ಕುಡಿಯುವ ನೀರಿಗಾಗಿ ಕೇಳಿದಷ್ಟು ಹಣ ಕೊಟ್ಟ ಸರ್ಕಾರ: ತಾತ್ಕಾಲಿಕ ವ್ಯವಸ್ಥೆಗೆ 6 ಕೋಟಿ ರೂ. ಬಿಡುಗಡೆ

By Sathish Kumar KHFirst Published Jul 23, 2023, 4:25 PM IST
Highlights

ರಾಜ್ಯದಲ್ಲಿ ಮಳೆಗಾಲದ ನಡುವೆಯೂ ಕೆಲವು ತಾಲೂಕುಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದ್ದು, ನೀರಿನ ಪೂರೈಕೆಗಾಗಿ ಸರ್ಕಾರ 6 ಕೋಟಿ ರೂ. ಅನುದಾನ ನೀಡಿದೆ.

ಬೆಂಗಳೂರು (ಜು.23): ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್‌ ಇಲಾಖೆಯ ವತಿಯಿಂದ ಎಲ್ಲಾ ಜಿಲ್ಲೆಗಳ CEOಗಳ ನೇತೃತ್ವದಲ್ಲಿ ತಯಾರಾದ ನಿಯೋಜಿತ ರೂಪುರೇಷೆ (ಕಂಟೆನೆನ್ಸಿ ಪ್ಲಾನ್) ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆಯಿಂದ ಸರ್ಕಾರದ ವತಿಯಿಂದ 5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಇದರಿಂದ, ಈ ಹಿಂದೆ ಒದಗಿಸಿದ್ದ 1 ಕೋಟಿ ಹಣ ಸೇರಿದಂತೆ ಸರ್ಕಾರ ಈವರೆಗೂ ಒಟ್ಟು 6.14 ಕೋಟಿ ಹಣ ನೀಡಿದಂತಾಗಿದೆ.

ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದು ಹಲವು ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ರಾಜ್ಯದಲ್ಲಿ ಬರದ ಛಾಯೆ ಎದುರಾಗುವ ಮುನ್ನವೇ ಎಲ್ಲಾ ಜಿಲ್ಲೆಗಳ ಕಾರ್ಯನಿರ್ವಾಹಕ ಅಧಿಕಾರಿಗಳ (CEOಗಳ) ಸಭೆ ಕರೆದು ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.

Latest Videos

ನಾಳೆಯಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆ: ಕರಾವಳಿ ಜನರೇ ಮೀನುಗಾರಿಕೆಗೆ ಹೋಗಬೇಡಿ

ಕಂಟಿನ್ನನ್ಸಿ ಪ್ಲಾನ್ ಆಧರಿಸಿ ನೀರಿನ ಸಮಸ್ಯೆಗೆ ಪರಿಹಾರ: ಈ ಬಗ್ಗೆ ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿ 2 ಸಭೆಗಳನ್ನು ನಡೆಸಿ ಕುಡಿಯುವ ನೀರಿನ ಸಮನ್ವಯ ಬಗ್ಗೆ ಸ್ಪಷ್ಟ ಚಿತ್ರಣ ರೂಪಿಸಿದ. ರಾಜ್ಯದ ಜನತೆಗೆ ಕುಡಿಯುವ ನೀರಿನ ಸಮಸ್ಯೆ, ಎದುರಾಗದಂತೆ ನೋಡಿಕೊಳ್ಳುತ್ತೇವೆ ಎಂದು ಶಾಸನ ಸಭೆಯಲ್ಲೂ ಸರ್ಕಾರ ಪುನರುಚ್ಚರಿಸಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ವತಿಯಿಂದ ಎಲ್ಲಾ ಜಿಲ್ಲೆಗಳ CEOಗಳೊಂದಿಗೆ ಕಳೆದ ಒಂದು ತಿಂಗಳಲ್ಲಿ 2 ವಿಸ್ತ್ರತ ಸಭೆ ನಡೆಸಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಪೂರ್ವ ನಿಯೋಜಿತ ರೂಪುರೇಷೆಯನ್ನ (ಕಂಟಿನ್ನನ್ಸಿ ಪ್ಲಾನ್) ತಯಾರಿಸುವಂತೆ ಸೂಚನೆ ನೀಡಲಾಗಿತ್ತು. 

ಸಂಪುಟ ಸಮಿತಿ ವರದಿ ಆಧರಿಸಿ ಹಣ ಬಿಡುಗಡೆ:  ಇದೀಗ ಆ ವರದಿ ಪ್ರಕಾರ ಜಿಲ್ಲಾವಾರು ಎಷ್ಟು ತಾಲೂಕುಗಳಲ್ಲಿ ಮಳೆಯಾಗಿದೆ? ಎಷ್ಟು ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ? ಎಲ್ಲೆಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕ್ಷೀಣಿಸುತ್ತಿದೆ. ಯಾವ ಹಳ್ಳಿಗಳಿಗೆ ಕುಡಿಯುವ ನೀರನ್ನು ಟ್ಯಾಂಕ‌ ಅಥವಾ ಬಾಡಿಗೆ ಬೋರ್ ವೆಲ್ ಮೂಲಕ ಒದಗಿಸಬೇಕು ಎಂಬುದನ್ನ ಸಂಪೂರ್ಣವಾಗಿ ಪರಿಶೀಲಿಸಿ ಅಧಿಕಾರಿಗಳಿಂದ ವರದಿ ಸಿದ್ದಪಡಿಸಿ ಹಣ ಬಿಡುಗಡೆ ಮಾಡಲಾಗಿದೆ. ಈ ಮೂಲಕ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕ ದೂರುಗಳು ಬಾರದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.

ಪ್ರದೀಪ್ ಈಶ್ವರ್ ಅವರೇ ತುಂಬಾ ದೊಡ್ಡ ವ್ಯಕ್ತಿಯಾದ್ರಿ; ಬಿಗ್‌ಬಾಸ್‌ ಖ್ಯಾತಿಯ ರೂಪೇಶ್‌ ರಾಜಣ್ಣ

ನಿತ್ಯ 703 ಟ್ಯಾಂಕರ್‌ಗಳ ಮೂಲಕ ನೀರು:  ಈ ವರದಿಯಲ್ಲಿ ನೀಡಿರುವಂತೆ ಒಟ್ಟು 101 ತಾಲೂಕುಗಳ 366 ಗ್ರಾಮ ಪಂಚಾಯತಿಗಳಲ್ಲಿ 514 ಹಳ್ಳಿಗಳಿಗೆ 254 ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ ಮಾಡಲಾಗುವುದು. ಒಟ್ಟು ರಾಜ್ಯಾದ್ಯಂತ ಟ್ಯಾಂಕರ್ ಗಳಲ್ಲಿ ಪ್ರತಿ ದಿನ 703 ಟ್ರಿಪ್ ಗಳ ಮೂಲಕ ಕುಡಿಯುವ ನೀರನ್ನ ಪೂರೈಕೆ ಮಾಡಲಾಗುವುದು. ಜೊತೆಗೆ 465 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆದು ಕುಡಿಯುವ ನೀರನ್ನು ಜನರಿಗೆ ಸರಬರಾಜು ಮಾಡಲೂ ಹಣ ಒದಗಿಸಲಾಗಿದೆ. ಒಟ್ಟು ಟ್ಯಾಂಕರ್ ನೀರು ಪೂರೈಕೆಗೆ 4.21 ಕೋಟಿ ರೂ. ಹಣವನ್ನ ನೀಡಲಾಗಿದ್ದು, ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಪಡೆಯಲು 93 ಲಕ್ಷ ಹಣವನ್ನ ನೀಡಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುನ್ನಚ್ಚರಿಕೆಯಿಂದ ಸರ್ಕಾರ ಸರ್ವ ಸನ್ನದ್ಧವಾಗಿದೆ.

click me!