ಮಾಜಿ ಸಿಎಂ ಯಡಿಯೂರಪ್ಪ ಕಾಲಿಗೆ ಗಾಯ: ಹೆಲಿಕಾಪ್ಟರ್‌ ಹತ್ತುವಾಗ ಉಳುಕಿದ ಕಾಲು, ನಡೆಯಲಾಗದೇ ಪರದಾಟ

By Sathish Kumar KHFirst Published Oct 15, 2023, 7:34 PM IST
Highlights

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೆಲಿಕಾಪ್ಟರ್‌ ಹತ್ತುವಾಗ ಕಾಲು ಉಳುಕಿದ್ದು, ನಡೆಯಲಾಗದೇ ಪರದಾಡುತ್ತಿದ್ದಾರೆ.

ರಾಯಚೂರು (ಅ.15): ರಾಜ್ಯದ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರದಿಂದ ರಾಯಚೂರು ನಗರಕ್ಕೆ ಹೆಲಿಕಾಪ್ಟರ್‌ನಲ್ಲಿ ಹೋಗುವಾಗ ಕಾಲು ಉಳುಕಿದೆ. ಹೆಲಿಕಾಪ್ಟರ್‌ ಹತ್ತುವಾಗ ಕಾಲು ಉಳುಕಿದ್ದು, ನಂತರ ಹೆಲಿಕಾಪ್ಟರ್‌ ಇಳಿಯಲಾಗದೇ ಪರದಾಡಿದ ಪ್ರಸಂಗ ನಡೆದಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಯಸ್ಸಾಗಿರುವ ಹಿನ್ನೆಲೆಯಲ್ಲಿ ಹೆಚ್ಚಾಗಿ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ದೂರದ ಪ್ರಯಾಣವನ್ನೂ ಮಾಡುವುದಿಲ್ಲ. ವಯೋಸಹಜವಾಗಿ ಸ್ನಾಯು ಹಾಗೂ ಕೀಲು- ಮೂಳೆಗಳಲ್ಲಿ ಶಕ್ತಿ ಕುಂದಿದ್ದು ಮೊದಲಿನಂತೆ ಸಕ್ರಿಯವಾಗಿ ರಾಜಕೀಯದಲ್ಲಿ ಭಾಗವಹಿಸುತ್ತಿಲ್ಲ. ಆದರೆ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಲವೆಡೆ ರಾಜ್ಯ ಸಂಚಾರ ಮಾಡಿ ಪಕ್ಷದ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಬೆಂಗಳೂರು: ಮನೆ ಕಟ್ಟೋ ಮರಳಲ್ಲಿ ಶವ ಹೂತಿಟ್ಟ ಕಿರಾತಕರು, ಮೃತದೇಹ ಗುರುತೇ ಸಿಕ್ತಿಲ್ಲ

ಅದೇ ರೀತಿ ಇಂದು ಮಧ್ಯಾಹ್ನ ಭದ್ರತಾ ಸಿಬ್ಬಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರದಿಂದ ಹೆಲಿಕಾಪ್ಟರ್‌ನಲ್ಲಿ ರಾಯಚೂರು ಜಿಲ್ಲೆಯ ಲಿಂಗಸಗೂರಿಗೆ ತೆರಳುವಾಗ ಘಟನೆ ನಡೆದಿದೆ. ಶಿಕಾರಿಪುರದಲ್ಲಿ ಹೆಲಿಕಾಪ್ಟರ್‌ ಹತ್ತುವಾಗ ಯಡಿಯೂರಪ್ಪ ಅವರ ಕಾಲು ಉಳುಕಿದೆ. ಇದಾದ ನಂತರ ಹೆಲಿಕಾಪ್ಟರ್‌ನಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ವಿಶ್ರಾಂತಿ ಪಡೆದಿದ್ದಾರೆ. ನಂತರ ಲಿಂಗಸಗೂರಿನಲ್ಲಿ ಇಳಿಯುವಾಗ ಕಾಲಿಗೆ ಪೆಟ್ಟು ಆಗಿದೆ ಎಂದು ತಿಳಿಸಿದ್ದಾರೆ. ಆಗ ಸಹಾಯಕರೊಂದಿಗೆ ಇಳಿಯಲು ಪ್ರಯತ್ನಿಸಿದರೂ ತೀವ್ರ ನೋವಿನಿಂದ ಕಾಲೂರಲೂ ಸಾಧ್ಯವಾಗದೇ ಪರದಾಡಿದ್ದಾರೆ.

ಕನ್ನಡ ನಾಡಿನ ಹೆಸರಾಂತ ಆಹಾರ ತಜ್ಞ ಕೆ.ಸಿ. ರಘು ಇನ್ನಿಲ್ಲ: 
ಬೆಂಗಳೂರು (ಅ.15): ಕನ್ನಡ ನಾಡಿನ ಹೆಸರಾಂತ ಆಹಾರ ತಜ್ಞ ಕೆ.ಸಿ ರಘು ಅನಾರೋಗ್ಯದಿಂದ ಭಾನುವಾರ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ ವಾಸವಿದ್ದ ರಘು ಅವರಿಗೆ 60 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜೊತೆಗೆ, ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದರು. ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಬೆಳಗ್ಗೆ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಮಾಹಿತಿ ನೀಡಿದ್ದಾರೆ. ಕೆ.ಸಿ. ರಘು ಅವರು ಹಲವು ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ.

ಕಳ್ಳನ ಮನಸ್ಸು ಹುಳ್ಳುಳ್ಳಗೆ ಗಾದೆ ಡಿಕೆ ಬ್ರದರ್ಸ್‌ಗೆ ಅನ್ವಯವಾಗುತ್ತೆ: ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯ

ರಘು ಅವರು ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿ ಕೆಲಸ ಮಾಡಿದ್ದು, ಆಹಾರ ಆರೋಗ್ಯದ ವಿಚಾರದಲ್ಲಿ ಉತ್ತಮ ಜ್ಞಾನ ಹೊಂದಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಆರೋಗ್ಯ ಸಂಬಂಧಿತ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ರಘು ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಯಾವುದೇ ವೇದಿಕೆಗಳಲ್ಲಿ ನಿರರ್ಗಳವಾಗಿ ಮಾತನಾಡ್ತಿದ್ದ ಕೆ.ಸಿ. ರಘು ಅವರು ಆಹಾರ ಆರೋಗ್ಯದ ವಿಚಾರದಲ್ಲಿಅತ್ಯದ್ಭುತ ಜ್ಞಾನ ಹೊಂದಿದ್ದರು. ಆದರೆ, ಚಿಕ್ಕ ವಯಸ್ಸಿಗೆ ಸಾವನ್ನಪ್ಪಿರುವುದು ನಾಡಿಗೆ ನಷ್ಟವಾಗಿದೆ. ಇನ್ನು ಈ ಬಗ್ಗೆ ಅವರ ಪತ್ನಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, "ಎ-40, 4ನೇ ಮಹಡಿ, ಬ್ರಿಗೇಡ್ ಕಲಾಡಿಯಂ (Brigade Caladium) ದಾಸರಹಳ್ಳಿ ಮೇನ್ ರೋಡ್, ಅಮೃತನಗರ, ದಾಸರಹಳ್ಳಿ, ಬೆಂಗಳೂರು - 560024. Mob- 98800 09140 ' ಎಂದು ಪೋಸ್ಟ್‌ ಮಾಡಿಕೊಂಡಿದ್ದಾರೆ.

click me!