ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು; ಕಲಾಪದಲ್ಲೂ ಭಾಗವಹಿಸಲಾಗಲಿಲ್ಲ!

By Sathish Kumar KH  |  First Published Feb 28, 2024, 3:56 PM IST

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ  ಜಯನಗರ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಬೆಂಗಳೂರು (ಫೆ.28): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ವಿಧಾನಸೌಧ ಅಧಿವೇಶನದ ಕಲಾಪದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಗಂಟಲು ನೋವು ಕಾಣಿಸಿಕೊಂಡಿದ್ದು, ನೇರವಾಗಿ ಅಲ್ಲಿಂದ ಜಯನಗರ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯಸಭಾ ಚುನಾವಣೆ ಮುಕ್ತಾಯದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದ್ದ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಗಂಟಲು ನೋವು ಕಾಣಿಸಿಕೊಂಡಿದೆ. ಅಂದರೆ, ಇದಕ್ಕೂ ಮುನ್ನ ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ಗಂಟಲು ಇನ್ಫೆಕ್ಷನ್‌ನಿಂದ ಬಳಲುತ್ತಿದ್ದರು. ಇನ್ನು ವಿಧಾನಸಭಾ ಕಲಾಪದಲ್ಲಿ ಪಾಲ್ಗೊಂಡು ಮಾತನಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದಾರೆ.

Tap to resize

Latest Videos

ಅವ್ನಲ್ಲಾ.. ಅವ್ನಲ್ಲಾ.. ಇಲ್ಲಿದ್ದಾನೆ ನೋಡಿ, ಪಾಕ್ ಪರ ಘೋಷಣೆ ಕೂಗಿದ ಆರೋಪಿ; ಬಿಜೆಪಿ ಆರೋಪ

ಇನ್ನು ಆಸ್ಪತ್ರೆಯಲ್ಲಿ ರೆಗ್ಯೂಲರ್ ಚೆಕಪ್ ಮಾಡಿಸಿಕೊಂಡ ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಲ್ಲಿ ಕೆಲಹೊತ್ತು ಎಲ್ಲ ತಪಾಸಣೆಗಳನ್ನು ಮಾಡಿಸಿಕೊಂಡು ಚಿಕಿತ್ಸೆ ಪಡೆದಿದ್ದಾರೆ. ನಂತರ ಮಧ್ಯಾಹ್ನ 3.30ರ ವೇಳೆಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೆಲವು ದಿನಗಳವರೆಗೆ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಇದರ ಹೊರತಾಗಿ ಆರೋಗ್ಯದಲ್ಲಿ ಯಾವುದೇ ಸಮಸ್ಯೆಗಳು ಕಾಣಿಸಿಕೊಂಡಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಆತ್ಮಸಾಕ್ಷಿ ಮತ ಎನ್ನುವ ಪದವನ್ನು ದೇಶದಲ್ಲಿ ಮೊದಲು ಹುಟ್ಟು ಹಾಕಿದ್ದೇ . ಆತ್ಮಸಾಕ್ಷಿ ಮತ ಎಂದರೆ ಅಡ್ಡಮತ ಎಂದೇ ಅರ್ಥ. 1969ರಲ್ಲಿ ಅಂದಿನ ಪ್ರಧಾನಿಗಳಾದ ಶ್ರೀಮತಿ ಇಂದಿರಾ ಗಾಂಧಿ ಅವರು ತಮ್ಮ ಕೈಗೊಂಬೆ ರಾಷ್ಟ್ರಪತಿ ಬೇಕೆಂದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿದ್ದ ಶ್ರೀ ನೀಲಂ ಸಂಜೀವರೆಡ್ಡಿ ಅವರ ವಿರುದ್ಧ ಶ್ರೀ ವಿ.ವಿ.ಗಿರಿ… pic.twitter.com/Q5RVVpAFs1

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)
click me!