48 ಗಂಟೆಯಲ್ಲ, ನಾಲ್ಕು ದಿನವಾದ್ರೂ ಸರಿ ಹುಲಿ ಕೊಲ್ಬೇಡಿ: ಅರಣ್ಯ ಸಚಿವರ ಆದೇಶ!

By Web Desk  |  First Published Oct 9, 2019, 4:40 PM IST

ಹುಲಿ ಕೊಲ್ಲದಂತೆ ಸಚಿವರ ಸೂಚನೆ| ಕಾರ್ಯಾಚರಣೆ ಮೂಲಕ ಹುಲಿ ಸೆರೆ ಹಿಡಿಯಲು ಸೂಚನೆ| ಹುಲಿ ದಾಳಿಯಲ್ಲಿ ಮೃತಪಟ್ಟ ಶಿವಲಿಂಗಪ್ಪ ಕುಟುಂಬಕ್ಕೆ ಪರಿಹಾರ| ಶಿವಲಿಂಗಪ್ಪ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು| ಸುವರ್ಣನ್ಯೂಸ್ಗೆ ಅರಣ್ಯ ಸಚಿವ ಸಿ.ಸಿ.ಪಾಟೀಲ್ ಹೇಳಿಕೆ| ನಿನ್ನೆ ಹುಲಿ ದಾಳಿಗೆ ಮೃತಪಟ್ಟಿದ್ದ ಚೌಡಹಳ್ಳಿಯ ಶಿವಲಿಂಗಪ್ಪ 


ಚಾಮರಾಜನಗರ[ಅ.09]: ಚೌಡಹಳ್ಳಿಯ ಬಂಡೀಪುರ ಹುಲಿ ಯೋಜನೆಗೆ ಸೇರಿದ ಗೋಪಾಲಸ್ವಾಮಿ ಬೆಟ್ಟದ ವಲಯದಂಚಿನ ಮಹಾಲಿಂಗಶೆಟ್ಟರ ಜಮೀನಿನ ಬಳಿಕ ದನ ಮೇಯುಸುತ್ತಿದ್ದಾತನ ಮೇಲೆ ಹುಲಿ ದಾಳಿ ನಡೆದಿದ್ದು, ಇದರಿಂದ ಬೆಚ್ಚಿ ಬಿದ್ದ ಗ್ರಾಮಸ್ಥರು ಹುಲಿಯನ್ನು ಕೊಲ್ಲುವಂತೆ ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಅರಣ್ಯಾಧಿಕಾರಿಗಳು 48 ಗಂಟೆಯೊಳಗಾಗಿ ಹುಲಿಯನ್ನು ಹುಡುಕುವ ಪ್ರಯತ್ನ ಮಾಡುತ್ತೇವೆ. ಸಾಧ್ಯವಾಗದಿದ್ದರೆ ಶೂಟೌಟ್ ಮಾಡುತ್ತೇವೆಂಬ ಭರವಸೆ ನೀಡಿದ್ದರು. ಆದರೆ ಈ ನಿರ್ಧಾರವನ್ನು ಪ್ರಾಣಿ ಪ್ರಿಯರು ತೀವ್ರವಾಗಿ ವಿರೋಧಿಸಿದ್ದು, ಸದ್ಯ ಕತರ್ನಾಟಕ ಅರಣ್ಯ ಸಚಿವರು ಹುಲಿ ಕೊಲ್ಲದಂತೆ ಆದೇಶಿಸಿದ್ದಾರೆ.

ಆಪರೇಷನ್ ಟೈಗರ್: 48 ಗಂಟೆಯೊಳಗೆ ಸೆರೆ, ಇಲ್ಲವೇ ಶೂಟೌಟ್ ಮಾಡುವ ಭರವಸೆ

Latest Videos

undefined

ಹೌದು ಹುಲಿಯೊಂದು ಇಬ್ಬರು ರೈತರನ್ನು ಬಲಿ ಪಡೆದ ಬೆನ್ನಲ್ಲೇ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದ ಅರಣ್ಯದಂಚಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು. ಹೀಗಾಗಿ ಚೌಡಹಳ್ಳಿ, ಹುಂಡೀಪುರ ಸುತ್ತಮುತ್ತಲ ಗ್ರಾಮಸ್ಥರು ಸ್ಥಳಕ್ಕೆ ತೆರಳಿ ಅರಣ್ಯಾಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ನರಹಂತಕ ಹುಲಿಯನ್ನು ಸೆರೆ ಹಿಡಿಯುವ ನಾಟಕ ಬೇಡ, ಶೀಘ್ರ ಅದರ ಹತ್ಯೆಗೆ ಆದೇಶ ನೀಡಿ ಎಂದು ಎಸಿಎಫ್‌ ರವಿಕುಮಾರ್‌ ರನ್ನು ಆಗ್ರಹಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಅಧಿಕಾರಿಗಳು 48 ಗಂಟೆಯೊಳಗಾಗಿ ಹುಲಿಯನ್ನು ಹುಡುಕುವ ಪ್ರಯತ್ನ ಮಾಡುತ್ತೇವೆ. ಸಾಧ್ಯವಾಗದಿದ್ದರೆ ಶೂಟೌಟ್ ಮಾಡುತ್ತೇವೆಂಬ ಭರವಸೆ ನೀಡಿದ್ದರು.

ಆದರೆ ಅರಣ್ಯ ಅಧಿಕಾರಿಗಳ ಈ ನಿರ್ಧಾರ ಪ್ರಾಣಿ ಪ್ರಯರ ಆಕ್ರೋಶಕ್ಕೆ ಕಾರಣವಾಗಿತ್ತು. ಹುಲಿಯನ್ನು ಕೊಲ್ಲುವ ಬದಲಾಗಿ ಸೆರೆ ಹಿಡಿಯಿರಿ ಎಂದು ಒತ್ತಾಯಿಸಿದ್ದರು. ಸದ್ಯ ಕರ್ನಾಟಕ ಅರಣ್ಯ ಸಚಿವ ಅರಣ್ಯ ಸಚಿವ ಸಿ.ಸಿ.ಪಾಟೀಲ್ ಪ್ರಾಣಿ ಪ್ರಿಯರ ಈ ಮೊರೆಯನ್ನಾಲಿಸಿದ್ದು, ಹುಲಿ ಕೊಲ್ಲುವುದು ಬೇಡ, ಕಾರ್ಯಾಚರಣೆ ಮೂಲಕ ಸೆರೆ ಹಿಡಿಯಿರಿ ಎಂದಿದ್ದಾರೆ. ಅಲ್ಲದೇ ಹುಲಿ ದಾಳಿಯಲ್ಲಿ ಮೃತಪಟ್ಟ ಶಿವಲಿಂಗಪ್ಪ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದಿದ್ದಾರೆ.

ಅಕ್ಟೋಬರ್ 9ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;

click me!