ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ. ಅವರು ಆರೋಗ್ಯವಾಗಿದ್ದಾರೆ ಎಂದು ಪುತ್ರ ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು (ಮಾ.21): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷದ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹೆ.ಡಿ. ಕುಮಾರಸ್ವಾಮಿ ಅವರು ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಧ್ಯಾಹ್ನದ ವೇಳೆಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ತಮ್ಮ ತಂದೆ ಆರೋಗ್ಯವಾಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ನಿಖಿಲ್ ಅವರು, 'ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು. ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಹೃದಯ ಸರ್ಜರಿ: ಚೆನ್ನೈ ಆಸ್ಪತ್ರೆಗೆ ಕುಮಾರಸ್ವಾಮಿ ದಾಖಲು
ಮುಂದುರೆದು, 'ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ' ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ಸರ್ಜರಿ ಏಕೆ?:
ಶಸ್ತ್ರಚಿಕಿತ್ಸೆ ಕುರಿತು ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ಹೃದಯ ಸಂಬಂಧಿ ಸಮಸ್ಯೆ ನನಗೆ ಹುಟ್ಟಿದ್ದಾಗಿನಿಂದಲೂ ಇದೆ. ಈ ಹಿನ್ನೆಲೆಯಲ್ಲಿ ಎರಡೂ ಬಾರಿ ಟಿಶ್ಯೂ ವಾಲ್ವ್ ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಎರಡು ರೀತಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಇಂದು ಟಿಶ್ಯೂ ವಾಲ್ವ್, ಮತ್ತೊಂದು ಮೆಟಾಲಿಕ್ ವಾಲ್ವ್ ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಮೆಟಾಲಿಕ್ ವಾಲ್ವ್ ಹಾಕಿದ್ದರೆ 20-25 ವರ್ಷ ಸಮಸ್ಯೆ ಇರುತ್ತಿರಲಿಲ್ಲ. ಆದರೆ, ನನ್ನ ರಾಜಕೀಯ ಜೀವನದಲ್ಲಿ ಬಿಡುವಿಲ್ಲದ ಜೀವನ ಶೈಲಿಯಿಂದಾಗಿ ಟಿಶ್ಯೂ ವಾಲ್ವ್ ಹಾಕಿದ್ದರು.
ಕುಮಾರಸ್ವಾಮಿ ಬರುವ ಮುಂಚೆಯೇ ನಾನು ಶಾಸಕನಾಗಿದ್ದೆ: ಬಾಲಕೃಷ್ಣ
ಈ ಜೀವನಶೈಲಿಯ ಒತ್ತಡದಿಂದಾಗಿ 6 ವರ್ಷಕ್ಕೆ ಹಾಳಾಗಿದೆ. ಈ ಬಾರಿ ಅಡ್ವಾನ್ಸ್ಡ್ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಅಮೆರಿಕದಿಂದ ವೈದ್ಯರೊಬ್ಬರು ಬಂದು ಚಿಕಿತ್ಸೆ ನೀಡಲಿದ್ದಾರೆ. ಅವರ ಬಾವ, ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಬುಧವಾರ ಚೆನ್ನೈಗೆ ತೆರಳಲಿದ್ದು, ಕುಮಾರಸ್ವಾಮಿ ಆರೋಗ್ಯದ ಮೇಲೆ ನಿಗಾ ವಹಿಸಲಿದ್ದಾರೆ.
ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು.
ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ…