
ಕಲಬುರಗಿ (ನ.09) ಕರ್ನಾಟಕದಲ್ಲಿ ರೈತ ಹೋರಾಟ ತೀವ್ರಗೊಳ್ಳುತ್ತಿದೆ. ರಾಜ್ಯದ ಹಲವು ಭಾಗದಲ್ಲಿ ರೈತ ಪ್ರತಿಭಟನೆಗಳು ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿಯಲ್ಲಿ ಭಾರಿ ತೀವ್ರ ಸ್ವರೂಪ ಪಡೆದ ಈ ಹೋರಾಟ ಕೊನೆಗೆ ಸರ್ಕಾರ ಬೆಂಬಲ ಬೆಲೆ ಘೋಷಿಸಿ ಅಂತ್ಯಹಾಡಿತ್ತು. ಆದರೆ ಕಲಬುರಗಿ, ಬಾಗಲಕೋಟೆ ಸೇರಿದಂತೆ ಕೆಲ ಭಾಗದ ರೈತರು 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಹೋರಾಟ ತೀವ್ರಗೊಳಿಸಿದ್ದಾರೆ. ಇದೀಗ ನಾಳೆ (ನ.10) ಅಫಜಲಪುರ ಬಂದ್‌ಗೆ ಹೋರಾಟಗಾರರು ಕರೆ ನೀಡಿದ್ದಾರೆ.
ನಾಳೆ ಅಫಜಲಪುರದಲ್ಲಿ ಸ್ವಯಂ ಘೋಷಿತದ ಬಂದ್‌ಗೆ ಕರೆ ನೀಡಲಾಗಿದೆ. ಸ್ವಾಭಿಮಾನಿ ಕಬ್ಬು ಬೆಳೆಗಾರರ ಸಂಘದಿಂದ ಅಫಜಲಪುರ ಬಂದ್ ಗೆ ಕರೆ ನೀಡಲಾಗಿದೆ. ಈ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದೆ. ಹೀಗಾಗಿ ಬಂದ್ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.
ಮುಧೋಳದಲ್ಲಿ ರೈತರು ಕಬ್ಬಿನ ಬೆಲೆ ಹೋರಾಟ ತೀವ್ರಗೊಳಿಸಿದ್ದಾರೆ. ಇಂದು ಸಿಚವ ಆರ್‌ಬಿ ತಿಮ್ಮಾಪುರ ನಡೆಸಿದ ಸಂಧಾನ ಸಭೆ ವಿಫಲಗೊಂಡಿದೆ. ಇದರ ಬೆನ್ನಲ್ಲೋ ರೈತರು ಮುಧೋಳದಲ್ಲಿ ನಾಳೆ ಬೃಹತ್ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಹಳ್ಳಿ ಹಳ್ಳಿಯಲ್ಲಿ ಡಂಗೂರ ಸಾರಿ ಪ್ರತಿಭಟನೆಗೆ ಬರುವಂತೆ ಮನವಿ ಮಾಡಿದ್ದಾರೆ. ನಾಳೆ(ನ.10) ಬೆಳಿಗ್ಗೆ 10 ಗಂಟೆಗೆ ಮುಧೋಳ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರೈರು ಸೇರಲಿದ್ದಾರೆ. ಮುಧೋಳ ತಾಲೂಕಿನ ಎಲ್ಲ ಸರ್ಕಾರಿ ಕಚೇರಿ ಬಂದ್ ಮಾಡಿಸಲು ನಿರ್ಧಾರ ಮಾಡಲಾಗಿದೆ.
ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬೃಹತ್ ರ್ಯಾಲಿ ಮೂಲಕ ತಹಶಿಲ್ದಾರರ್ ಕಚೇರಿಗೆ ತೆರಳಲು ರೈತರು ಮುಂದಾಗಿದ್ದಾರೆ. ಎಲ್ಲಾ ಸರ್ಕಾರಿ ಕಚೇರ ಬಂದ್ ಮಾಡುತ್ತೇವೆ. ವರ್ತಕರು ಸ್ವ ಇಚ್ಚೆಯಿಂದ ಬೆಂಬಲ ಸೂಚಿಸಬೇಕು. ಅಂಗಡಿ ಬಂದ್ ಮಾಡಬೇಡಿ, ಬೆಂಬಲ ಸೂಚಿಸಿ ಎಂದು ರೈತ ಹೋರಾಟಗಾರರು ಹೇಳಿದ್ದಾರೆ.
ಕಬ್ಬು ಕಡಿದು ಕಾರ್ಖಾನೆ ಆರಂಭ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಹಾಗೇನಾದರೂ ಆದಲ್ಲಿ, ಜಿಲ್ಲಾಡಳಿತ, ಕಾರ್ಖಾನೆ ಮಾಲೀಕರೇ ಹೊಣೆ ಹೊರಬೇಕು ಎಂದು ರೈತಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ