Latest Videos

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು

By Kannadaprabha NewsFirst Published May 24, 2024, 10:25 AM IST
Highlights

ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ (ಮೇ.24): ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಯಿತು.

ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

 

ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದ ಬಂಗಾರಪ್ಪ: ಕಾಗೋಡು ತಿಮ್ಮಪ್ಪ

click me!