
ಚಿಕ್ಕಮಗಳೂರು (ಫೆ.25): ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉತ್ತಮ ಕೆಲಸ ಮಾಡಿದ್ದಾರೆ. ಕಳೆದ ಬಾರಿ 3.50 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಅದಕ್ಕಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ ಯಾವುದೇ ಅನುಮಾನ ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
'ಶೋಭಾ ಗೋಬ್ಯಾಕ್' ಅಭಿಯಾನ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಚಿಕ್ಕಮಗಳೂರಿನ ಪ್ರತಿಕ್ರಿಯಿಸಿ ಅವರು, ಶೋಭಾ ವಿರುದ್ಧ ವ್ಯವಸ್ಥಿತವಾಗಿ ಪಿತೂರಿ, ಷಡ್ಯಂತ್ರ ನಡೆಸಲಾಗುತ್ತಿದೆ. ಯಾರು ಮಾಡಿಸುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವಂತದ್ದೆ. ಆದರೆ ಶೋಭಾ ಯಾವುದಕ್ಕೂ ಧೃತಿಗೆಡುವುದಿಲ್ಲ ಎಲ್ಲವನ್ನೂ ಫೇಸ್ ಮಾಡ್ತಾರೆ. ಸಚಿವೆಯಾಗಿ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ ಎಂದರು.
ಗೋ ಬ್ಯಾಕ್ ಶೋಭಾ, ರಾಜಕಾರಣದಲ್ಲಿ ಇದೆಲ್ಲ ಇರುವಂತದ್ದೆ, ಫೇಸ್ ಮಾಡ್ತೇನೆ: ಸಚಿವೆ ಕರಂದ್ಲಾಜೆ
ಪ್ರಧಾನಿ ನರೇಂದ್ರ ಮೋದಿಯಿಂದಾಗಿ ದೇಶ, ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಈ ಬಾರಿ ನಾವು 28ಕ್ಕೆ 28 ಸ್ಥಾನ ಗೆಲ್ಲಬೇಕು ಎಂದು ಪ್ರಯತ್ನ ಮಾಡುತ್ತಿದ್ದೇವೆ. ಗೆಲ್ಲುವ ವಾತಾವರಣವಿದೆ ಎಂದರು. ಇದೇ ವೇಳೆ ಮಂಡ್ಯ ಲೋಕಸಭಾ ಚುನಾವಣೆ ಟಿಕೆಟ್ ಗೊಂದಲ ಕುರಿತಂತೆ ಮಾಧ್ಯಮಗಳ ಕೇಳಿದ ಪ್ರಶ್ನೆಗೆ, ಮಂಡ್ಯದ ಬಗ್ಗೆ ಇನ್ನೂ ಯಾವುದೇ ಚರ್ಚೆ ಆಗಿಲ್ಲ. ಇಂದು ನಾಳೆ ಗೊತ್ತಾಗುತ್ತೆ ಎಂದರು.
ಅಧಿಕಾರಕ್ಕಾಗಿ ಬಿಜೆಪಿಗೆ ಬಂದವರಿಂದ ಅಪಪ್ರಚಾರ; 'ಗೋಬ್ಯಾಕ್ ಶೋಭಾ' ಅಭಿಯಾನಕ್ಕೆ ಕೇಂದ್ರ ಸಚಿವೆ ಕರಂದ್ಲಾಜೆ ತಿರುಗೇಟು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ