಾಟು ಯೋಜನೆ ನಿರ್ಮಿಸಿದ್ದರೆ ಈಗ ನಮಗೆ 65 ಟಿಎಂಸಿ ನೀರು ಸಿಗುತ್ತಿತ್ತು. ಇದು ಬೆಂಗಳೂರಿಗೆ ಕುಡಿಯುವುದಕ್ಕೆ ಹಾಗೂ ತಮಿಳುನಾಡಿಗೆ ಹರಿಸಲು ಅನುಕೂಲ ಆಗುತ್ತಿತ್ತು. ಚುನಾವಣೆಗೂ ಮುನ್ನ ಮೇಕೆದಾಟು ಯೋಜನೆ ನಿರ್ಮಾಣಕ್ಕಾಗಿ ಪಾದಯಾತ್ರೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಈಗ ತಾವೇ ಅಧಿಕಾರದಲ್ಲಿದ್ದರೂ ಯಾಕೆ ಮೇಕೆದಾಟು ಜಲಾಶಯ ನಿರ್ಮಾಣ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ಹೋರಾಟ ಎನ್ನುವುದು ಯಾರೊಬ್ಬರ ವೈಯಕ್ತಿಯ ಹಿತಾಸಕ್ತಿಯ ಅಥವಾ ಸ್ವಪ್ರತಿಷ್ಠೆ ಹೋರಾಟವಲ್ಲ. ಈಗ ಕಾವೇರಿ ನೀರಿಗಾಗಿ ಬೆಂಗಳೂರು ಬಮದ್ ಸಂಪೂರ್ಣ ಯಶಸ್ವಿಯಾಗಿದೆ. ಇನ್ನು ಸೆ.29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಕರ್ನಾಟಕ ಬಂದ್ ಹೋರಾಟಕ್ಕೆ ನಾವು ಬೆಂಬಲ ನೀಡುವುದರ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ಕಾವೇರಿ ಹಾಗೂ ಕನ್ನಡ ನಾಡಿನ ನೆಲ, ಜಲ ಹಾಗೂ ಭಾಷೆ ಕುರಿತ ಹೋರಾಟಕ್ಕೆ ತಮ್ಮ ಬೆಂಬಲ ಇರುತ್ತದೆ ಎಂದು ತಿಳಿಸಿದರು.
ಬೆಂಗಳೂರು(ಸೆ.26) ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಯಾಾಗಿದೆ. ಬೆಂಗಳೂರು ಬಂದ್ ನಡೆಸಿ ತೀವ್ರ ಆಕ್ರೋಶ ಹೊರಹಾಕಿದರೂ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಇಂದು ಸಭೆ ಸೇರಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹತ್ವದ ಶಿಫಾರಸು ಮಾಡಿದೆ. ಕರ್ನಾಟಕ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15ರ ವರೆಗೆ ಪ್ರತಿ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಮುಂದಿನ 18 ದಿನ ತಮಿಳುನಾಡಿಗೆ ನೀರು ಬಿಡಲು ಆದೇಶ ನೀಡಿದೆ.