ಆಸ್ಪತ್ರೆಯಿಂದಲೇ ಕಾವೇರಿ ಹೋರಾಟಕ್ಕೆ ಕರೆಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ

Published : Sep 01, 2023, 11:04 AM ISTUpdated : Sep 01, 2023, 11:06 AM IST
ಆಸ್ಪತ್ರೆಯಿಂದಲೇ ಕಾವೇರಿ ಹೋರಾಟಕ್ಕೆ ಕರೆಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ

ಸಾರಾಂಶ

ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಆಸ್ಪತ್ರೆಯಲ್ಲಿದ್ದುಕೊಂಡೇ ಕಾವೇರಿ ನೀರು ಉಳಿವಿಗಾಗಿ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ.

ಬೆಂಗಳೂರು (ಸೆ.01): ರಾಜ್ಯಾದ್ಯಂತ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ಈಗಾಗಲೇ ಕಾವೇರಿ ಹೋರಾಟ ಶುರುವಾಗಿದೆ. ಆದರೆ, ಜೆಡಿಎಸ್‌ ನಾಯಕ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಿಂದಲೇ ಜೆಡಿಎಸ್‌ ಪಕ್ಷದಿಂದ ಕಾವೇರಿ ಹೋರಾಟ ಆರಂಭಿಸುವಂತೆ ಕರೆ ನೀಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಐಸಿಯುನಿಂದ ಸಾಮಾನ್ಯ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ. ಇಂದು ಆರೋಗ್ಯ ವಿಚಾರಣೆಗೆ ತೆರಳಿದ್ದ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಅನ್ನದಾನಿ ಅವರೊಂದಿಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಕಾವೇರಿ ಹೋರಾಟದ ಕುರಿತು ಸುಧೀರ್ಗ ಚರ್ಚೆಯನ್ನು ಮಾಡಿದ್ದಾರೆ. ಇದಾದ ನಂತರ ಆಸ್ಪತ್ರೆಯಲ್ಲಿದ್ದುಕೊಂಡೇ ಕಾವೇರಿ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಚೇತರಿಕೆ: ಐಸಿಯುನಿಂದ ವಾರ್ಡ್‌ಗೆ ಶಿಫ್ಟ್‌

ಕಾವೇರಿ ನೀರು ಉಳಿವಿಗಾಗಿ ಹೋರಾಟಕ್ಕೆ ಕರೆ: ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ ಮಾಜಿ ಶಾಸಕ ಡಾ.ಕೆ. ಅನ್ನದಾನಿ ಅವರು, ನಾಳೆಯಿಂದ ಮಂಡ್ಯದಲ್ಲಿ ಜೆಡಿಎಸ್ ನಿಂದ ಕಾವೇರಿ ಚಳುವಳಿ ಆರಂಭಿಸಲಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಆಗಮಿಸಿದ್ದ ವೇಳೆ, ಸದ್ಯದ ಪರಿಸ್ಥಿತಿ ಕಾವೇರಿ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿದರು. ಅರ್ಧಗಂಟೆಗೂ ಹೆಚ್ಚು ಕಾಲ ನನ್ನೊಟ್ಟಿಗೆ ಮಾತನಾಡಿದ್ದಾರೆ. ಅವರು ಈಗ ಸಂಪೂರ್ಣವಾಗಿ ಆರೋಗ್ಯದಿಂದಿದ್ದಾರೆ. ಕಾವೇರಿ ನೀರು ಉಳಿವಿಗಾಗಿ ಹೋರಾಟ ಶುರು ಮಾಡಿ ಅಂತ ಕರೆ ಕೊಟ್ಟಿದ್ದಾರೆ ಎಂದು ತಿಳಿಸಿದರು.

ದೇವೇಗೌಡರ ನೇತೃತ್ವದಲ್ಲಿ ಕಾವೇರಿ ಹೋರಾಟ ಆರಂಭ: ಇನ್ನು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ದೇವೆಗೌಡರ ನೇತೃತ್ವದಲ್ಲಿ ನಾಳೆ ಕಾವೇರಿ ನೀರು ಉಳಿವಿಗಾಗಿ ಚಳುವಳಿ ಆರಂಭವಾಗಲಿದೆ. ಸದ್ಯದ ನೀರಿನ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಮುಂದಿನ ದಿನಗಳಲ್ಲಿ ಮಂಡ್ಯ ಸೇರಿದಂತೆ ಬೆಂಗಳೂರಿಗೂ ನೀರಿನ ಅಭಾವ ಎದುರಾಗಲಿದೆ. ಹೀಗಾಗಿ ಚಳುವಳಿ ಅಗತ್ಯವಿದೆ ಎಂದು ಕುಮಾರಣ್ಣ ಹೇಳಿದ್ದಾರೆ. ಅದರಂತೆ ನಾಳೆಯಿಂದ ಮಂಡ್ಯ ಸೇರಿದಂತೆ ಕಾವೇರಿ ಅಚ್ಚುಕಟ್ಟು ಪ್ರದೇಶದ ಎಲ್ಲೆಡೆ ಜೆಡಿಎಸ್‌ನಿಂದ ಚಳುವಳಿಯನ್ನು ಆರಂಭ ಮಾಡುತ್ತೇವೆ ಎಂದು ಜೆಡಿಎಸ್ ಮಾಜಿ ಶಾಸಕ ಅನ್ನದಾನಿ ಹೇಳಿದರು.

ಬೆಂಗಳೂರು (ಆ.31): ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯದ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ ಎಂದು ಅಪೊಲೋ ಆಸ್ಪತ್ರೆಯ ವೈದ್ಯರು ಆರೋಗ್ಯ ಬುಲೆಟಿನ್‌ ಮೂಲಕ ಮಾಹಿತಿ ನೀಡಿದ್ದಾರೆ. ಬುಧವಾರ ಮುಂಜಾನೆ 3.45 ವೇಳೆಗೆ ಆಸ್ಪತ್ರೆಗೆ ಬಂದಿದ್ದ ಕುಮಾರಸ್ವಾಮಿ ಅವರಿಗೆ ಸಣ್ಣ ಪ್ರಮಾಣದಲ್ಲಿ ಸ್ಟ್ರೋಕ್‌ ಆಗಿತ್ತು. ಈಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ.

ಕರ್ನಾಟಕದಲ್ಲಿ ಮಳೆ ಕೊರತೆ: ಬರ ತಾಲೂಕು ಘೋಷಣೆ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಿಷ್ಟು

ಹೃದಯದ ಎಡಭಾಗದ ರಕ್ತನಾಳ ಸಮಸ್ಯೆ: ಹೆಚ್‌.ಡಿ ಕುಮಾರಸ್ವಾಮಿಯವರ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿತ್ತು. ಇದರಿಂದಾಗಿ ಎಡಭಾಗಕ್ಕೆ ಮೈಲ್ಡ್ ಸ್ಟ್ರೋಕ್ ಆಗಿತ್ತು. ಆಸ್ಪತ್ರೆಗೆ ಬರುವಾಗ ಅವರ ಮಾತುಗಳು ತೊದಲುತ್ತಿತ್ತು. ತುಂಬಾ ಸುಸ್ತಾದವರಂತೆ ಕಾಣಿಸಿದ್ದರು. ಆಡ್ಮಿಟ್ ಆದ ಒಂದು ಗಂಟೆಯಲ್ಲೇ ಅವರ ಆರೋಗ್ಯ ಸ್ಥಿರವಾಗಿತ್ತು. ಅವರಿಗೆ ಇನ್ನೂ‌ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ, ಈಗ ಜನರಲ್‌ ವಾರ್ಡ್ ಗೆ ಶಿಫ್ಟ್ ಮಾಡಿದ್ದೇವೆ. ಇನ್ನೂ 2-3 ದಿನ ಆಸ್ಪತ್ರೆಯಲ್ಲಿಯೇ ಇರಬೇಕಾಗುತ್ತದೆ. ಈಗ ಅವರು ಎಲ್ಲರ ಜೊತೆಯಲ್ಲೂ ಮಾತನಾಡುತ್ತಿದ್ದಾರೆ. ಆರೋಗ್ಯವಾಗಿದ್ದಾರೆ ಯಾವುದೇ ತೊಂದರೆ ಇಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್