ಮುಂದಿನ ದಿನಗಳಲ್ಲಿ ಇನ್ನೂ 500 ಜನೌಷಧಿ ಮಳಿಗೆ ಸ್ಥಾಪನೆ: ಸಚಿವ ಸುಧಾಕರ್‌

By Govindaraj SFirst Published Nov 13, 2022, 7:46 AM IST
Highlights

ಪ್ರಧಾನ ಮಂತ್ರಿ ಜನೌಷಧಿ ಕಾರ್ಯಕ್ರಮ ಜಾರಿಯಲ್ಲಿ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಹೊಸದಾಗಿ 500 ಜನೌಷಧಿ ಮಳಿಗೆಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಬೆಂಗಳೂರು (ನ.13): ಪ್ರಧಾನ ಮಂತ್ರಿ ಜನೌಷಧಿ ಕಾರ್ಯಕ್ರಮ ಜಾರಿಯಲ್ಲಿ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಹೊಸದಾಗಿ 500 ಜನೌಷಧಿ ಮಳಿಗೆಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು, ಬಡವರು, ಹಿಂದುಳಿದ ಮತ್ತು ಮಧ್ಯಮವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧಗಳು ಮತ್ತು ಶಸ್ತ್ರಚಿಕಿತ್ಸೆಯ ಪರಿಕರಗಳನ್ನು ಒದಗಿಸುವಲ್ಲಿ ಪ್ರಧಾನಮಂತ್ರಿ ಜನೌಷಧಿ ಕಾರ್ಯಕ್ರಮ ಅತ್ಯುತ್ತಮವಾಗಿದೆ. ರಾಜ್ಯದಲ್ಲಿ ಉತ್ತಮವಾಗಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಈವರೆಗೆ 1,052 ಮಳಿಗೆಗಳನ್ನು ತೆರೆಯಲಾಗಿದೆ. ಇಡೀ ದೇಶದಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇರಳ ಮೂರನೇ ಸ್ಥಾನದಲ್ಲಿದೆ ಎಂದರು.

8 ತಿಂಗಳು ಕೋಮಾದಲ್ಲಿದ್ದ ರೋಗಿ ಗುಣಮುಖ: ವೈದ್ಯರ ಕಾರ್ಯಕ್ಕೆ ಸುಧಾಕರ್‌ ಶ್ಲಾಘನೆ

ಸಾರ್ವಜನಿಕರು ಆರೋಗ್ಯಕ್ಕಾಗಿ ಮಾಡುತ್ತಿರುವ ವೆಚ್ಚ ಜನೌಷಧಿ ಮಳಿಗೆಗಳಿಂದ ಗಣನೀಯವಾಗಿ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಹೊಸದಾಗಿ ಮತ್ತೆ 500 ಮಳಿಗೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 40 ಹೊಸ ಮಳಿಗೆಗಳಿಗೆ ಅನುಮತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯಲು ಸರ್ಕಾರ ಕಾರ್ಯೋನ್ಮುಖವಾಗಿದೆ. ಈ ವರ್ಷದ ಫೆಬ್ರವರಿ ನಂತರ ಸುಮಾರು 300 ಮಳಿಗೆಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಜನೌಷಧಿಗಳು ಬ್ರಾಂಡೆಡ್‌ ಆಗಿದ್ದು, ಮಾರುಕಟ್ಟೆಗಿಂತ ಶೇ.50 ರಿಂದ 80 ರಷ್ಟು ಅಗ್ಗದ ದರದಲ್ಲಿ ದೊರೆಯುತ್ತಿವೆ. ಒಟ್ಟು 1451 ಔಷಧಗಳು ಮತ್ತು 240 ಶಸ್ತ್ರಚಿಕಿತ್ಸೆ ಪರಿಕರಗಳು, ದುಬಾರಿ ವೆಚ್ಚದ ಕ್ಯಾನ್ಸರ್‌ ಔಷಧಗಳು ಸಹ ಇಲ್ಲಿ ದೊರೆಯುತ್ತಿವೆ. ಹೀಗಾಗಿ, ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಿಂದಲೂ ಜನೌಷಧಿ ಮಳಿಗೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆರೆಯಲು ಒತ್ತಡವಿದೆ. ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಎಂಬ ಗ್ರಾಮದಲ್ಲೂ ಜನೌಷಧಿ ಮಳಿಗೆ ತೆರೆದಿರುವುದು ವಿಶೇಷವಾಗಿದ್ದು, ಬೇಡಿಕೆಗೆ ಅನುಗುಣವಾಗಿ ಹೊಸ ಮಳಿಗೆಗಳಿಗೆ ಮಂಜೂರಾತಿ ನೀಡಲಾಗುತ್ತಿದೆ ಎಂದರು.

ಕಾಂಗ್ರೆಸ್‌ ಬಲಹೀನ ವರ್ಗಗಳ ಮೀಸಲು ಹೆಚ್ಚಿಸಲಿಲ್ಲ: ಸಚಿವ ಸುಧಾಕರ್‌

ಮಳಿಗೆ ಆರಂಭಕ್ಕೆ ಪ್ರೋತ್ಸಾಹ ಧನ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ಪ್ರಾರಂಭಿಸಲು ಉದ್ದೇಶ ಹೊಂದಿರುವ ಫಾರ್ಮಸಿ ಪದವೀಧರರಿಂದ ಮಳಿಗೆಗಳನ್ನು ತೆರೆಯಲು ಹೆಚ್ಚಿನ ಬೇಡಿಕೆ ಬರುತ್ತಿದೆ. ಸ್ವಾಯತ್ತ ಸಂಸ್ಥೆಗಳಿಗೆ 120 ಚದರ ಅಡಿ ಸ್ಥಳವನ್ನು ಉಚಿತವಾಗಿ ನೀಡಲಾಗುತ್ತಿದೆ. ಬ್ಯೂರೋ ಆಫ್‌ ಫಾರ್ಮಸಿ ಪಬ್ಲಿಕ್‌ ಸೆಕ್ಟರ್‌ ಯೂನಿಟ್ಸ್‌ ಆಫ್‌ ಇಂಡಿಯಾ (ಬಿಪಿಪಿಐ) ಪ್ರತಿಯೊಂದು ಜನೌಷಧಿ ಮಳಿಗೆ ಪ್ರಾರಂಭಿಸಲು ಪ್ರೋತ್ಸಾಹಧನವನ್ನು ನೀಡುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

click me!